AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC 2023 Toppers: ಎಸ್​ಎಸ್​ಎಲ್​ಸಿಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ

ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ (KSEAB SSLC results 2023) ಪ್ರಕಟವಾಗಿದೆ. ಈ ಬಾರಿ ಶೇಕಡ 83.88 ಫಲಿತಾಂಶ ದಾಖಲಾಗಿದೆ. ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ ಪಡೆದಿದ್ದಾರೆ. ಟಾಪರ್ಸ್ ಯಾರ್ಯಾರು ಎನ್ನುವ ಮಾಹಿತಿ ಈ ಕೆಳಗಿನಂತಿದೆ.

Karnataka SSLC 2023 Toppers: ಎಸ್​ಎಸ್​ಎಲ್​ಸಿಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ
ರಮೇಶ್ ಬಿ. ಜವಳಗೇರಾ
|

Updated on:May 08, 2023 | 11:37 AM

Share

ಬೆಂಗಳೂರು:  ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್​ಎಸ್​ಎಲ್​ಸಿ (2022-23ನೇ ಸಾಲಿನ) ವಾರ್ಷಿಕ ಪರೀಕ್ಷೆಯ ಫಲಿತಾಂಶ (SSLC Exam Result 2023) ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ (KSEAB SSLC results 2023) ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ. ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.  ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಅವರ ವಿವರ ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: Karnataka SSLC District Wise Result 2023: ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ, ಯಾದಗಿರಿಗೆ ಕೊನೆಯ ಸ್ಥಾನ

625 ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು

  1. ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು
  2. ಯಶಸ್​​ಗೌಡ- ಬಿಜಿಎಸ್​ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ
  3. ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ,ಸವದತ್ತಿ
  4. ಭೀಮನಗೌಡ​-ಆಕ್ಸ್​ಫರ್ಡ್​ ಆಂಗ್ಲ ಶಾಲೆ, ನಾಗರಬೆಟ್ಟ, ವಿಜಯಪುರ

ಟಾಪರ್ ಯಶಸ್‌ಗೌಡ ಮೊದಲ ಪ್ರತಿಕ್ರಿಯೆ

ನಾನು ಟಾಪರ್‌ ಆಗ್ತೀನಿ ಎನ್ನುವ ನಂಬಿಕೆಯಿತ್ತು. ಇನ್ನಿ ನಿರ್ಮಲಾನಂದ ಸ್ವಾಮೀಜಿ ಆಶೀರ್ವಾದ, ಮನೆಯವರ ಆಶೀರ್ವಾದ ಮತ್ತು ಪ್ರೋತ್ಸಾಹದಿಂದ ಈ ಫಲಿತಾಂಶ ಪಡೆಯಲು ಸಾಧ್ಯವಾಗಿದೆ. ಹಾರ್ಡ್‌ವರ್ಕ್‌ ಜೊತೆಗೆ ಸ್ಮಾರ್ಟ್‌ ವರ್ಕ್‌ ಕೂಡ ಮಾಡಿದ್ದೆನು. ಶಿಕ್ಷಕರಿಂದ 6.30ರವರೆಗೆ ಡೌಟ್‌ ಕೇಳಿ ಪರಿಹರಿಸಿಕೊಳ್ಳುತ್ತಿದ್ದೆನು. ಮನೆಯಲ್ಲಿಯೂ ಕೂಡ ಶ್ರಮವಹಿಸಿ ಓದುತ್ತಿದ್ದೆನು. ಮುಂದೆ ನಾನು ಇಂಜಿನಿಯರ್‌ ಆಗಬೇಕು ಎಂದುಕೊಂಡಿದ್ದೇನೆ ಎಂದು ಎಸ್‌ಎಸ್‌ಎಲ್‌ಸಿ ಟಾಪರ್‌ ಯಶಸ್‌ಗೌಡ ತಿಳಿಸಿದರು.

ಗ್ರೇಡ್​ವಾರು ವಿದ್ಯಾರ್ಥಿಗಳ ಫಲಿತಾಂಶ

  • SSLC ಫಲಿತಾಂಶದಲ್ಲಿ A+ ಗ್ರೇಡ್ ಪಡೆದ ವಿದ್ಯಾರ್ಥಿಗಳು 61,003
  • A ಗ್ರೇಡ್ ಪಡೆದ ವಿದ್ಯಾರ್ಥಿಗಳು 1,47,634
  • B+ ಗ್ರೇಡ್ ಪಡೆದ ವಿದ್ಯಾರ್ಥಿಗಳು 1,75,489
  • B ಗ್ರೇಡ್ ಪಡೆದ ವಿದ್ಯಾರ್ಥಿಗಳು 1,70,296
  • C+ ಗ್ರೇಡ್ ಪಡೆದ ವಿದ್ಯಾರ್ಥಿಗಳು 1,16,819
  • C ಗ್ರೇಡ್ ಪಡೆದ ವಿದ್ಯಾರ್ಥಿಗಳು 19,301

ಇದನ್ನು ಓದಿ: Karnataka SSLC Result 2023: ಎಸ್​ಎಸ್​​ಎಲ್​ಸಿ ಫಲಿತಾಂಶ ಪ್ರಕಟ, ರಿಸಲ್ಟ್ ನೋಡಲು ಇಲ್ಲಿದೆ ವಿಧಾನ

ಇನ್ನು ಜಿಲ್ಲಾವಾರು ಫಲಿತಾಂಶ ನೋಡುವುದಾದರೆ ಚಿತ್ರದುರ್ಗ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಮಂಡ್ಯ ಎರಡನೇ ಸ್ಥಾನ, ಇನ್ನು ಹಾಸನಕ್ಕೆ ಮೂರನೇ ಸ್ಥಾನ ಸಿಕ್ಕಿದೆ. ಇನ್ನು ಯಾದಗಿರಿ ಕೊನೆ ಸ್ಥಾನದಲ್ಲಿದೆ.

Published On - 10:53 am, Mon, 8 May 23

ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್​: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ
ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್​: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ