Karnataka KSEEB SSLC Class 10 Result 2022 Highlights | ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 19ರಂದು) ಪ್ರಕಟಿಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಮಲ್ಲೇಶ್ವರಂದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.
ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಹಾಗೆಯೇ ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಈ ಬಾರಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ ಒಟ್ಟು 8,73,884 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರೆ, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು ಸೇರಿದಂತೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಇಂಗ್ಲಿಷ್ನಲ್ಲಿ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ | ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿ
ಮರುಮೌಲ್ಯಪಾಪನಕ್ಕೂ ಈ ತಿಂಗಳು 20ರಿಂದ 30ನೇ ತಾರೀಖಿನವರೆಗೆ ಅವಕಾಶವಿದೆ. ಮೌಲ್ಯಮಾಪನದ ಉತ್ತರ ಪತ್ರಿಕೆಯ ಮರುಎಣಿಕೆ, ಉತ್ತರ ಪತ್ರಿಕೆಯ ನಕಲು ಪಡೆಯಲು ಆನ್ಲೈನ್ ಅರ್ಜಿ ಸಲ್ಲಿಸಬೇಕು. ಮೇ 24ರಿಂದ ಜೂನ್ 6ರವರೆಗೆ ಅರ್ಜಿ ಸಲ್ಲಿಸಬೇಕು. ಉತ್ತರ ಪತ್ರಿಕೆಗಳನ್ನೂ ಸ್ಕ್ಯಾನ್ ಮಾಡಿ ವೆಬ್ಸೈಟ್ಗೆ ಹಾಕುತ್ತೇವೆ. ಅಲ್ಲಿಂದಲೇ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ಸಚಿವರು ಹೇಳಿದರು.
2022 ರ ಪೂರಕ ಪರೀಕ್ಷೆ ದಿನಾಂಕ ಮೇ 27 ರಿಂದ ಜೂನ್ 4 ರ ತನಕ ನಡೆಯಲಿದೆ
ಅನುತ್ತೀರ್ಣ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ರಿಜಿಸ್ಟರ್ ಮಾಡಿಕೊಳ್ಳಬೇಕು
20/05/2022 ರಿಂದ 30/5/2022 ವರೆಗೆ ಅವಕಾಶ ರಿಜಿಸ್ಟರ್ ಮಾಡಲು ಅವಕಾಶ
1462 ಸರ್ಕಾರಿ ಶಾಲೆಗಳಲ್ಲಿ ಪರೀಕ್ಷೆ ತೆಗೆದುಕೊಂಡ ಎಲ್ಲ ಮಕ್ಕಳೂ ಪಾಸಾಗಿದ್ದಾರೆ. 467 ಅನುದಾನಿತ ಶಾಲೆಗಳು ಮತ್ತು 1991 ಅನುದಾನ ರಹಿತ ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ ಬಂದಿದೆ. ಎರಡು ಸರ್ಕಾರಿ ಶಾಲೆಗಳು, ಮೂರು ಅನುದಾನಿತ ಮತ್ತು 15 ಅನುದಾನರಹಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
ಈ ಬಾರಿ A+ ಗ್ರೇಡ್ನಲ್ಲಿ 1,18,875, A ಗ್ರೇಡ್ನಲ್ಲಿ 1,82,600, B+ನಲ್ಲಿ 1,73,528, B ಗ್ರೇಡ್ನಲ್ಲಿ 1,43,900 ಮಕ್ಕಳು ಪಾಸಾಗಿದ್ದಾರೆ. C+ನಲ್ಲಿ 87,801, C ಗ್ರೇಡ್ನಲ್ಲಿ 14,627 ಮಕ್ಕಳು ಪಾಸಾಗಿದ್ದಾರೆ.
85.63% ಪಾಸ್
ಕಳೆದ ಹತ್ತು ವರ್ಷದಲ್ಲಿ ದಾಖಲೆಯ ಫಲಿತಾಂಶ
ಕಳೆದು ಹತ್ತು ವರ್ಷದಲ್ಲಿ ದಾಖಲೆಯ ಫಲಿತಾಂಶ
3,720279 – 90.29 ಬಾಲಕೀಯರು ಪಾಸ್
ಬಾಲಕರು – 81.3%
ಒಟ್ಟು ಗ್ರೇಸ್ ಅಂಕಗಳ ಮೂಲಕ ಪಾಸ್ – 40061 ವಿದ್ಯಾರ್ಥಿಗಳು
ಗ್ರೇಸ್ ಅಂಕಗಳ ಮೂಲಕ ಅಧಿಕ ವಿದ್ಯಾರ್ಥಿಗಳು ಪಾಸ್
625-625 ತಗೆದುಕೊಂಡ ವಿದ್ಯಾರ್ಥಿಗಳ ಸಂಖ್ಯೆ – 145
625 ಕ್ಕೆ 625 ಅಂಕ ಪಡೆದವರು
ಅಮಿತ್ ಮಾದರ್, ವಿಜಯಪುರ
ಭೂಮಿಕಾ ಬಿ ಆರ್, ತುಮಕೂರು
ಪ್ರವೀಣ ನೀರಲಗಿ, ಹಾವೇರಿ
ಸಹನಾ ರಾಯರ್, ಬೆಳಗಾವಿ
ಐಶ್ವರ್ಯ ಕನಸೆ, ವಿಜಯಪುರ
ಆಕೃತಿ ಎಸ್ ಎಸ್, ಚಿಕ್ಕಮಗಳೂರು
ಅರ್ಜುನ್ ನಾಯ್ಕ್, ಹಾಸನ
ಚಿರಾಗ್ ಮಹೇಶ್ ನಾಯ್ಕ್, ಉತ್ತರಕನ್ನಡ
ಗಾಯತ್ರಿ, ಉಡುಪಿ
ನಿಶಾ, ಉಡುಪಿ,
ಪ್ರಗತಿ, ಹೆಚ್ಎನ್ ಹಾಸನ
145 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದಿದ್ದಾರೆ
ಅಮಿತ್ ಮಾದರ್, ವಿಜಯಪುರ
ಭೂಮಿಕಾ ಬಿ ಆರ್, ತುಮಕೂರು
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಮಿತ್ ಮಾದರ್ ಪ್ರಥಮ
ಅಮಿತ್ ಮಾದರ್, ವಿಜಯಪುರ ಜಿಲ್ಲೆಯ ವಿದ್ಯಾರ್ಥಿ
ತುಮಕೂರಿನ ಬಿ.ಆರ್.ಭೂಮಿಕಾ ರಾಜ್ಯಕ್ಕೆ ದ್ವಿತೀಯ ಸ್ಥಾನ
ಎರಡು ವರ್ಷ ಕೊವಿಡ್ ಕಾರಣಕ್ಕೆ ಪೂರ್ಣ ಪ್ರಮಾಣದಲ್ಲಿ ಎಕ್ಸಾಂ ನಡೆದಿರಲಿಲ್ಲ, 85.63% ಉತ್ತೀರ್ಣರಾಗಿದ್ದಾರೆ. ಕಳೆದ ಹತ್ತು ವರ್ಷದಲ್ಲಿ ದಾಖಲೆಯ ಫಲಿತಾಂಶ, ಕಳೆದು ಹತ್ತು ವರ್ಷದಲ್ಲಿ ದಾಖಲೆಯ ಫಲಿತಾಂಶ, 3,720279 – 90.29 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಬಾಲಕರು – 81.3%, ಒಟ್ಟು ಗ್ರೇಸ್ ಅಂಕಗಳ ಮೂಲಕ ಪಾಸ್ – 40061 ವಿದ್ಯಾರ್ಥಿಗಳು, ಗ್ರೇಸ್ ಅಂಕಗಳ ಮೂಲಕ ಅಧಿಕ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಒಟ್ಟು 7,30,881 ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದಾರೆ
20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು
ಶೇಕಡಾ 85.53ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ
4,41,099 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರು
3,58,602 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ
ಶೇಕಡಾ 90.29ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ
4,12,334 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು
3,72,279 ವಿದ್ಯಾರ್ಥಿಗಳು ಪರೀಕ್ಷೆಗೆ ಉತ್ತೀರ್ಣವಾಗಿದ್ದಾರೆ
ಶೇಕಡಾ 81.03ರಷ್ಟು ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದಾರೆ
2021-22ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟ
ಪ್ರಾಥಮಿಕ & ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ
8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು
8,07,206 SSLC ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು
8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು
20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು
730881
ಶೇಕಡಾ 85.63ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ.
ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಒಂದೊಮ್ಮೆ ನೀವು ಡೌನ್‌ಲೋಡ್ ಮಾಡಿರುವ ಇ-ಮಾರ್ಕ್ಶೀಟ್ನಲ್ಲಿ ಏನಾದರೂ ಸಮಸ್ಯೆಗಳಿದ್ದರೆ, ವಿದ್ಯಾರ್ಥಿಗಳು ತಮ್ಮ ಶಾಲೆಗಳನ್ನು ಸಂಪರ್ಕಿಸಿ ತಕ್ಷಣವೇ ವಿಷಯವನ್ನು ತಿಳಿಸಿ. ಇಂದು ಫಲಿತಾಂಶ ಪ್ರಕಟವಾಗುತ್ತಿದ್ದು, ಕೆಲವು ದಿನಗಳ ಬಳಿಕ ಮಾರ್ಕ್ಶೀಟ್ನ ಹಾರ್ಡ್ಕಾಪಿ ಲಭ್ಯವಾಗಲಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಇನ್ನೇನು ಕೆಲವೇ ನಿಮಿಷಗಳಲ್ಲಿ ಪ್ರಕಟವಾಗಲಿದ್ದು, sslc.karnataka.gov.in ವೆಬ್‌ಸೈಟ್ ಓಪನ್ ಆಗುತ್ತಿಲ್ಲ, Karresults.nic.in ಈ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಕರ್ನಾಟಕದಲ್ಲಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ರಜೆಗಳು ಸಾಲುಸಾಲಾಗಿ ಬಂದ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆ ತಡವಾಯಿತು.
ಜೂನ್ 4 ನೇ ವಾರದಲ್ಲಿ ಪೂರಕ ಪರೀಕ್ಷೆ (SSLC supplementary exams) ನಡೆಯಲಿದೆ.
ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟು ಅಂಕಗಳ ಕೊರತೆ ಹೊಂದಿರುವ ವಿದ್ಯಾರ್ಥಿಗಳಿಗೆ ಶೇ 10ರಷ್ಟು ಗ್ರೇಸ್ ಮಾರ್ಕ್ಸ್ ಕೊಡಲು ಸರ್ಕಾರ ನಿರ್ಧರಿಸಿದೆ. ಮೂರು ವಿಷಯಗಳಲ್ಲಿ ಪಾಸಾಗಿರುವ ವಿದ್ಯಾರ್ಥಿಗಳು, ಒಂದು ವೇಳೆ ಉಳಿದ ಮೂರು ವಿಷಯಗಳಲ್ಲಿ ಕಡಿಮೆ ಅಂಕ ಪಡೆದು, ಫೇಲ್ ಆಗುವ ಪರಿಸ್ಥಿತಿ ಅನುಭವಿಸುತ್ತಿದ್ದರೆ ಮಾತ್ರ ಕೃಪಾಂಕ ಸಿಗುತ್ತದೆ.
ಕೋವಿಡ್ನಿಂದಾಗಿ ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎರಡೇ ದಿನದಲ್ಲಿ ಪೂರೈಸಿದ್ದರು. ಈ ಬಾರಿ ಕೆಎಸ್ಇಇಬಿಯು ಆಫ್ಲೈನ್ ಪರೀಕ್ಷೆ ನಡೆಸಿತ್ತು.
ಜೀವನದಲ್ಲಿ ಸೋಲು, ಗೆಲುವು ಎಂಬುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಸೋತವರು ಮತ್ತೊಮ್ಮೆ ಗೆ್ದ್ದೇಗೆಲ್ಲುತ್ತಾರೆ. ಹೀಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು ಏನೇ ಬಂದರೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು, ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ತೆರೆದಿದೆ. ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಈ ಮೂಲಕ ಟೆಲಿ ಕೌನ್ಸಿಲಿಂಗ್ ಮಾಡಲಾಗುತ್ತದೆ.
ಒತ್ತಡದಲ್ಲಿರುವ ವಿದ್ಯಾರ್ಥಿಗಳು 080-46110007 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು
– ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ http://kseeb.kar.nic.in/ ಗೆ ಅಥವಾ karresults.nic.in ಗೆ ಭೇಟಿ ನೀಡಿ.
– ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್ ಮಾಡಿ.
– ಬಳಿಕ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
– ಫಲಿತಾಂಶದ ಪೇಜ್ ಓಪನ್ ಆಗುತ್ತದೆ.
– ಡೌನ್‌ಲೋಡ್ ಮಾಡಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ.
ಇಂದು ಮಧ್ಯಾಹ್ನ 12:30ಕ್ಕೆ ರಿಸಲ್ಟ್ ಲಭ್ಯ
Published On - 10:04 am, Thu, 19 May 22