Karnataka SSLC Result 2023: ಎಸ್​ಎಸ್​​ಎಲ್​ಸಿ ಫಲಿತಾಂಶ ಪ್ರಕಟ, ರಿಸಲ್ಟ್ ನೋಡಲು ಇಲ್ಲಿದೆ ವಿಧಾನ

ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡದು ದಿನ ಮೊದಲೇ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಎಷ್ಟು ಫಲಿತಾಂಶ ಬಂದಿದೆ. ಆನ್​ಲೈನ್​ಲ್ಲಿ ರಿಸಲ್ಟ್ ಚೆಕ್ ಮಾಡುವುದೇಗೆ? ಎನ್ನುವ ವಿವರ ಇಲ್ಲಿದೆ.

Karnataka SSLC Result 2023: ಎಸ್​ಎಸ್​​ಎಲ್​ಸಿ ಫಲಿತಾಂಶ ಪ್ರಕಟ, ರಿಸಲ್ಟ್ ನೋಡಲು ಇಲ್ಲಿದೆ ವಿಧಾನ
Follow us
ರಮೇಶ್ ಬಿ. ಜವಳಗೇರಾ
|

Updated on:May 08, 2023 | 10:30 AM

ಬೆಂಗಳೂರು: 2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್ ಸಿ(SSLC Results 2023) ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು(ಮೇ 08) ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಶೇ. 83.89 ಫಲಿತಾಂಶ ಬಂದಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸಾದ ಒಟ್ಟು ವಿದ್ಯಾರ್ಥಿಗಳು 7,00,619. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಒಟ್ಟು ನಾಲ್ಕು ವಿದ್ಯಾರ್ಥಿಗಳು ಒಟ್ಟು 625 ಅಂಕಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಇನ್ನು ಈ ಬಾರಿ SSLC ಪರೀಕ್ಷೆ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

Karnataka SSLC Result 2023: ಎಸ್​ಎಸ್​ಎಲ್​ಸಿ ಅಲ್ಲಿ ಕಡಿಮೆ ಅಂಕ ಅಥವಾ ಫೇಲ್ ಆಗುತ್ತೀರಿ ಎಂದನಿಸಿದರೆ ಇದನ್ನು ಒಮ್ಮೆ ಓದಿ

  • ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸಾದ ಬಾಲಕರು 3,41,108
  • SSCL ಪರೀಕ್ಷೆಯಲ್ಲಿ ಪಾಸಾದ ಬಾಲಕಿಯರ ಸಂಖ್ಯೆ 3,59,511
  • SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23
  • SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23
  • SSLC ಫಲಿತಾಂಶದಲ್ಲಿ ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12
  • SSLC ಪರೀಕ್ಷೆ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ

ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಮತದಾನಕ್ಕೆ ಎರಡು ದಿನ ಮೊದಲೇ  ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗಿದೆ. 11 ಗಂಟೆ ನಂತರ karresults.nic.in ವೆಬ್​​​ಸೈಟ್​ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಹೇಗೆ ರಿಸಲ್ಟ್ ಚೆಕ್ ಮಾಡಿಬೇಕೆನ್ನುವುದು ಈ ಕೆಳಗಿನಂತಿದೆ ನೋಡಿ.

2022- 2023ನೇ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಗಳನ್ನು ಕಳೆದ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿದ್ದು,  ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಇನ್ನು  63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.

ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?

  • ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್‌ ತೆರೆಯಬೇಕು.
  •  ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು
  •  ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು
  • ಕೊನೆಯಲ್ಲಿ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

Published On - 10:14 am, Mon, 8 May 23

ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ