ಬೆಂಗಳೂರು, ಮೇ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಟಿವಿ9ಗೆ ಎಸ್ಎಸ್ಎಲ್ಸಿ ಟಾಪರ್ ಅಂಕಿತಾ ಕೊನ್ನೂರು ಪ್ರತಿಕ್ರಿಯಿಸಿದ್ದು, ಪಿಯುಸಿಯಲ್ಲಿ ವಿಜ್ಞಾನ ವಿಭಾಗ ತೆಗೆದುಕೊಳ್ಳುತ್ತೇನೆ. ಭವಿಷ್ಯದಲ್ಲಿ ನಾನು ಐಎಎಸ್ ಮಾಡುವ ಕನಸು ಹೊಂದಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Karnataka SSLC Result 2024 Live: ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ, ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ
ಬೆಂಗಳೂರಿನ ವಿದ್ಯಾರ್ಥಿಗಳು ಕೂಡ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ರಾಜಾಜಿನಗರದ ವಿವಿಎಸ್ ಸರ್ದಾರ್ ಪಟೇಲ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಮೂರನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಅಂಕಿತಾ ಹಾಗೂ ಸೌರವ್ ಕೌಶಿಕ್ಗೆ ತಲಾ 623 ಅಂಕಗಳು ಬಂದಿವೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆ ಶಿಕ್ಷಕರು ಮತ್ತು ಪೋಷಕರು ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.
ಇದನ್ನೂ ಓದಿ: Karnataka SSLC District Wise Result 2024: ಉಡುಪಿಗೆ ಪ್ರಥಮ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ
44ನೇ ಬ್ಯಾಚ್ 100% ರಿಸಲ್ಟ್ ಬಂದಿರುವುದು ಸಂತಸ ತಂದಿದೆ. ಮಕ್ಕಳಿಗೆ ನಾವು ಉತ್ತಮವಾಗಿ ಪಾಠಗಳನ್ನ ಒದಗಿಸುತ್ತಿದ್ದೇವೆ ಎಂದು ವಿವಿಎಸ್ ಹೈಸ್ಕೂಲ್ ಪ್ರಾಶುಂಪಾಲೆ ವಾಣಿಶ್ರಿ ದೇಶಪಾಂಡೆ ಸಂತಸ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:10 am, Thu, 9 May 24