Karnataka SSLC Result 2026: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ ಶೇ 94.1ರಷ್ಟು ಮಂದಿ ಪಾಸ್, 7 ಮಂದಿ ರಾಜ್ಯಕ್ಕೇ ಟಾಪ್!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2026​: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶಿಕ್ಷಣ ಇಲಾಖೆಯ ವೆಬ್​​ಸೈಟ್​ನಲ್ಲಿ ಪ್ರಕಟವಾಗಿದೆ. ನಂತರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಲಿಸ್ಟ್ ಪ್ರಕಟಿಸಿದರು. ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in ಮೂಲಕವೂ ಫಲಿತಾಂಶ ವೀಕ್ಷಿಸಿ ಅಂಕ ಪಟ್ಟಿ ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ.

Karnataka SSLC Result 2026: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ ಶೇ 94.1ರಷ್ಟು ಮಂದಿ ಪಾಸ್, 7 ಮಂದಿ ರಾಜ್ಯಕ್ಕೇ ಟಾಪ್!
ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ
Image Credit source: tv9

Updated on: Apr 23, 2026 | 2:00 PM

ಬೆಂಗಳೂರು, ಏಪ್ರಿಲ್ 23: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ (SSLC Result 2026) ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಅದಾದ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.

ಎಸ್​ಎಸ್​ಎಲ್​ಸಿ ಫಲಿತಾಂಶ: 7 ಮಂದಿ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್

ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.

ಈ ಬಾರಿಯೂ ಬಾಲಕಿಯರೇ ಮೇಲುಗೈ

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಕ್ಕಳು ತೇರ್ಗಡೆಯಾಗಿದ್ದಾರೆ. ಶೇ 96.18ರಷ್ಟು ಬಾಲಕಿಯರು, ಶೇ 91.94ರಷ್ಟು ಬಾಲಕರು ಪಾಸಾಗಿದ್ದಾರೆ. 3,92,922 ಬಾಲಕಿಯರ ಪೈಕಿ 3,77,922 ಬಾಲಕಿಯರು ತೇರ್ಗಡೆಯಾಗಿದ್ದಾರೆ. 3,77,287 ಬಾಲಕರ ಪೈಕಿ 3,46,872 ಬಾಲಕರು ತೇರ್ಗಡೆ ಹೊಂದಿದ್ದಾರೆ.

ಈ ಬಾರಿ ಎಸ್​ಎಸ್​ಎಲ್​ಸಿ ಮೂರನೇ ಪರೀಕ್ಷೆ ಇಲ್ಲ!

ಈ ಬಾರಿ ಉತ್ತಮ ಫಲಿತಾಂಶ ಬಂದಿರುವುದರಿಂದ ಮೂರನೇ ಪರೀಕ್ಷೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. ಮೇ 18 ರಿಂದ ಮೇ 25 ರ ವರೆಗೆ ಎರಡನೇ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ. ಉತ್ತರ ಕನ್ನಡ 3ನೇ ಸ್ಥಾನ (ಶೇ 98.09), ಹಾಸನ 4ನೇ ಸ್ಥಾನ (ಶೇ 97.51) ಗಳಿಸಿವೆ.

ಎಸ್​ಎಸ್​ಎಲ್​​ಸಿ ಫಲಿತಾಂಶ ಹೈಲೈಟ್ಸ್

  • ಸರ್ಕಾರಿ ಶಾಲೆಗಳಲ್ಲಿ ಶೇಕಡಾ 93.97ರಷ್ಟು ಫಲಿತಾಂಶ
  • ಸರ್ಕಾರಿ ಶಾಲೆಯ 3,06,341 ವಿದ್ಯಾರ್ಥಿಗಳ ಪೈಕಿ 2,87,878 ಮಂದಿ ತೇರ್ಗಡೆ
  • ಅನುದಾನಿತ ಶಾಲೆಗಳಲ್ಲಿ ಶೇಕಡಾ 92.44ರಷ್ಟು ಫಲಿತಾಂಶ
  • ಅನುದಾನಿತ ಶಾಲೆಯ 1,90,032 ವಿದ್ಯಾರ್ಥಿಗಳ ಪೈಕಿ 1,75,670 ಮಕ್ಕಳು ಪಾಸ್​
  • ಖಾಸಗಿ ಶಾಲೆಗಳಲ್ಲಿ ಶೇಕಡಾ 95.4ರಷ್ಟು ಮಕ್ಕಳು ತೇರ್ಗಡೆ
  • ಖಾಸಗಿ ಶಾಲೆಗಳಲ್ಲಿ 2,73,836 ವಿದ್ಯಾರ್ಥಿಗಳ ಪೈಕಿ 2,61,246 ಮಕ್ಕಳು ಪಾಸ್
  • 2,393 ಸರ್ಕಾರಿ ಶಾಲೆಗಳಲ್ಲಿ ಶೇ 100ರಷ್ಟು ಫಲಿತಾಂಶ
  • 824 ಅನುದಾನಿತ ಶಾಲೆಗಳಲ್ಲಿ ಶೇ 100ರಷ್ಟು ಫಲಿತಾಂಶ
  • 2959 ಖಾಸಗಿ ಶಾಲೆಗಳಲ್ಲಿ ಶೇ 100ರಷ್ಟು ಫಲಿತಾಂಶ
  • 5 ಅನುದಾನಿತ ಶಾಲೆಗಳಲ್ಲಿ ಈ ಬಾರಿ ಶೂನ್ಯ ಫಲಿತಾಂಶ
  • ಈ ಬಾರಿ 22 ಖಾಸಗಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ

ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

ಉಳಿದಂತೆ ಮಂಡ್ಯ 5ನೇ ಸ್ಥಾನ (ಶೇ 97.45), ಶಿರಸಿ 6ನೇ ಸ್ಥಾನ (ಶೇ 97.21), ಹಾವೇರಿ 7ನೇ ಸ್ಥಾನ (ಶೇ 96.87), ಕೊಡಗು 8ನೇ ಸ್ಥಾನ (ಶೇ 96.70), ಶಿವಮೊಗ್ಗ 9ನೇ ಸ್ಥಾನ (ಶೇ 96.56), ವಿಜಯನಗರ 10ನೇ ಸ್ಥಾನ (ಶೇ 96.39), ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ (ಶೇ 95.84), ಧಾರವಾಡ 12ನೇ ಸ್ಥಾನ (ಶೇ 95.59), ಕೋಲಾರ 13ನೇ ಸ್ಥಾನ (ಶೇ 95.50) ಗಳಿಸಿವೆ.

  • ದಕ್ಷಿಣ ಕನ್ನಡ ಜಿಲ್ಲೆ- 98.40%
  • ಉಡುಪಿ – 98.18%
  • ಉತ್ತರ ಕನ್ನಡ- 98.09%
  • ಹಾಸನ- 97.51%
  • ಮಂಡ್ಯ- 97.45%
  • ಶಿರಸಿ- 97.21%
  • ಹಾವೇರಿ- 96.87%
  • ಕೊಡಗು- 96.70%
  • ಶಿವಮೊಗ್ಗ- 96.56%
  • ವಿಜಯನಗರ- 96.39%
  • ಬೆಂಗಳೂರು ಗ್ರಾಮಾಂತರ – 95.84%
  • ಧಾರವಾಡ – 95.59%
  • ಕೋಲಾರ- 95.50%
  • ಬಾಗಲಕೋಟೆ- 95.42%
  • ಬೆಂಗಳೂರು ಉತ್ತರ- 95.34%
  • ಗದಗ- 95.24%
  • ಚಿಕ್ಕಮಗಳೂರು- 94.99%
  • ಬೆಳಗಾವಿ – 94.75%
  • ದಾವಣಗೆರೆ- 94.64%
  • ಮೈಸೂರು- 94.50%
  • ರಾಯಚೂರು- 94.41%
  • ವಿಜಯಪುರ- 94.17%
  • ಚಿಕ್ಕೋಡಿ- 94.09%
  • ಬಳ್ಳಾರಿ- 93.36%
  • ಕೊಪ್ಪಳ- 93.10%
  • ರಾಮನಗರ- 92.83%
  • ಚಿತ್ರದುರ್ಗ- 92.25%
  • ಬೀದರ್- 92.18%
  • ತುಮಕೂರು- 92.04%
  • ಚಾಮರಾಜನಗರ- 91.89%
  • ಯಾದಗಿರಿ- 91.89%
  • ಬೆಂಗಳೂರು ದಕ್ಷಿಣ- 91.65%
  • ಚಿಕ್ಕಬಳ್ಳಾಪುರ- 90.88%
  • ಮಧುಗಿರಿ- 90.26%
  • ಕಲಬುರಗಿ-85.06%

ಇದನ್ನೂ ಓದಿ: ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಉತ್ತಮ ಸಾಧನೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದೆ.

ಫಲಿತಾಂಶದ ಲೈವ್ ಮುಖ್ಯಾಂಶಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ

Published On - 12:02 pm, Thu, 23 April 26

Loading...
Unable to load recommendations.
Follow Us