Karnataka SSLC Result 2022: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: Karresults.nic.in ವೆಬ್‌ಸೈಟ್‌ನಲ್ಲಿ ಲಭ್ಯ
KSEEB Result 2022: sslc.karnataka.gov.in ವೆಬ್‌ಸೈಟ್ ಓಪನ್ ಆಗದ ಕಾರಣ Karresults.nic.in ಈ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ.
ಬೆಂಗಳೂರು: 2021-22ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ ಎಂದು ಪ್ರಾಥಮಿಕ & ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. sslc.karnataka.gov.in ವೆಬ್‌ಸೈಟ್ ಓಪನ್ ಆಗದ ಕಾರಣ Karresults.nic.in ಈ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ. 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. 8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 7,30,881 ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದಾರೆ. ಶೇಕಡಾ 85.53ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಹೇಳಿದ್ದಾರೆ.
145 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕಗಳನ್ನು ಪಡೆದುಕೊಂಡಿದ್ದಾರೆ. ಎರಡು ವರ್ಷ ಕೊವಿಡ್ ಕಾರಣಕ್ಕೆ ಪೂರ್ಣ ಪ್ರಮಾಣದಲ್ಲಿ ಎಕ್ಸಾಂ ನಡೆದಿರಲಿಲ್ಲ. 85.63% ಉತ್ತೀರ್ಣರಾಗಿದ್ದಾರೆ. ಕಳೆದ ಹತ್ತು ವರ್ಷದಲ್ಲಿ ದಾಖಲೆಯ ಫಲಿತಾಂಶವಾಗಿದೆ. 3,720279 – 90.29 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಬಾಲಕರು – 81.3%, ಒಟ್ಟು ಗ್ರೇಸ್ ಅಂಕಗಳ ಮೂಲಕ ಪಾಸ್ ಆಗಿದ್ದಾರೆ. 40061 ವಿದ್ಯಾರ್ಥಿಗಳು, ಗ್ರೇಸ್ ಅಂಕಗಳ ಮೂಲಕ ಅಧಿಕ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇದನ್ನೂ ಓದಿ: Karnataka SSLC Result 2022: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ, 145 ಮಕ್ಕಳು ಔಟ್ ಆಫ್ ಔಟ್
ಕರ್ನಾಟಕ SSLC ಫಲಿತಾಂಶ 2022: ವೆಬ್‌ಸೈಟ್ karresults.nic.in
ಕರ್ನಾಟಕ SSLC ಫಲಿತಾಂಶ 2022: ಮಾರ್ಕ್‌ಶೀಟ್ ಡೌನ್‌ಲೋಡ್ ಮಾಡಲು ಕ್ರಮಗಳು
ಫಲಿತಾಂಶವನ್ನು ಪರಿಶೀಲಿಸಲು ಹಂತ ಹಂತದ ವಿವರಗಳು:
ಹಂತ 1 – ಕರ್ನಾಟಕ ಬೋರ್ಡ್ ಫಲಿತಾಂಶ ವೆಬ್‌ಸೈಟ್‌ಗೆ ಭೇಟಿ ನೀಡಿ: Karresults.nic.in
ಹಂತ 2 – ಇದು 2022 ರ SSLC ವೆಬ್‌ಸೈಟ್‌ನಲ್ಲಿ Karresults.nic.in ನ ಮುಖಪುಟವನ್ನು ತೆರೆಯುತ್ತದೆ.
ಹಂತ 3 – 10 ನೇ ಫಲಿತಾಂಶ ಕರ್ನಾಟಕ 2022 ವೆಬ್‌ಸೈಟ್‌ನಲ್ಲಿ, ಕರ್ನಾಟಕ SSLC ಎಂದು ಹೇಳುವ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 4 – ಇದು KSEEB SSLC ಫಲಿತಾಂಶ 2022 ಲಾಗಿನ್ ವಿಂಡೋಗೆ ಕಾರಣವಾಗುತ್ತದೆ.
ಹಂತ 5 – Karresults.nic.in ಫಲಿತಾಂಶ ವಿಂಡೋದಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಹಂತ 6 – SSLC ಫಲಿತಾಂಶ 2022 ಕರ್ನಾಟಕವು ಪರದೆಯ ಮೇಲೆ ಕಾಣಿಸುತ್ತದೆ.
ಹಂತ 7 – SSLC ಫಲಿತಾಂಶ ಪರಿಶೀಲನೆಯ ನಂತರ ಪ್ರಿಂಟ್‌ಔಟ್ ಅಥವಾ ಸ್ಕ್ರೀನ್‌ಶಾಟ್ ತೆಗೆದುಕೊಳ್ಳಿ ಮತ್ತು ಭವಿಷ್ಯದ ಉಲ್ಲೇಖಗಳಿಗಾಗಿ ಅದನ್ನು ಸುರಕ್ಷಿತವಾಗಿರಿಸಿಕೊಳ್ಳಿ.
ರಾಜ್ಯದ ಇನ್ನುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.