Karnataka SSLC Result 2021 Highlights: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; 99.9 ಶೇಕಡಾ ರಿಸಲ್ಟ್

TV9 Web
| Updated By: ganapathi bhat

Updated on:Aug 09, 2021 | 6:51 PM

Karnataka KSEEB Class 10 Result 2021: ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. 10ನೇ ತರಗತಿಯನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಟಿವಿ9 ಕನ್ನಡ ಡಿಜಿಟಲ್ ಶುಭಕೋರುತ್ತದೆ.

Karnataka SSLC Result 2021 Highlights: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; 99.9 ಶೇಕಡಾ ರಿಸಲ್ಟ್
ಪ್ರಾತಿನಿಧಿಕ ಚಿತ್ರ

ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ (SSLC Result 2021) ಪ್ರಕಟವಾಗಿದೆ. ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ನಿಗದಿಪಡಿಸಲಾದ ಸುದ್ದಿಗೋಷ್ಠಿಯಲ್ಲಿ ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಫಲಿತಾಂಶ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. 10ನೇ ತರಗತಿಯನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಟಿವಿ9 ಕನ್ನಡ ಡಿಜಿಟಲ್ ಶುಭಕೋರುತ್ತದೆ.

(Check KSEEB Board Class 10 Result online at kseeb.kar.nic.in and karresults.nic.in pass percentage toppers news in Kannada)

LIVE NEWS & UPDATES

The liveblog has ended.
  • 09 Aug 2021 05:21 PM (IST)

    625 ಅಂಕ ಪಡೆದ ವಿದ್ಯಾರ್ಥಿಗಳು ಇವರು

    ಹಾಸನ- ದಿಶಾ ಜೈನ್, ಈಶಾನ್ಯ, ಉಡುಪಿಯ ಅಭಿಷೇಕ್ ಹೊಳ್ಳ, ತುಮಕೂರಿನ ನಿತಿನ್. ಟಿಎಂ, ವಿಜಯನಗರದ ಕಿರಣ್ ಕುಮಾರ್ ಟಿ ಕೂಡ 625ಕ್ಕೆ 625 ಅಂಕ ಗಳಿಸಿ ಟಾಪರ್ ಆಗಿದ್ದಾರೆ. ಒಟ್ಟು 157 ಮಂದಿ ಔಟ್ ಆಫ್ ಔಟ್ ಅಂಕ ಪಡೆದಿದ್ದಾರೆ.

  • 09 Aug 2021 04:19 PM (IST)

    ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ; ಯಾರು ಟಾಪರ್ಸ್? ಇಲ್ಲಿದೆ ವಿವರ

    ಆದ್ಯಾ ಕೆ.ವಿ. 625ಕ್ಕೆ 625 ಅಂಕ ಅಭಿಷೇಕ್​ ಜಯಂತ್​ 625ಕ್ಕೆ 625 ಅದಿತಿ ಆರ್​​ 625ಕ್ಕೆ 625 ಜ್ಯೋತಿಕಾ 625ಕ್ಕೆ 625 ಅಂಕ ಕೆ.ವಿ.ಆದ್ಯಾ, ಅಭಿಷೇಕ್​ ಜಯಂತ್, ಅದಿತಿ.ಆರ್​​, ಜ್ಯೋತಿಕಾ ಸೇರಿದಂತೆ 157 ವಿದ್ಯಾರ್ಥಿಗಳಿಗೆ 625 ಅಂಕ ಲಭಿಸಿದೆ.

    ಎ. ಜ್ಯೋತಿಕಾ – ಬೆಂಗಳೂರಿನ ತುಮಕೂರು ರಸ್ತೆ ವಿಡಿಯಾ ಪೂರ್ಣಪ್ರಜ್ಞಾ ಶಾಲೆ, ಅಭಯಚಂದ್ರ ಸಿ – ಬೆಂಗಳೂರಿನ ರಾಜಾಜಿನಗರದ ವಿವಿಎಸ್‌ ಸರ್ದಾರ್ ಪಟೇಲ್ ಶಾಲೆ, ಅಭೀಶಾ ಭಟ್ – ಶಿವಮೊಗ್ಗ ಜಿಲ್ಲೆ ಸಾಗರದ ಶ್ರೀಂ ರಾಮಕೃಷ್ಣ ಇಂಗ್ಲಿಷ್ ಮೀಡಿಯಾ ಸ್ಕೂಲ್ ಸೇರಿದಂತೆ 157 ವಿದ್ಯಾರ್ಥಿಗಳು SSLCಯಲ್ಲಿ 625ಕ್ಕೆ 625 ಅಂಕ ಗಳಿಸಿದ್ದಾರೆ.

  • 09 Aug 2021 04:17 PM (IST)

    ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಎಷ್ಟು ಮಂದಿ? ವಿವರ ಇಲ್ಲಿದೆ

    13 ವಿದ್ಯಾರ್ಥಿಗಳಿಗೆ 28 ಅಂಕಗಳ ಗ್ರೇಸ್ ಮಾರ್ಕ್ಸ್ ನೀಡಿ ಪಾಸ್ ಮಾಡಲಾಗಿದೆ. 625 ಪಡೆದ ವಿದ್ಯಾರ್ಥಿಗಳು -157 625/623 ಅಂಕ ಪಡೆದ ವಿದ್ಯಾರ್ಥಿಗಳು -289 622 ಅಂಕ ಪಡೆದ ವಿದ್ಯಾರ್ಥಿಗಳು 2 621 ಅಂಕ ಪಡೆದ ವಿದ್ಯಾರ್ಥಿಗಳು 449 620 ಅಂಕ ಪಡೆದ ವಿದ್ಯಾರ್ಥಿಗಳು 28 ಈ ಬಗ್ಗೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಕರ್ ಹೇಳಿಕೆ ನೀಡಿದ್ದಾರೆ.

  • 09 Aug 2021 03:59 PM (IST)

    ಔಟ್ ಆಫ್ ಔಟ್ ಅಂಕ ಪಡೆದ ಮಕ್ಕಳ ಸಂಖ್ಯೆ

    ಪ್ರಥಮ ಭಾಷೆಯಲ್ಲಿ 25,702 ವಿದ್ಯಾರ್ಥಿಗಳಿಗೆ 125ಕ್ಕೆ 125 ಅಂಕ ದ್ವಿತೀಯ ಭಾಷೆಯಲ್ಲಿ 36,628 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ ತೃತೀಯ ಭಾಷೆಯಲ್ಲಿ 36,776 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 6321 ಮಕ್ಕಳು ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 3,649 ಮಕ್ಕಳು ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 9,367 ಮಕ್ಕಳು

  • 09 Aug 2021 03:55 PM (IST)

    157 ವಿದ್ಯಾರ್ಥಿಗಳು 625ಕ್ಕೆ 625 ಅಂಕ

    C ಗ್ರೇಡ್​ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಲಾಗಿದೆ. 625ಕ್ಕೆ 625 ಅಂಕ ಪಡೆದಿರುವ 157 ವಿದ್ಯಾರ್ಥಿಗಳು 625ಕ್ಕೆ 623 ಅಂಕ ಪಡೆದಿರುವ 289 ವಿದ್ಯಾರ್ಥಿಗಳು 625ಕ್ಕೆ 622 ಅಂಕ ಪಡೆದಿರುವ ಇಬ್ಬರು ವಿದ್ಯಾರ್ಥಿಗಳು 625ಕ್ಕೆ 621 ಅಂಕ ಪಡೆದಿರುವ 449 ವಿದ್ಯಾರ್ಥಿಗಳು

  • 09 Aug 2021 03:49 PM (IST)

    99.9 ಶೇಕಡಾ ಫಲಿತಾಂಶ

    ಜುಲೈ 19, 22ರಂದು ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇಕಡಾ 99.9ರಷ್ಟು SSLC ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. sslc.Karnataka.gov.in ನಲ್ಲಿ ಎಸ್‌ಎಸ್ಎಲ್‌ಸಿ ರಿಸಲ್ಟ್ ಲಭ್ಯವಿದೆ. 4,70,160 SSLC ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ. 4,01,280 ವಿದ್ಯಾರ್ಥಿನಿಯರು ಉತ್ತೀರ್ಣ ಆಗಿದ್ದಾರೆ. A+ ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,28,931, A ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,50,317, B ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,87,694, C ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,13,610, ಶೇ. 9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್​ ನೀಡಿ ಪಾಸ್​ ಮಾಡಲಾಗಿದೆ. C ಗ್ರೇಡ್​ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಲಾಗಿದೆ.

  • 09 Aug 2021 03:45 PM (IST)

    ಸುರೇಶ್ ಕುಮಾರ್, ಬಿಎಸ್ ಯಡಿಯೂರಪ್ಪಗೆ ಅಭಿನಂದನೆ

    ಕೊರೊನಾ ನಡುವೆ ಪರೀಕ್ಷೆ ಸಂಘಟಿಸಿದ ಅಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ನೂತನ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರದಲ್ಲಿ ಎಲ್ಲೂ ಮಾಡದ ಸಾಧನೆ ನಾವು ಮಾಡಿದ್ದೇವೆ. ಮಕ್ಕಳ ಭವಿಷ್ಯಕ್ಕೆ ಪರೀಕ್ಷೆ ಬೇಕು ಎಂದು ಪರೀಕ್ಷೆ ಸಂಘಟನೆ ಹಾಗೂ ನಿರ್ಧಾರ ಸಮರ್ಥಿಸಿಕೊಂಡಿದ್ದಾರೆ. ಸುಮಾರು 8 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆ ಬರೆದಿದ್ದಾರೆ. ಹೆತ್ತವರು ಕೂಡ ಸಹಕರಿಸಿದ್ದಾರೆ. ಎಸ್​ಒಪಿ ಸಂಪೂರ್ಣ ಪಾಲಿಸಿ, ಕೊರೊನಾ ನಿಯಮಾವಳಿ ಧಕ್ಕೆ ಆಗದಂತೆ ಅಧಿಕಾರಿ ವರ್ಗ, ಶಿಕ್ಷಕರು ಸಹಕರಿಸಿದ್ದಾರೆ.

  • 09 Aug 2021 03:13 PM (IST)

    ಕೆಲ ಹೊತ್ತಿನಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

    ಕೆಲ ಹೊತ್ತಿನಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ ಆಗಲಿದೆ. ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ಕೊರೊನಾ ಹಿನ್ನೆಲೆಯಲ್ಲಿ 2 ದಿನ ಮಾತ್ರ ನಡೆದಿದ್ದ SSLC ಪರೀಕ್ಷೆಯ ಫಲಿತಾಂಶ ಇಂದು ಹೊರಬೀಳಲಿದೆ.

  • 09 Aug 2021 02:36 PM (IST)

    3 ವಿಷಯಗಳಿಗೆ ಪರೀಕ್ಷೆ ನಡೆಸಲಾಗಿದೆ

    ಗಣಿತ ವಿಷಯದಲ್ಲಿ 7,83,882 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದರು ಅವರಲ್ಲಿ 7,81,530 ವಿದ್ಯಾರ್ಥಿಗಳು ಹಾಜರು ಮತ್ತು 2,352 ವಿದ್ಯಾರ್ಥಿಗಳು ಗೈರಾಗಿದ್ದರು. ವಿಜ್ಞಾನ ವಿಷಯದಲ್ಲಿ 8,43,976 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದರು ಅವರಲ್ಲಿ 8,40,841 ವಿದ್ಯಾರ್ಥಿಗಳು ಹಾಜರು ಹಾಗೂ 3127 ವಿದ್ಯಾರ್ಥಿಗಳು ಗೈರು ಆಗಿದ್ದರು. ಸಮಾಜ ವಿಜ್ಞಾನ ಪರೀಕ್ಷೆಗೆ 8,24,689 ಮಕ್ಕಳ ನೋಂದಣಿ ಆಗಿತ್ತು ಈ ಪೈಕಿ 8,21,823 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು ಮತ್ತು 2867 ವಿದ್ಯಾರ್ಥಿಗಳು ಗೈರು ಆಗಿದ್ದರು. ಕೊರೊನಾ ಸೋಂಕಿತ 58 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಅವರು ಕೊವಿಡ್​ ಕೇರ್​ ಸೆಂಟರ್​ನಿಂದ ಪರೀಕ್ಷೆಯನ್ನ ಬರೆದಿದ್ದರು. 2870 ವಿದ್ಯಾರ್ಥಿಗಳು ಹಾಸ್ಟೆಲ್​ಗಳಲ್ಲಿದ್ದು ಪರೀಕ್ಷೆ ಬರೆದಿದ್ದರು. ನೆರೆ ರಾಜ್ಯಗಳಿಂದ ಬಂದು ಪರೀಕ್ಷೆ ಬರೆದವರ ಸಂಖ್ಯೆ 760 ಆಗಿತ್ತು.

  • 09 Aug 2021 02:34 PM (IST)

    ಶೇಕಡಾ 99.65 ರಷ್ಟು ಹಾಜರಾತಿ

    ಪ್ರಥಮ ಭಾಷೆಗೆ ಒಟ್ಟು 8,19,694 ವಿದ್ಯಾರ್ಥಿಗಳ ನೋಂದಣಿ ಮಾಡಿಸಿಕೊಂಡಿದ್ದರು. ಆ ಪೈಕಿ 8,16,538 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಮತ್ತು 3350 ವಿದ್ಯಾರ್ಥಿಗಳು ಗೈರಾಗಿದ್ದರು. ದ್ವಿತೀಯ ಭಾಷೆಗೆ 8,27,988 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ದ್ವಿತೀಯ ಭಾಷೆ ಪರೀಕ್ಷೆಗೆ 8,24,686 ಮಕ್ಕಳು ಹಾಜರಾಗಿದ್ದರು ಮತ್ತು 3302 ವಿದ್ಯಾರ್ಥಿಗಳು ಗೈರಾಗಿದ್ದರು. ತೃತೀಯ ಭಾಷೆ 8,17,640 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು. ತೃತೀಯ ಭಾಷೆ ಪರೀಕ್ಷೆಗೆ 8,14,538 ಮಕ್ಕಳು ಹಾಜರು ಹಾಗೂ 3102 ವಿದ್ಯಾರ್ಥಿಗಳು ಗೈರಾಗಿದ್ದರು. ಕೊವಿಡ್​ ಕೇರ್​ ಸೆಂಟರ್​​ನಲ್ಲಿ 67 ಮಕ್ಕಳು ಪರೀಕ್ಷೆ ಬರೆದಿದ್ದಾರೆ ಮತ್ತು ವಿಶೇಷ ಕೊಠಡಿಯಲ್ಲಿ 152 ಮಕ್ಕಳು ಪರೀಕ್ಷೆ ಬರೆದಿದ್ದಾರೆ.

  • 09 Aug 2021 01:59 PM (IST)

    ನೆರೆ ರಾಜ್ಯಗಳಿಂದ ಬಂದು ಪರೀಕ್ಷೆ ಬರೆದವರ ಸಂಖ್ಯೆ 760

    ಗಣಿತ ವಿಷಯದಲ್ಲಿ 7,83,882 ವಿದ್ಯಾರ್ಥಿಗಳ ನೋಂದಣಿ ಗಣಿತ ಪರೀಕ್ಷೆಗೆ 7,81,530 ವಿದ್ಯಾರ್ಥಿಗಳು ಹಾಜರು ಗಣಿತ ವಿಷಯ ಪರೀಕ್ಷೆಗೆ 2,352 ವಿದ್ಯಾರ್ಥಿಗಳು ಗೈರು

    ವಿಜ್ಞಾನ ವಿಷಯದಲ್ಲಿ 8,43,976 ವಿದ್ಯಾರ್ಥಿಗಳ ನೋಂದಣಿ ವಿಜ್ಞಾನ ಪರೀಕ್ಷೆಗೆ 8,40,841 ವಿದ್ಯಾರ್ಥಿಗಳು ಹಾಜರು ವಿಜ್ಞಾನ ಪರೀಕ್ಷೆಗೆ 3127 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

    ಸಮಾಜ ವಿಜ್ಞಾನ ಪರೀಕ್ಷೆಗೆ 8,24,689 ಮಕ್ಕಳ ನೋಂದಣಿ ಈ ಪೈಕಿ 8,21,823 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು ಸಮಾಜ ವಿಜ್ಞಾನ ಪರೀಕ್ಷೆಗೆ 2867 ವಿದ್ಯಾರ್ಥಿಗಳು ಗೈರು

    ಕೊರೊನಾ ಸೋಂಕಿತ 58 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು ಕೊವಿಡ್​ ಕೇರ್​ ಸೆಂಟರ್​ನಿಂದ ಪರೀಕ್ಷೆಯನ್ನ ಬರೆದಿದ್ದಾರೆ 2870 ವಿದ್ಯಾರ್ಥಿಗಳು ಹಾಸ್ಟೆಲ್​ಗಳಲ್ಲಿದ್ದು ಪರೀಕ್ಷೆ ಬರೆದಿದ್ದಾರೆ ನೆರೆ ರಾಜ್ಯಗಳಿಂದ ಬಂದು ಪರೀಕ್ಷೆ ಬರೆದವರ ಸಂಖ್ಯೆ 760

  • 09 Aug 2021 01:58 PM (IST)

    ಈ ಬಾರಿ ಪರೀಕ್ಷೆಗೆ ಶೇಕಡಾ 99.65ರಷ್ಟು ಹಾಜರಾತಿ

    ಈ ಬಾರಿ ಪರೀಕ್ಷೆಗೆ ಶೇಕಡಾ 99.65ರಷ್ಟು ಹಾಜರಾತಿ ಇದೆ.

    ಪ್ರಥಮ ಭಾಷೆಗೆ ಒಟ್ಟು 8,19,694 ವಿದ್ಯಾರ್ಥಿಗಳ ನೋಂದಣಿ ಪ್ರಥಮ ಭಾಷೆ ಪರೀಕ್ಷೆಗೆ 8,16,538 ವಿದ್ಯಾರ್ಥಿಗಳು ಹಾಜರು ಪ್ರಥಮ ಭಾಷೆ ಪರೀಕ್ಷೆಗೆ 3350 ವಿದ್ಯಾರ್ಥಿಗಳು ಗೈರಾಗಿದ್ದರು

    ದ್ವಿತೀಯ ಭಾಷೆಗೆ 8,27,988 ವಿದ್ಯಾರ್ಥಿಗಳು ನೋಂದಣಿ ದ್ವಿತೀಯ ಭಾಷೆ ಪರೀಕ್ಷೆಗೆ 8,24,686 ಮಕ್ಕಳು ಹಾಜರು ದ್ವಿತೀಯ ಭಾಷೆ ಪರೀಕ್ಷೆಗೆ 3302 ವಿದ್ಯಾರ್ಥಿಗಳು ಗೈರಾಗಿದ್ದರು

    ತೃತೀಯ ಭಾಷೆ 8,17,640 ವಿದ್ಯಾರ್ಥಿಗಳು ನೋಂದಣಿ ತೃತೀಯ ಭಾಷೆ ಪರೀಕ್ಷೆಗೆ 8,14,538 ಮಕ್ಕಳು ಹಾಜರು ತೃತೀಯ ಭಾಷೆ ಪರೀಕ್ಷೆಗೆ 3102 ವಿದ್ಯಾರ್ಥಿಗಳು ಗೈರಾಗಿದ್ದರು

    ಕೊವಿಡ್​ ಕೇರ್​ ಸೆಂಟರ್​​ನಲ್ಲಿ 67 ಮಕ್ಕಳು ಪರೀಕ್ಷೆ ಬರೆದಿದ್ದಾರೆ ವಿಶೇಷ ಕೊಠಡಿಯಲ್ಲಿ 152 ಮಕ್ಕಳು ಪರೀಕ್ಷೆ ಬರೆದಿದ್ದಾರೆ

  • 09 Aug 2021 01:47 PM (IST)

    ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಮೊನ್ನೆಯೇ ಬರಬೇಕಿತ್ತು: ಶಿಕ್ಷಣ ಸಚಿವ

    ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಮೊನ್ನೆಯೇ ಬರಬೇಕಾಗಿತ್ತು. ಕಾರಣಾಂತರಗಳಿಂದ ಇಂದು ಫಲಿತಾಂಶ ಪ್ರಕಟವಾಗುತ್ತಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡುತ್ತಿದ್ದೇವೆ. 1 ವರ್ಷದಿಂದ ಶಾಲೆ ಇಲ್ಲದೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಮಕ್ಕಳ ಭವಿಷ್ಯ ದೃಷ್ಟಿಯಿಂದ ಶಾಲೆ ಆರಂಭ ಮಾಡಿ ಅಂತ ಪೋಷಕರು, ಮಕ್ಕಳು ಎಲ್ಲಾ ಹೇಳುತ್ತಿದ್ದಾರೆ. ಆರಂಭದಲ್ಲಿ ಸ್ವಲ್ಪ ರಿಸ್ಕ್ ಇದ್ದರೂ ಅದನ್ನು ಎದುರಿಸುತ್ತೇವೆ ಎಂದು ಶಿಕ್ಷಣ ಸಚಿವರು ಟಿವಿ9 ಗೆ ತಿಳಿಸಿದ್ದಾರೆ.

  • 09 Aug 2021 01:37 PM (IST)

    ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು

    SSLC ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಲಿದ್ದಾರೆ. ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

  • 09 Aug 2021 01:23 PM (IST)

    ಈ ವೆಬ್​ಸೈಟ್​ಗಳಲ್ಲಿ ಫಲಿತಾಂಶ ವೀಕ್ಷಿಸಿ

    ಈ ವೆಬ್​ಸೈಟ್​ಗಳಲ್ಲಿ ಫಲಿತಾಂಶ ವೀಕ್ಷಿಸಿ sslc.karnataka.gov.in kseeb.kar.nic.in karresults.nic.in

  • 09 Aug 2021 01:12 PM (IST)

    ಫಲಿತಾಂಶ ವೀಕ್ಷಿಸುವುದು ಹೇಗೆ?

    1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ 2. ಸ್ಕ್ರೀನ್​ನಲ್ಲಿ ರಿಸಲ್ಟ್​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ 3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ 4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ 5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ 6. ತಾತ್ಕಾಲಿಕ ಅಂಕಪಟ್ಟಿ ಆನ್​ಲೈನ್​ನಲ್ಲೇ ಲಭ್ಯವಾಗಲಿದ್ದು, ಅಲ್ಲಿಂದಲೇ ಡೌನ್​ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.

  • 09 Aug 2021 12:52 PM (IST)

    ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ?

    ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.

  • 09 Aug 2021 12:42 PM (IST)

    ಮಾಜಿ ಶಿಕ್ಷಣ ಸಚಿವರಿಗೆ ನೂತನ ಸಚಿವ ಬಿ.ಸಿ.ನಾಗೇಶ್ ಧನ್ಯವಾದ

  • 09 Aug 2021 12:39 PM (IST)

    ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ

    SSLC Result 2021 Karnataka Check KSEEB Board Class 10 Result

    ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ

  • 09 Aug 2021 12:33 PM (IST)

    ಕನ್ನಡದಲ್ಲಿ ಸಿಗಲಿದೆ ಕೃಪಾಂಕ

    ಈ ಬಾರಿ ಜುಲೈ 19 ಹಾಗು 22 ರಂದು ಎರಡು ದಿನಗಳ ಕಾಲ ಎಸ್ಎಸ್ಎಲ್​ಸಿ ಪರೀಕ್ಷೆ ನಡೆದಿದ್ದು, ಶೇ. 99.65 ವಿದ್ಯಾರ್ಥಿಗಳು ಹಾಜರಾಗಿದ್ದರು. ಕೊರೊನಾ ಆತಂಕದ ನಡುವೆಯೂ ರಾಜ್ಯದಲ್ಲಿ ಈ ವರ್ಷ 8,19,694 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳನ್ನು ಒಂದು ಪ್ರಶ್ನೆ ಪತ್ರಿಕೆಯಲ್ಲಿ ಹಾಗೂ ಭಾಷಾ ವಿಷಯಗಳನ್ನು ಒಂದು ಪ್ರಶ್ನೆ ಪತ್ರಿಕೆಯಲ್ಲಿ ನೀಡಲಾಗಿದ್ದು, ಕನ್ನಡದಲ್ಲಿ ಒಂದು ಕೃಪಾಂಕ ವಿದ್ಯಾರ್ಥಿಗಳಿಗೆ ದೊರೆಯಲಿದೆ.

  • 09 Aug 2021 12:25 PM (IST)

    ಮಧ್ಯಾಹ್ನದ ವೇಳೆಗೆ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ

    ನಾಲ್ಕೈದು ದಿನಗಳ ಮೊದಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್​ಎಸ್​ಎಲ್​ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ಈಗಾಗಲೇ ಫಲಿತಾಂಶ ಸಲ್ಲಿಸಿದ್ದಾರೆ. ಇದೀಗ ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟ ಮಾಡಲಿದ್ದು, ಮಧ್ಯಾಹ್ನದ ವೇಳೆಗೆ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬೀಳಲಿದೆ.

  • 09 Aug 2021 12:19 PM (IST)

    ನೂತನ ಶಿಕ್ಷಣ ಸಚಿವರಿಂದ ಫಲಿತಾಂಶ ಪ್ರಕಟ

    ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ಸಿದ್ಧವಾಗಿದ್ದು, ಇಂದು ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿದೆ. ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ. ಪರೀಕ್ಷೆ ಆಯೋಜಿಸಬೇಕಾದರೆ ಸುರೇಶ್​ ಕುಮಾರ್ ಶಿಕ್ಷಣ ಸಚಿವರಾಗಿದ್ದರು. ಇದೀಗ ಸಂಪುಟ ಬದಲಾವಣೆಯಾಗಿದ್ದು, ಬಿ.ಸಿ.ನಾಗೇಶ್ ಸಚಿವರಾಗಿದ್ದಾರೆ.

  • Published On - Aug 09,2021 12:16 PM

    Follow us
    ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
    ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
    ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
    ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
    ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
    ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
    Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
    Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
    ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
    ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
    ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್