AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC District Wise Result: ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಜಿಲ್ಲಾವಾರು ಫಲಿತಾಂಶ 2026: 2025-26ನೇ ಸಾಲಿನ ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಸುದ್ದಿಗೋಷ್ಠಿ ನಡೆಸಿ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಈ ಬಾರಿ ಫಲಿತಾಂಶದಲ್ಲಿ ಯಾವ ಜಿಲ್ಲೆ ಫಸ್ಟ್, ಯಾವ ಜಿಲ್ಲೆ ಲಾಸ್ಟ್? ಎನ್ನುವ ಕುತೂಹಲಕ್ಕೂ ಅಂತಿಮವಾಗಿ ತೆರೆಬಿದ್ದಿದ್ದು, ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲಾವಾರು ಸ್ಥಾನದ ಮಾಹಿತಿ ಇಲ್ಲಿದೆ.

SSLC District Wise Result: ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ
ಸಚಿವ ಮಧು ಬಂಗಾರಪ್ಪ ಅವರಿಂದ ಮಾಹಿತಿImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Apr 23, 2026 | 12:46 PM

Share

ಬೆಂಗಳೂರು, ಏಪ್ರಿಲ್​​ 23: 2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ (Karnataka SSLC 10th Result 2026) ಏಪ್ರಿಲ್‌ 23ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಂಡಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್​​ ಸಂಬಂಧಿತ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಮಂದಿ ಪಾಸ್​​ ಆಗಿದ್ದಾರೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೂ ಒಟ್ಟು 2,870 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆದಿತ್ತು.

ದಕ್ಷಿಣ ಕನ್ನಡ ಫಸ್ಟ್​​, ಕಲಬುರಗಿ ಲಾಸ್ಟ್​​

ಈ ಬಾರಿಯ ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ  ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊಂದಿಗೆ ಕಲಬುರಗಿಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಇದನ್ನೂ ಓದಿ: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ, ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಜಿಲ್ಲಾವಾರು ಫಲಿತಾಂಶ

  1. ದಕ್ಷಿಣ ಕನ್ನಡ ಜಿಲ್ಲೆ- 98.40%
  2. ಉಡುಪಿ – 98.18%
  3. ಉತ್ತರ ಕನ್ನಡ- 98.09%
  4. ಹಾಸನ- 97.51%
  5. ಮಂಡ್ಯ- 97.45%
  6. ಶಿರಸಿ- 97.21%
  7. ಹಾವೇರಿ- 96.87%
  8. ಕೊಡಗು- 96.70%
  9. ಶಿವಮೊಗ್ಗ- 96.56%
  10. ವಿಜಯನಗರ- 96.39%
  11. ಬೆಂಗಳೂರು ಗ್ರಾಮಾಂತರ – 95.84%
  12. ಧಾರವಾಡ – 95.59%
  13. ಕೋಲಾರ- 95.50%
  14. ಬಾಗಲಕೋಟೆ- 95.42%
  15. ಬೆಂಗಳೂರು ಉತ್ತರ- 95.34%
  16. ಗದಗ- 95.24%
  17. ಚಿಕ್ಕಮಗಳೂರು- 94.99%
  18. ಬೆಳಗಾವಿ – 94.75%
  19. ದಾವಣಗೆರೆ- 94.64%
  20. ಮೈಸೂರು- 94.50%
  21. ರಾಯಚೂರು- 94.41%
  22. ವಿಜಯಪುರ- 94.17%
  23. ಚಿಕ್ಕೋಡಿ- 94.09%
  24. ಬಳ್ಳಾರಿ- 93.36%
  25. ಕೊಪ್ಪಳ- 93.10%
  26. ರಾಮನಗರ- 92.83%
  27. ಚಿತ್ರದುರ್ಗ- 92.25%
  28. ಬೀದರ್- 92.18%
  29. ತುಮಕೂರು- 92.04%
  30. ಚಾಮರಾಜನಗರ- 91.89%
  31. ಯಾದಗಿರಿ- 91.89%
  32. ಬೆಂಗಳೂರು ದಕ್ಷಿಣ- 91.65%
  33. ಚಿಕ್ಕಬಳ್ಳಾಪುರ- 90.88%
  34. ಮಧುಗಿರಿ- 90.26%
  35. ಕಲಬುರಗಿ-85.06%

7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

SSLC ಪರೀಕ್ಷೆಯಲ್ಲಿ ಬರೋಬ್ಬರಿ 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರ ಧನುಷ್​, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ವಿದ್ಯಾರ್ಥಿ ಸುಖದೇವ್​ಗೆ​ ಸಂಪೂರ್ಣ ಅಂಕ ದೊರೆತಿದೆ.

ಈ ಬಾರಿಯೂ ಬಾಲಕಿಯರೇ ಮೇಲುಗೈ

SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೈಕಿ  ಶೇ.96.18ರಷ್ಟು ಬಾಲಕಿಯರು, ಶೇ.91.94ರಷ್ಟು ಬಾಲಕರು ಪಾಸ್ ಆಗಿದ್ದಾರೆ. 3,92,922 ಬಾಲಕಿಯರ ಪೈಕಿ 3,77,922 ಬಾಲಕಿಯರು ತೇರ್ಗಡೆ ಹೊಂದಿದ್ದರೆ, 3,77,287 ಬಾಲಕರ ಪೈಕಿ 3,46,872 ಬಾಲಕರು ಉತ್ತೀರ್ಣಗೊಂಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:21 pm, Thu, 23 April 26

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ