AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exams 2023: ಎಸ್​ಎಸ್​ಎಲ್​ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ! ಸಾಮಾಜಿಕ ಜಾಲತಾಣದಲ್ಲಿ ವೈರಲ್

ರಾಜ್ಯಾದ್ಯಂತ ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭಗೊಂಡಿವೆ. ಪರೀಕ್ಷೆಯ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಶ್ನೆ ಪತ್ರಿಕೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

SSLC Exams 2023: ಎಸ್​ಎಸ್​ಎಲ್​ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ! ಸಾಮಾಜಿಕ ಜಾಲತಾಣದಲ್ಲಿ ವೈರಲ್
ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ
Rakesh Nayak Manchi
|

Updated on:Mar 31, 2023 | 12:18 PM

Share

ಕಲಬುರಗಿ: ರಾಜ್ಯಾದ್ಯಂತ ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು (SSLC Exams 2023) ಆರಂಭಗೊಂಡಿದ್ದು, ಪರೀಕ್ಷೆಯ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ (Kannada question paper leak) ಶಂಕೆ ವ್ಯಕ್ತವಾಗಿದೆ. ಪ್ರಶ್ನೆ ಪತ್ರಿಕೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Question paper viral) ಆಗುತ್ತಿದೆ. ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ವಾಟ್ಸ್ ಆ್ಯಪ್​ನಲ್ಲಿ ವೈರಲ್ ಮಾಡಿದ್ದಾರೆ. ಆದರೆ ಈವರೆಗೆ ಯಾವುದೇ ಅಧಿಕಾರಿಗಳು ಪ್ರಶ್ನೆ ಪತ್ರಿಕೆ ಸೋರಿಯಾಗಿರುವ ಬಗ್ಗೆ ಖಚಿತಪಡಿಸಿಲ್ಲ. ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಆರಂಭವಾಗಿದ್ದು, ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಇಂದಿನಿಂದ ಆರಂಭವಾದ ಪರೀಕ್ಷೆಗಳು ಏಪ್ರಿಲ್​ 15ರವರೆಗೆ ನಡೆಯಲಿವೆ.

ರಾಜ್ಯಾದ್ಯಂತ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (Prohibitory) ಜಾರಿಗೊಳಿಸಲಾಗಿದೆ.​ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್​ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ಫೋನ್, ಸ್ಮಾರ್ಟ್‌ವಾಚ್​​, ಇಯರ್‌ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣ ತರುವಂತಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯಾದ್ಯಂತ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಇದನ್ನೂ ಓದಿ: SSLC Exams: ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು; ಪರೀಕ್ಷೆ ಮಕ್ಕಳಿಗೆ, ಆತಂಕ ಪೋಷಕರಿಗೆ!

ವಿದ್ಯಾರ್ಥಿಗಳು ಹಾಗೂ ಪೋಷಕರ ಅನುಕೂಲಕ್ಕಾಗಿ ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ಕುರಿತಾದ ಯಾವುದೇ ಗೊಂದಲ ಮಾಹಿತಿಗೆ 080 -23310075/76 ಸಂಪರ್ಕಿಸಬಹುದಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದೀಗ ಎಸ್​​ಎಸ್​ಎಲ್​ಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಘೋಷಿಸಿದೆ. ಏಪ್ರಿಲ್ 15ರ ವರೆಗೆ ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಉಚಿತವಾಗಿ ಸಂಚರಿಸಬಹುದು. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳಲ್ಲಿಯೂ ಹಾಲ್ ಟಿಕೆಟ್ ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ಹೋಗಬಹುದಾಗಿದೆ. ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಈ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ನಿಗಮಗಳು ತಿಳಿಸಿವೆ. ಪರೀಕ್ಷಾ ಕೇಂದ್ರಗಳ ಬಳಿಯೇ ಬಸ್​ ನಿಲುಗಡೆ ನೀಡುವಂತೆ ಮತ್ತು ಕೋರಿಕೆಯ ನಿಲುಗಡೆ ನೀಡುವಂತೆ ಚಾಲಕರಿಗೆ ಸೂಚನೆ ನೀಡಲಾಗಿದೆ.

ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Fri, 31 March 23

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ