AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Result 2022: ಎಸ್ಎಸ್​​ಎಲ್​ಸಿ ಫಲಿತಾಂಶ ಪ್ರಕಟ, 145 ಮಕ್ಕಳು ಔಟ್​ ಆಫ್ ಔಟ್

ಕರ್ನಾಟಕ ಎಸ್ಎಸ್​ಎಲ್​ಸಿ ಫಲಿತಾಂಶ 2022: ಫಲಿತಾಂಶದ ವಿವರವನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೀಡಿದರು.

Karnataka SSLC Result 2022: ಎಸ್ಎಸ್​​ಎಲ್​ಸಿ ಫಲಿತಾಂಶ ಪ್ರಕಟ, 145 ಮಕ್ಕಳು ಔಟ್​ ಆಫ್ ಔಟ್
ಸಾಂಧರ್ಬಿಕ ಚಿತ್ರ Image Credit source: Hindustan Times
TV9 Web
| Edited By: |

Updated on:May 19, 2022 | 1:24 PM

Share

ಬೆಂಗಳೂರು: 2021-22ನೇ ಸಾಲಿನ 10ನೇ ತರಗತಿಯ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಫಲಿತಾಂಶದ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ನೀಡಿದರು. ಈ ಬಾರಿ ರಾಜ್ಯದಲ್ಲಿ 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 8,07,206 ವಿದ್ಯಾರ್ಥಿಗಳು ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ರಿಪೀಟರ್ಸ್​ ಸೇರಿದಂತೆ 8,53,436 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶದ ವಿವರ ನೀಡಿದರು. 625ಕ್ಕೆ 625 ಅಂಕಗಳನ್ನು ಒಟ್ಟು 145 ಮಕ್ಕಳು ಪಡೆದಿದ್ದಾರೆ.

ಎಸ್​ಎಸ್​ಎಲ್​ಸಿ ಫಲಿತಾಂಶದ ಇನ್ನಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಕೊರೊನಾ ಪಿಡುಗು ವ್ಯಾಪಿಸಿದ್ದ ಕಾರಣದಿಂದಾಗಿ ಪೂರ್ಣ ಪ್ರಮಾಣದಲ್ಲಿ ಪರೀಕ್ಷೆ ನಡೆದಿರಲಿಲ್ಲ. ಈ ವರ್ಷ ಪರೀಕ್ಷೆಗೆ ಹಾಜರಾಗಿದ್ದ ಮಕ್ಕಳ ಪೈಕಿ ಶೇ 85.63ರಷ್ಟು ಮಕ್ಕಳು ತೇರ್ಗಡೆಯಾಗಿದ್ದಾರೆ. ಕಳೆದ ಹತ್ತುವರ್ಷಗಳ ಅಂಕಿಅಂಶಗಳನ್ನು ಪರಿಶೀಲಿಸಿದರೆ ಇದು ದಾಖಲೆಯ ಫಲಿತಾಂಶ ಎನಿಸಿದೆ. ಶೇ 90.29 ಬಾಲಕಿಯರು ಮತ್ತು ಶೇ 81.03ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ. ಗ್ರೇಸ್ ಅಂಕಗಳ ಮೂಲಕ 40,061 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 145 ವಿದ್ಯಾರ್ಥಿಗಳು ಔಟ್​ ಆಫ್ ಔಟ್ ಅಂದರೆ, 625ಕ್ಕೆ 625 ಅಂಕ ತೆಗೆದಿದ್ದಾರೆ.

ಈ ಬಾರಿ A+ ಗ್ರೇಡ್​ನಲ್ಲಿ 1,18,875, A ಗ್ರೇಡ್​ನಲ್ಲಿ 1,82,600, B+ನಲ್ಲಿ 1,73,528, B ಗ್ರೇಡ್​ನಲ್ಲಿ 1,43,900 ಮಕ್ಕಳು ಪಾಸಾಗಿದ್ದಾರೆ. C+ನಲ್ಲಿ 87,801, C ಗ್ರೇಡ್​ನಲ್ಲಿ 14,627 ಮಕ್ಕಳು ಪಾಸಾಗಿದ್ದಾರೆ. 91ರಿಂದ 100 ಅಂಕ ಗಳಿಸಿದ್ದರೆ A+ ಗ್ರೇಡ್, 81ರಿಂದ 90 ಅಂಕ ಗಳಿಸಿದ್ದ A ಗ್ರೇಡ್, 71ರಿಂದ 80 ಅಂಕ ಗಳಿಸಿದ್ದರೆ B+ ಗ್ರೇಡ್, 61ರಿಂದ 60 ಅಂಕವಿದ್ದರೆ B ಗ್ರೇಡ್, 51ರಿಂದ 60 ಅಂಕ ಗಳಿಸಿದ್ದರೆ C+ ಹಾಗೂ 35ರಿಂದ 50 ಅಂಕ ಪಡೆದಿದ್ದರೆ C ಗ್ರೇಡ್ ಎಂದು ವಿಂಗಡಿಸಲಾಗುತ್ತದೆ.

ನೂರಕ್ಕೆ ನೂರು ಫಲಿತಾಂಶ

1462 ಸರ್ಕಾರಿ ಶಾಲೆಗಳಲ್ಲಿ ಪರೀಕ್ಷೆ ತೆಗೆದುಕೊಂಡ ಎಲ್ಲ ಮಕ್ಕಳೂ ಪಾಸಾಗಿದ್ದಾರೆ. 467 ಅನುದಾನಿತ ಶಾಲೆಗಳು ಮತ್ತು 1991 ಅನುದಾನ ರಹಿತ ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ ಬಂದಿದೆ. ಎರಡು ಸರ್ಕಾರಿ ಶಾಲೆಗಳು, ಮೂರು ಅನುದಾನಿತ ಮತ್ತು 15 ಅನುದಾನರಹಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

Published On - 12:44 pm, Thu, 19 May 22

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!