Karnataka SSLC Result 2021: ಶೀಘ್ರದಲ್ಲೇ ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ

Karnataka SSLC Exam Results 2021 | ಆಗಸ್ಟ್​ 10ರೊಳಗೆ ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಆನ್​ಲೈನ್​ನಲ್ಲಿ ರಿಸಲ್ಟ್​ ನೋಡುವುದು ಹೇಗೆಂಬ ಮಾಹಿತಿ ಇಲ್ಲಿದೆ.

Karnataka SSLC Result 2021: ಶೀಘ್ರದಲ್ಲೇ ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ
ಸಾಂಕೇತಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 05, 2021 | 7:55 PM

ಬೆಂಗಳೂರು: ಬೇರೆ ರಾಜ್ಯಗಳಂತೆ ಈ ಬಾರಿ ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ರದ್ದುಗೊಳಿಸದೆ ಬಹು ಆಯ್ಕೆ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಿ ಪರೀಕ್ಷೆ ಮಾಡಲಾಗಿತ್ತು. ಈ ಮೂಲಕ ರಾಜ್ಯ ಸರ್ಕಾರ ಸವಾಲಿನ ನಿರ್ಧಾರ ತೆಗೆದುಕೊಂಡಿತ್ತು. ಜುಲೈ 23ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಮುಗಿದಿದ್ದು, ಆ. 10ರೊಳಗೆ ಫಲಿತಾಂಶವೂ ಪ್ರಕಟವಾಗಲಿದೆ. ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ ಎಲ್ಲರನ್ನೂ ತೇರ್ಗಡೆ ಮಾಡಲಾಗುವುದು ಎಂದು ಈಗಾಗಲೇ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ.

ಕರ್ನಾಟಕದಲ್ಲಿ 12 ಲಕ್ಷ ಪಿಯುಸಿ ಸೀಟ್​ಗಳು ಲಭ್ಯವಿದೆ. ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ತೇರ್ಗಡೆ ಹೊಂದಲಿದ್ದು, ಎಲ್ಲ ವಿದ್ಯಾರ್ಥಿಗಳಿಗೂ ಮುಂದಿನ ವರ್ಷಕ್ಕೆ ಪಿಯುಸಿಗೆ ಸೀಟ್​ಗಳು ಸಿಗಲಿವೆ. ಆಗಸ್ಟ್​ 10ಕ್ಕೆ ಅಥವಾ ಆಗಸ್ಟ್​ 10ರೊಳಗೆ ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಈ ವರ್ಷ 8,19,694 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಈಗಾಗಲೇ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಮುಂದಿನ ವಾರ ಕರ್ನಾಟಕದ 10ನೇ ತರಗತಿ ಫಲಿತಾಂಶವೂ ಹೊರಬೀಳಲಿದೆ.

ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್​ಎಸ್​ಎಲ್​ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ… 1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ 2. ಸ್ಕ್ರೀನ್​ನಲ್ಲಿ ರಿಸಲ್ಟ್​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ 3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ 4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ 5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ

ಇದನ್ನೂ ಓದಿ: SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ: ಏನಿತ್ತು ವಿಶೇಷ? ದೋಣಿಯಲ್ಲೂ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

CBSE Class 10 Result 2021: ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ; ಆನ್​ಲೈನ್​ ಮೂಲಕ ರಿಸಲ್ಟ್ ನೋಡಲು ಹೀಗೆ ಮಾಡಿ..

(Karnataka SSLC Result 2021 to be declared by August 10 how to check SSLC  Exam Result in Online)