AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​​ಎಸ್​​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಏಕೆ ಗೊತ್ತಾ?

ಕರ್ನಾಟಕದಲ್ಲಿ ಮಾರ್ಚ್ 30ರಂದು ನಡೆಯಬೇಕಿದ್ದ ಎಸ್​​ಎಸ್​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ. ದಿಢೀರ್​​ ಪರೀಕ್ಷೆ ಮುಂದೂಡಲು ಕಾರಣವೇನು ಮತ್ತು ಪರೀಕ್ಷೆ ಯಾವಾಗ ಎನ್ನುವ ಮಾಹಿತಿ ಇಲ್ಲಿದೆ. ​

ಎಸ್​​ಎಸ್​​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಏಕೆ ಗೊತ್ತಾ?
ಪ್ರಾತಿನಿಧಿಕ ಚಿತ್ರImage Credit source: google
ವಿನಯ್​ ಕಾಶಪ್ಪನವರ್​
| Edited By: |

Updated on:Mar 26, 2026 | 4:46 PM

Share

ಬೆಂಗಳೂರು, ಮಾರ್ಚ್​ 26: ಕರ್ನಾಟಕದಾದ್ಯಂತ ಮಾರ್ಚ್​ 18ರಿಂದ ಎಸ್​​ಎಸ್​ಎಲ್​ಸಿ ಪರೀಕ್ಷೆ (SSLC Exam) ಆರಂಭವಾಗಿವೆ. ಈಗಾಗಲೇ ಕೆಲ ಪರೀಕ್ಷೆಗಳು ಕೂಡ ನಡೆದಿವೆ. ಆದರೆ ಮಾ.30ರಂದು ನಡೆಯಬೇಕಿದ್ದ ಹಿಂದಿ ಪರೀಕ್ಷೆಯನ್ನು ಇದೀಗ ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದ್ದು, ಮಾ. 31ರಂದು ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಸುತ್ತೋಲೆಯಲ್ಲಿ ಏನಿದೆ?

2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್​ 02ರವರೆಗೆ ನಡೆಯಲಿವೆ ಎಂದು 2025 ನವೆಂಬರ್​​ 4 ​ ರಂದು ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಅದರಂತೆ ಈಗಾಗಲೇ ಪರೀಕ್ಷೆ ಕೂಡ ಪ್ರಾರಂಭವಾಗಿವೆ. ಅದರಂತೆಯೇ ವೇಳಾಪಟ್ಟಿಯನ್ವಯ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್​ 30ರಂದು ನಿಗದಿಪಡಿಸಲಾಗಿತ್ತು.

ಇದನ್ನೂ ಓದಿ: ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ SSLC ವಿದ್ಯಾರ್ಥಿಗಳು

ಆದರೆ ಸರ್ಕಾರದ ಅಧಿಸೂಚನೆಯಂತೆ ಮಾರ್ಚ್​ 26ರನ್ವಯ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾರ್ಚ್​ 31ರಂದು ಅಂದರೆ ಮಂಗಳವಾರ ಬದಲಾಗಿ ಮಾರ್ಚ್​ 30ರ ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಲಾಗಿತ್ತು. ಈ ಸಂಬಂಧ ಮಾರ್ಚ್​ 30ರಂದು ನಿಗದಿಪಡಿಸಲಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಮಾರ್ಚ್​ 31ರಂದು ಮಂಗಳವಾರ ಈಗಾಗಲೇ ನಿಗದಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು. ಉಳಿದ ವಿಷಯದ ಪರೀಕ್ಷೆಗಳು ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯುವುದಾಗಿದೆ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಇದನ್ನೂ ಓದಿ: ಪರೀಕ್ಷೆ ತ್ಯಜಿಸಿ ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದ ಅಧಿಕಾರಿಗಳು!

2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ರಾಜ್ಯಾದ್ಯಂತ ಮಾರ್ಚ್​ 18ರಿಂದ ಆರಂಭಗೊಂಡಿದೆ. ರಾಜ್ಯದ ಒಟ್ಟು 2871 ಪರೀಕ್ಷೆ ಕೇಂದ್ರಗಳಿವೆ. 9,02,889 ವಿದ್ಯಾರ್ಥಿಗಳು ಭಾಗಿಯಾಗಬೇಕಿತ್ತು. ಆದರೆ 8,16,294 ವಿದ್ಯಾರ್ಥಿಗಳು ಹಾಜರಾಗಿದ್ದರು. ಬೆಳಗ್ಗೆ 10ರಿಂದ ಮಧ್ಯಾಹ್ನ 1:15 ಗಂಟೆವರೆಗೆ ಪರೀಕ್ಷೆಗಳು ನಡೆಯುತ್ತಿವೆ. ಇನ್ನು ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗುತ್ತದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:22 pm, Thu, 26 March 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್