AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Results 2026: ಹಲವು ಗೊಂದಲಗಳ ಮಧ್ಯೆ SSLC ಪರೀಕ್ಷೆ ಫಲಿತಾಂಶ ಪ್ರಕಟ

ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ 2026: ಹಿಂದಿ ಪರೀಕ್ಷೆ ಸಂಬಂಧ ಉದ್ಭವಿಸಿರುವ ಹಲವು ಗೊಂದಲಗಳ ನಡುವೆ ಇದೀಗ ಎಸ್​ಎಸ್​​ಎಲ್​​ಸಿ ಪರೀಕ್ಷೆ ಫಲಿತಾಂಶ ಪ್ರಕಟ ಆಗಿದೆ. ಸಚಿವ ಮಧು ಬಂಗಾರಪ್ಪನವರು ಇಂದು(ಏಪ್ರಿಲ್ 22) ಸಿಎಂ ಸಿದ್ದರಾಮಯ್ಯನವರ ಭೇಟಿ ಬಳಿಕ ರಿಸಲ್ಟ್ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ಎಸ್​​ಎಸ್​​ಎಲ್​​ಸಿ ಪರೀಕ್ಷೆ ಫಲಿತಾಂಶ ಹೇಗೆ ಪರಿಶೀಲನೆ ಮಾಡುವುದು ಎನ್ನುವ ಡಿಟೇಲ್ಸ್ ಇಲ್ಲಿದೆ.

SSLC Results 2026: ಹಲವು ಗೊಂದಲಗಳ ಮಧ್ಯೆ SSLC ಪರೀಕ್ಷೆ ಫಲಿತಾಂಶ ಪ್ರಕಟ
Sslc Results 2026
ವಿನಯ್​ ಕಾಶಪ್ಪನವರ್​
| Edited By: |

Updated on:Apr 23, 2026 | 12:12 PM

Share

ಬೆಂಗಳೂರು, (ಏಪ್ರಿಲ್ 22): ಹಲವು ಗೊಂದಲಗಳ ನಡುವೆಯೂ ಎಸ್​​ಎಸ್​​ಎಲ್​​ಸಿ (10ನೇ ತರಗತಿ) ಫಲಿತಾಂಶ (SSLC Result 2026) ಪ್ರಕಟಕ್ಕೆ ಮುಹೂರ್ತ ನಿಗದಿಯಾಗಿದೆ.  ಇಂದು  (ಏಪ್ರಿಲ್ 23)  12 ಗಂಟೆಗೆ SSLC ಪರೀಕ್ಷೆ ಫಲಿತಾಂಶ ಪ್ರಕಟ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ  (Madhu bangarappa)  ಅವರು ಸಿಎಂ ಜೊತೆಗಿನ ಸಭೆ ಬಳಿಕ ಘೋಷಣೆ ಮಾಡಿದ್ದಾರೆ.  ಇನ್ನು ಹಿಂದಿ ವಿಷಯ ಸಂಬಂಧ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ಸಿಎಂ ಸಭೆಯಲ್ಲಿ ನಿರ್ಧರಿಸಲಾಗಿದೆ.

ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಅಂಕದ ಬದಲಿಗೆ ಗ್ರೇಡ್ ನೀಡಲು ತೀರ್ಮಾನಿಸಲಾಗಿತ್ತು. ಆದ್ರೆ, ಇದೀಗ ಹೈಕೋರ್ಟ್ ಗ್ರೇಡ ಬದಲು ಅಂಕ ನೀಡುವಂತೆ ಆದೇಶಿಸಿದೆ. ಈ ಸಂಬಂಧ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದು, ಸಭೆಯಲ್ಲಿ ಹೈಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: SSLC ಹಿಂದಿ ವಿಷಯಕ್ಕೆ ಗ್ರೇಡ್​​ ಬದಲಿಗೆ ಅಂಕ: ಹೈಕೋರ್ಟ್ ಆದೇಶ ಮರುಪರಿಶೀಲನಾ ಅರ್ಜಿ ಇತ್ಯರ್ಥ

ಏಪ್ರಿಲ್ 23 ಮಧ್ಯಾಹ್ನ 12 ಗಂಟೆ ರಿಸಲ್ಟ್​​​

ಸಿಎಂ ಭೇಟಿ ಬಳಿಕ ಮಧುಬಂಗಾರಪ್ಪ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ನಾಳೆ(ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನ್ಯಾಯಾಲಯದ ಆದೇಶ ಪಾಲಿಸಿ ಫಲಿತಾಂಶ ಪ್ರಕಟಿಸುತ್ತೇವೆ. ಫಲಿತಾಂಶ ಪ್ರಕಟಿಸುತ್ತಿರುವ ಬಗ್ಗೆ ಸಿಎಂ ಗಮನಕ್ಕೆ ತರಲಾಗಿದ್ದು, ಸಿಎಂ ಜೊತೆ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಹಾಜರಿದ್ದರು. ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ. ನಾಳೆ ಫಲಿತಾಂಶ ಪ್ರಕಟಿಸುವಾಗ ಎಲ್ಲಾ ವಿಚಾರಗಳನ್ನು ಹೇಳುತ್ತೇವೆ. ಗ್ರೇಸ್ ಮಾರ್ಕ್ಸ್ ಬಗ್ಗೆ ಹೇಳುತ್ತೇವೆ ಎಂದರು.

ಅಂಕ ಸುಧಾರಣೆಗೆ ಅವಕಾಶ ನೀಡಲು ಚಿಂತನೆ

ಹೈಕೋರ್ಟ್ ಆದೇಶದಂತೆ ಗ್ರೇಡ್ ಬದಲುತೃತೀಯ ಭಾಷೆಯ ವಿಷಯಕ್ಕೆ ಗ್ರೇಡ ಬದಲಾಗಿ ಅಂಕ ನೀಡಲು ನಿರ್ಧಾರವಾಗಿದೆ. ಈಗಾಗಲೇ ಎಲ್ಲ ವಿಷಯಗಳಿಗೆ ಅಂಕಗಳನ್ನೆ ನೀಡಿ ಮೌಲ್ಯಮಾಪನ ಮಾಡಲಾಗಿದೆ. ಹೀಗಾಗಿ ನಾಳೆ ಅಂಕಗಳನ್ನೇ ನೀಡಲು ಇಲಾಖೆ ಮುಂದಾಗಿದೆ. ತೃತೀಯ ಭಾಷೆಯ ಅಂಕಗಳ ಸುಧಾರಣೆಗೆ ಎರಡನೇ ಪರೀಕ್ಷೆ ಅವಕಾಶ ನೀಡಲಾಗುತ್ತಿದ್ದು, ಎರಡನೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಅವಕಾಶಕ್ಕೆ ಚಿಂತನೆಗಳು ನಡೆದಿವೆ. ಇದರೊಂದಿಗೆ ಯಾವುದೇ ಶುಲ್ಕ ಇಲ್ಲದೆ ಎರಡನೇ ಪರೀಕ್ಷೆ ಅಂಕ ಸುಧಾರಣೆಗೆ ಅವಕಾಶ ನೀಡಲು ಇಲಾಖೆ ಮುಂದಾಗಿದೆ.

Published On - 8:05 pm, Wed, 22 April 26

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ