Karnataka SSLC Exams: ನಾಳೆಯಿಂದ ಏಪ್ರಿಲ್ 15ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ; ಪೋಷಕರು, ವಿದ್ಯಾರ್ಥಿಗಳು ನೆನಪಲ್ಲಿಇಟ್ಟುಕೊಳ್ಳಬೇಕಾದ ಮಾಹಿತಿ
ರಾಜ್ಯಾದ್ಯಂತ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಎಸ್ಎಸ್ಎಲ್ಸಿ (Karnataka SSLC Exams) ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ ಬರೆಯುವ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 8,42,811 ಎಂದು ವರದಿಗಳು ತಿಳಿಸಿವೆ.

ರಾಜ್ಯಾದ್ಯಂತ ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ಎಸ್ಎಸ್ಎಲ್ಸಿ (Karnataka SSLC Exams) ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ ಬರೆಯುವ ಒಟ್ಟು ವಿದ್ಯಾರ್ಥಿಗಳ (Total Students) ಸಂಖ್ಯೆ 8,42,811 ಎಂದು ವರದಿಗಳು ತಿಳಿಸಿವೆ. SSLC ಪರೀಕ್ಷೆ ನಡೆಸಲು ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನೂ (Exam Centers) ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲಿ ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಬಂದೋಬಸ್ತ್ ಇರುತ್ತದೆ. ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಅಂತಹ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ತರುವಂತಿಲ್ಲ.
ರಾಜ್ಯಾದ್ಯಂತ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಎಸ್ಎಸ್ಎಲ್ಸಿ (Karnataka SSLC Exams) ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆ ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (Prohibitory) ಜಾರಿಗೊಳಿಸಲಾಗಿದೆ. ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಮುಚ್ಚುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. 31-03-23 ರಿಂದ 15-04-23 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸುಸೂತ್ರವಾಗಿ ಬರೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ವಿದ್ಯಾರ್ಥಿ, ಪೋಷಕರ ಸಹಾಯಕ್ಕಾಗಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ಕುರಿತಾದ ಯಾವುದೇ ಗೊಂದಲ ಮಾಹಿತಿಗೆ 080 -23310075/76 ಸಂಪರ್ಕಿಸಬಹುದಾಗಿದೆ.
SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇಂತಿದೆ
- ಮಾರ್ಚ್ 31-ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಸಂಸ್ಕೃತ
- ಏಪ್ರಿಲ್ 3-ಗಣಿತ ಹಾಗೂ ಸಮಾಜ ಶಾಸ್ತ್ರ
- ಏಪ್ರಿಲ್ 6-ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ
- ಏಪ್ರಿಲ್ 8-ಅರ್ಥಶಾಸ್ತ್ರ, ಏಪ್ರಿಲ್ 10-ವಿಜ್ಞಾನ, ರಾಜ್ಯಶಾಸ್ತ್ರ
- ಏಪ್ರಿಲ್ 12-ತೃತೀಯ ಭಾಷೆ ಇಂಗ್ಲಿಷ್, ಹಿಂದಿ, ಕನ್ನಡ, ಸಂಸ್ಕೃತ
- ಏಪ್ರಿಲ್ 15ರಂದು ಸಮಾಜ ವಿಜ್ಞಾನ ಪರೀಕ್ಷೆ ನಿಗದಿ
ಇದನ್ನೂ ಓದಿ: ಪರೀಕ್ಷೆ ಎದುರಿಸಬೇಕಾದ ಯುದ್ಧವಲ್ಲ, ಸಂಭ್ರಮಿಸಬೇಕಾದ ಹಬ್ಬ- ಪಿ.ಎನ್ ಭಟ್
KSRTC ಬಸ್ನಲ್ಲಿ ಉಚಿತ ಪ್ರಯಾಣ
Published On - 12:18 pm, Thu, 30 March 23