AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Result: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಗೊಂದಲ ಬೇಡ ಈ ಅಂಶಗಳನ್ನು ನೆನಪಿಡಿ

KSEEB Class 10 Results: ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

Karnataka SSLC Result: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಗೊಂದಲ ಬೇಡ ಈ ಅಂಶಗಳನ್ನು ನೆನಪಿಡಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 09, 2021 | 3:50 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ (SSLC Result 2021) ಲಭ್ಯವಾಗಿದೆ. ಇಂದು (ಆಗಸ್ಟ್ 09) ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಫಲಿತಾಂಶ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

ಈ ಬಾರಿ ಜುಲೈ 19 ಹಾಗು 22 ರಂದು ಎರಡು ದಿನಗಳ ಕಾಲ ಎಸ್ಎಸ್ಎಲ್​ಸಿ ಪರೀಕ್ಷೆ ನಡೆದಿದ್ದು, ಶೇ. 99.65 ವಿದ್ಯಾರ್ಥಿಗಳು ಹಾಜರಾಗಿದ್ದರು. ಕೊರೊನಾ ಆತಂಕದ ನಡುವೆಯೂ ರಾಜ್ಯದಲ್ಲಿ ಈ ವರ್ಷ 8,19,694 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳನ್ನು ಒಂದು ಪ್ರಶ್ನೆ ಪತ್ರಿಕೆಯಲ್ಲಿ ಹಾಗೂ ಭಾಷಾ ವಿಷಯಗಳನ್ನು ಒಂದು ಪ್ರಶ್ನೆ ಪತ್ರಿಕೆಯಲ್ಲಿ ನೀಡಲಾಗಿದ್ದು, ಕನ್ನಡದಲ್ಲಿ ಒಂದು ಕೃಪಾಂಕ ವಿದ್ಯಾರ್ಥಿಗಳಿಗೆ ದೊರೆಯಲಿದೆ.

ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್​ಎಸ್​ಎಲ್​ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ 1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ 2. ಸ್ಕ್ರೀನ್​ನಲ್ಲಿ ರಿಸಲ್ಟ್​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ 3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ 4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ 5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ 6. ತಾತ್ಕಾಲಿಕ ಅಂಕಪಟ್ಟಿ ಆನ್​ಲೈನ್​ನಲ್ಲೇ ಲಭ್ಯವಾಗಲಿದ್ದು, ಅಲ್ಲಿಂದಲೇ ಡೌನ್​ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.

ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ? ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.

ಈ ವೆಬ್​ಸೈಟ್​ಗಳಲ್ಲಿ ಫಲಿತಾಂಶ ವೀಕ್ಷಿಸಿ sslc.karnataka.gov.in kseeb.kar.nic.in karresults.nic.in

(Karnataka SSLC Result KSEEB Class 10 Results to be declared today August 9 how to check Result)

Published On - 7:24 am, Mon, 9 August 21

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ