AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC 2024 Toppers List: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ, ಇಲ್ಲಿದೆ ಟಾಪರ್ಸ್​​ ಲಿಸ್ಟ್

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Karnataka SSLC 2024 Toppers List: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ, ಇಲ್ಲಿದೆ ಟಾಪರ್ಸ್​​ ಲಿಸ್ಟ್
ಅಂಕಿತಾ ಬಸಪ್ಪ ಕೊನ್ನೂರು
ಗಂಗಾಧರ​ ಬ. ಸಾಬೋಜಿ
|

Updated on:May 09, 2024 | 11:36 AM

Share

ಬೆಂಗಳೂರು, ಮೇ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ (SSLC) ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ 

  • ಅಂಕಿತಾ ಬಸಪ್ಪ ಕೊನ್ನೂರು (ಬಾಗಲಕೋಟೆ) 625/625 (ಪ್ರಥಮ)
  • ಮೇದಾ ಪಿ ಶೆಟ್ಟಿ (ಬೆಂಗಳೂರು) 625ಕ್ಕೆ 624 ಅಂಕ
  • ಹರ್ಷಿತಾ ಡಿಎಂ (ಮಧುಗಿರಿ) 625ಕ್ಕೆ 624 ಅಂಕ
  • ಚಿನ್ಮಯ್ (ದಕ್ಷಿಣ ಕನ್ನಡ) 625ಕ್ಕೆ 624 ಅಂಕ
  • ಸಿದ್ದಾಂತ್ (ಚಿಕ್ಕೊಡಿ) 625ಕ್ಕೆ 624 ಅಂಕ
  • ದರ್ಶನ್ (ಶಿರಸಿ) 625ಕ್ಕೆ 624 ಅಂಕ
  • ಚಿನ್ಮಯ್ (ಶಿರಸಿ) 625ಕ್ಕೆ 624 ಅಂಕ
  • ಶ್ರೀರಾಮ್ (ಶಿರಸಿ) 625ಕ್ಕೆ 624 ಅಂಕ

ಎಸ್​ಎಸ್​ಎಲ್​ಸಿ ಟಾಪರ್ ಅಂಕಿತಾ ಮೊದಲ ಪ್ರತಿಕ್ರೆಯೆ

ಟಿವಿ9ಗೆ ಎಸ್​ಎಸ್​ಎಲ್​ಸಿ ಟಾಪರ್​ ಅಂಕಿತಾ ಕೊನ್ನೂರು ಪ್ರತಿಕ್ರಿಯಿಸಿದ್ದು, ಪಿಯುಸಿಯಲ್ಲಿ ವಿಜ್ಞಾನ ವಿಭಾಗ ತೆಗೆದುಕೊಳ್ಳುತ್ತೇನೆ. ಭವಿಷ್ಯದಲ್ಲಿ ನಾನು ಐಎಎಸ್​ ಮಾಡುವ ಕನಸು ಹೊಂದಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka SSLC Result 2024 Live: ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ, ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ

ಬೆಂಗಳೂರಿನ ವಿದ್ಯಾರ್ಥಿಗಳು ಕೂಡ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ರಾಜಾಜಿನಗರದ ವಿವಿಎಸ್ ಸರ್ದಾರ್ ಪಟೇಲ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಮೂರನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.​ ಅಂಕಿತಾ ಹಾಗೂ ಸೌರವ್ ಕೌಶಿಕ್​ಗೆ ತಲಾ 623 ಅಂಕಗಳು ಬಂದಿವೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆ ಶಿಕ್ಷಕರು ಮತ್ತು ಪೋಷಕರು ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: Karnataka SSLC District Wise Result 2024: ಉಡುಪಿಗೆ ಪ್ರಥಮ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ

44ನೇ ಬ್ಯಾಚ್ 100% ರಿಸಲ್ಟ್ ಬಂದಿರುವುದು ಸಂತಸ ತಂದಿದೆ. ಮಕ್ಕಳಿಗೆ ನಾವು ಉತ್ತಮವಾಗಿ ಪಾಠಗಳನ್ನ ಒದಗಿಸುತ್ತಿದ್ದೇವೆ ಎಂದು ವಿವಿಎಸ್ ಹೈಸ್ಕೂಲ್ ಪ್ರಾಶುಂಪಾಲೆ ವಾಣಿಶ್ರಿ ದೇಶಪಾಂಡೆ ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:10 am, Thu, 9 May 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು