Karnataka SSLC Results 2025: ಮೇ 3ರಂದು ಕರ್ನಾಟಕ ಎಸ್ಎಸ್​ಎಲ್​ಸಿ ಫಲಿತಾಂಶ ಪ್ರಕಟ ಸಾಧ್ಯತೆ: ಆನ್​ಲೈನ್​ನಲ್ಲಿ SSLC Result ನೋಡುವುದು ಹೇಗೆ?

ಕರ್ನಾಟಕ ಎಸ್ಎಸ್​ಎಲ್​ಸಿ ಫಲಿತಾಂಶ 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮೇ 3 ರಂದು ಪ್ರಕಟವಾಗುವ ಸಾಧ್ಯತೆಯಿದೆ. 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಫಲಿತಾಂಶವನ್ನು ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಲಾಗುತ್ತದೆ. ಆನ್​ಲೈನ್​ಲ್ಲಿ ಫಲಿತಾಂಶವನ್ನು ನೋಡುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

Karnataka SSLC Results 2025: ಮೇ 3ರಂದು ಕರ್ನಾಟಕ ಎಸ್ಎಸ್​ಎಲ್​ಸಿ ಫಲಿತಾಂಶ ಪ್ರಕಟ ಸಾಧ್ಯತೆ: ಆನ್​ಲೈನ್​ನಲ್ಲಿ SSLC Result ನೋಡುವುದು ಹೇಗೆ?
ಪ್ರಾತಿನಿಧಿಕ ಚಿತ್ರ

Updated on: May 02, 2025 | 7:27 AM

ಬೆಂಗಳೂರು, ಏಪ್ರಿಲ್​ 30: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ್ದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ ಫಲಿತಾಂಶವನ್ನು ಮೇ 3ರಂದು ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಸದ್ಯ ಪರೀಕ್ಷೆ ಬರೆದಿರುವ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿದ್ದವು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎನ್ನಲಾಗುತ್ತಿದೆ. ಕೆಲ ಸಣಪುಟ್ಟ ಕಾರ್ಯಗಳಿದ್ದು, ಕೂಡಲೇ ಮುಕ್ತಾಯಗೊಳಿಸಿ ಮೇ 3ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: SSLC Result 2025: ಮೇ ಮೊದಲ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ವಿವರ

ಇದನ್ನೂ ಓದಿ
KEA ಎಷ್ಟೇ ರೂಲ್ಸ್ ಮಾಡಿದ್ರೂ ನೋ ಯೂಸ್​! ವಿದ್ಯಾರ್ಥಿಗಳಿಂದ ರೂಲ್ಸ್ ಬ್ರೇಕ್
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
KCET Exam ಹಾಲ್ ಟಿಕೆಟ್​ ಬಿಡುಗಡೆ, ಆನ್​ಲೈನ್​ನಲ್ಲಿ ಡೌನ್‌ಲೋಡ್ ಮಾಡಿ
ಇನ್ಮುಂದೆ ಸಿಇಟಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ: ಕೆಇಎ ಹೊಸ ನಿಯಮ

ರಾಜ್ಯದ 2818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದವು. ಪರೀಕ್ಷೆಗೆ 8 ಲಕ್ಷದ 96 ಸಾವಿರ ವಿದ್ಯಾರ್ಥಿಗಳು ನೊಂದಯಿಸಿಕೊಂಡಿದ್ದರು. ಇನ್ನೂ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಿ, ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಪರೀಕ್ಷಾ ದಿನದಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಉಚಿತ ಸೇವೆ ಕೂಡ ಕಲ್ಪಿಸಲಾಗಿತ್ತು. ಇನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಕ್ಕಳ ಜೊತೆ ಮಾತನಾಡಿ, ಹೂ ಕೊಟ್ಟು ಆಲ್ ದಿ ಬೆಸ್ಟ್ ಹೇಳಿದ್ದರು. ಜೊತೆಗೆ ಪರೀಕ್ಷೆಗೆ ಕೈಗೊಂಡ ಕ್ರಮಗಳ ಬಗ್ಗೆ ಪರೀಶೀಲನೆ ಮಾಡಿದ್ದರು.

ಎಸ್​ಎಸ್​​ಎಲ್​​ಸಿ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ನೋಡುವುದು ಹೇಗೆ?

  • ಅಧಿಕೃತ ವೆಬ್‌ಸೈಟ್​ಗಳಾದ https://karresults.nic.in/ ಮತ್ತು kseab.karnataka.gov.in ಭೇಟಿ ನೀಡಿ.
  • ಮುಖಪುಟದಲ್ಲಿರುವ ‘SSLC ಫಲಿತಾಂಶ 2025’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
  • SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್​ಮೀಟ್​ ಮೇಲೆ ಕ್ಲಿಕ್ ಮಾಡಬೇಕು.
  • ಬಳಿಕ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನಗೊಳ್ಳುತ್ತದೆ.
  • ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: CBSE 10th Result 2025: ಮೇ ತಿಂಗಳ ಎರಡನೇ ವಾರದಲ್ಲಿ CBSE ಫಲಿತಾಂಶ ಪ್ರಕಟ ಸಾಧ್ಯತೆ

ಆಫ್‌ ಲೈನ್‌ನಲ್ಲಿ ಫಲಿತಾಂಶವನ್ನು ನೋಡಲು ಬಯಸುವವರು ತಮ್ಮ ನೋಂದಣಿ ಸಂಖ್ಯೆಯೊಂದಿಗೆ 56263 ಗೆ ಎಸ್​ಎಂಎಸ್​ ಕಳುಹಿಸುವ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:32 am, Wed, 30 April 25

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us