
ಬೆಂಗಳೂರು, ಏಪ್ರಿಲ್ 23: 2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ (Karnataka SSLC 10th Result 2026) ಏಪ್ರಿಲ್ 23ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಂಡಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್ ಸಂಬಂಧಿತ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್ಎಸ್ಎಲ್ಸಿಯಲ್ಲಿ ಶೇ.94.1 ಮಂದಿ ಪಾಸ್ ಆಗಿದ್ದಾರೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೂ ಒಟ್ಟು 2,870 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆದಿತ್ತು.
ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊಂದಿಗೆ ಕಲಬುರಗಿಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ
SSLC ಪರೀಕ್ಷೆಯಲ್ಲಿ ಬರೋಬ್ಬರಿ 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ವಿದ್ಯಾರ್ಥಿ ಸುಖದೇವ್ಗೆ ಸಂಪೂರ್ಣ ಅಂಕ ದೊರೆತಿದೆ.
SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೈಕಿ ಶೇ.96.18ರಷ್ಟು ಬಾಲಕಿಯರು, ಶೇ.91.94ರಷ್ಟು ಬಾಲಕರು ಪಾಸ್ ಆಗಿದ್ದಾರೆ. 3,92,922 ಬಾಲಕಿಯರ ಪೈಕಿ 3,77,922 ಬಾಲಕಿಯರು ತೇರ್ಗಡೆ ಹೊಂದಿದ್ದರೆ, 3,77,287 ಬಾಲಕರ ಪೈಕಿ 3,46,872 ಬಾಲಕರು ಉತ್ತೀರ್ಣಗೊಂಡಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:21 pm, Thu, 23 April 26