Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Supplementary Exam 2023: ಫೇಲ್ ಆದವರಿಗೆ ಇನ್ನೊಂದು ಚಾನ್ಸ್, ಈಗಿನಿಂದಲೇ ನೋಂದಣಿ ಮಾಡಿಕೊಳ್ಳಿ

ಕರ್ನಾಟಕ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ 2023: ಈ ಬಾರಿ ಎಸ್​ಎಸ್​ಎಲ್​ಸಿ ಫೇಲ್ ಆದ ವಿದ್ಯಾರ್ಥಿಗಳಿಗೆ ಇನ್ನೊಂದು ಅವಕಾಶ ಇದೆ. ಅದನ್ನು ಪೂರಕ ಪರೀಕ್ಷೆ ಎನ್ನುತ್ತಾರೆ. ಹಾಗಾದ್ರೆ, ಪೂರಕ ಪರೀಕ್ಷೆ ಯಾವಾಗ? ಏನು ಎನ್ನುವ ವಿವರ ಇಲ್ಲಿದೆ ನೋಡಿ.

Karnataka SSLC Supplementary Exam 2023: ಫೇಲ್ ಆದವರಿಗೆ ಇನ್ನೊಂದು ಚಾನ್ಸ್, ಈಗಿನಿಂದಲೇ ನೋಂದಣಿ ಮಾಡಿಕೊಳ್ಳಿ
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:May 08, 2023 | 12:35 PM

2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ(Karnataka SSLC Result 2023) ಹೊರಬಿದ್ದಿದೆ. ಇಂದು(ಮೇ 08) ಮಧ್ಯಾಹ್ನದ ನಂತರ ಆಯಾ ಶಾಲೆಗಳಲ್ಲಿಯೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ನಂಬರ್‌ಗಳಿಗೆ ಎಸ್‌ಎಂಎಸ್‌ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಇನ್ನು ಫೇಲ್​ ಆದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಭಯಪಡುವುದು ಬೇಡ. ಎಸ್​ಎಸ್​ಎಲ್​ಸಿ ಪರೀಕ್ಷೆ ಎನ್ನುವುದು ವಿದ್ಯಾರ್ಥಿಗಳ ಪಾಲಿಗೆ ಮಹತ್ತರ ಘಟ್ಟ ಹೌದು, ಹಾಗಂತ ಇದು ಜೀವನದ ಅಂತಿಮವಲ್ಲ. ಪರೀಕ್ಷೆ ಎನ್ನುವುದು ವಿದ್ಯಾರ್ಥಿಗಳ ಜೀವನದ ಭಾಗವಷ್ಟೇ, ಪರೀಕ್ಷೆಯಲ್ಲಿ ಫೇಲ್‌ ಆದ ತಕ್ಷಣ ಜೀವನ ಮುಗಿಯಿತು ಎಂದಲ್ಲ. ಪೂರಕ ಪರೀಕ್ಷೆ ಬರೆಯಹುದು.

ಇದನ್ನೂ ಓದಿ: Karnataka SSLC 2023 Toppers: ಎಸ್​ಎಸ್​ಎಲ್​ಸಿಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ

2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಇಂದಿನಿಂದ ಮೇ 15ರವರೆಗೆ ಅವಕಾಶ ನೀಡಲಾಗಿದೆ. ಇನ್ನು ಪೂರಕ ಪರೀಕ್ಷೆ ಯಾವಾಗ ನಡೆಯಲಿದೆ ಎನ್ನುವುದನ್ನು ಶಿಕ್ಷಣ ಇಲಾಖೆ ಮುಂದಿನ ವಾರ ವೇಳಾಪಟ್ಟಿ ಬಿಡುಗಡೆ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಹಳೆಯದ್ದನ್ನು ಮರೆತು ಪೂಕರ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಿ. ಹಾಗೇ ಒಳ್ಳೆ ಅಂಕ ತೆಗೆಯಲು ಈಗಿನಿಂದಲೇ ತಯಾರಿ ಮಾಡಿಕೊಳ್ಳಿ. ಪರೀಕ್ಷೆ ಹೇಗಿರುತ್ತೆ? ಎನ್ನುವುದು ಈಗಾಗಲೇ ನಿಮಗೆ ತಿಳಿದಿದೆ.

ಪರೀಕ್ಷೆಯಲ್ಲಿ ಮಕ್ಕಳು ಅನುತ್ತೀರ್ಣರಾಗಲು ಹಲವಾರು ಕಾರಣಗಳಿರುತ್ತವೆ. ಪೋಷಕರು, ಮನೆಯ ವಾತಾವರಣ, ಶಿಕ್ಷಕರು, ಶಾಲಾ ವಾತಾವರಣ, ಸ್ನೇಹಿತರ ಬಳಗ, ಮಕ್ಕಳ ಗ್ರಹಣಶಕ್ತಿ, ಮಕ್ಕಳಲ್ಲಿನ ಆತ್ಮವಿಶ್ವಾಸ, ಶೈಕ್ಷಣಿಕ ವಿಷಯದಲ್ಲಿ ಆಸಕ್ತಿಯ ಕೊರತೆ, ಪರೀಕ್ಷೆಯ ಕುರಿತ ಭಯ, ಆತಂಕ ಈ ಎಲ್ಲಾ ಅಂಶಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಕುಗ್ಗುವಂತೆ ಮಾಡಿ ಪರೀಕ್ಷೆಯಲ್ಲಿ ಕಡಿಮೆ ಅಂಕ ತೆಗೆಯಲು ಅಥವಾ ಫೇಲ್‌ ಆಗಲು ಕಾರಣವಾಗಬಹುದು. ಈಗ ಅನುತ್ತೀರ್ಣರಾದವರು ಇವೆಲ್ಲಾ ಚಿಂತನೆಗಳನ್ನು ಬಿಟ್ಟು ಫ್ರೆಶ್ ಆಗಿ ಮತ್ತೊಮ್ಮೆ ಪರೀಕ್ಷೆ ಬರೆದು ಒಳ್ಳೆ ಅಂಕಗಳಿಸಲು ಅವಕಾಶ ಇದೆ.

ಇದನ್ನೂ ಓದಿ: Karnataka SSLC District Wise Result 2023: ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ, ಯಾದಗಿರಿಗೆ ಕೊನೆಯ ಸ್ಥಾನ

ಶಿಕ್ಷಣ ಇಲಾಖೆಯು ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡ ತಕ್ಷಣ ನಿಮ್ಮ ಟಿವಿ9 ಕನ್ನಡ ಸುದ್ದಿ ನೀಡಲಿದ್ದು, ಅಲ್ಲಿಯವರೆಗೂ ಟಿವಿ9 ಡಿಜಿಟಲ್​ಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾ ಇರಿ.

Published On - 12:03 pm, Mon, 8 May 23

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!