Karnataka SSLC Result 2024: ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ, ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ?

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2024: 2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶಕ್ಕೆ ಸಮಯ ನಿಗದಿಯಾಗಿದೆ. ಇಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದೆ. ರಿಸಲ್ಟ್​ ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ? ಇಲ್ಲಿದೆ ಮಾಹಿತಿ.

Karnataka SSLC Result 2024: ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ, ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ?
ಮೇ 9ಕ್ಕೆ ಎಸ್​ಎಸ್​ಎಲ್​ಸಿ ಫಲಿತಾಂಶ, ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ?
Follow us
ರಮೇಶ್ ಬಿ. ಜವಳಗೇರಾ
| Updated By: ಅಕ್ಷಯ್​ ಪಲ್ಲಮಜಲು​​

Updated on:May 09, 2024 | 9:22 AM

ಬೆಂಗಳೂರು, (ಮೇ 08) : 2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶಕ್ಕೆ (Karnataka sslc exam result 2024 ) ಸಮಯ ನಿಗದಿಯಾಗಿದೆ. ಇಂದು (ಮೇ 09) ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್. ಮಂಜುಶ್ರೀ ಅವರುಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು ದಿನಾಂಕ 25.03.2024 ರಿಂದ 06.04.2024 ರವರೆಗೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ಇಂದು ಇವರ ಭವಿಷ್ಯ ನಿರ್ಧಾರವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲೇನಿದೆ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಫಲಿತಾಂಶದ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಮಾರ್ಚ್/ಏಪ್ರಿಲ್ 2024ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ತಿಳಿಸಲಾಗಿದೆ ಎಂದು ತಿಳಿಸಿದೆ.

ಎಸ್​ಎಸ್​ಎಲ್​​ಸಿ ರಿಸಲ್ಟ್ ಯಾವ್ ವೆಬ್​​ಸೈಟ್​ನಲ್ಲಿ ದೊರೆಯುತ್ತದೆ?

ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

ಎಸ್​ಎಸ್​ಎಲ್​​ಸಿ ಫಲಿತಾಂಶ ನೋಡುವುದು, ಡೌನ್​ಲೋಡ್ ಮಾಡುವುದು ಹೇಗೆ?

  • ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿ
  • ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
  • ಹೊಸ ಲಾಗಿನ್ ಪುಟವು ತೆರೆಯುತ್ತದೆ
  • ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
  • ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್​ಲೋಡ್ ಮಾಡಿ

ಕಳೆದ ವರ್ಷ, ಕರ್ನಾಟಕ ಬೋರ್ಡ್ ಎಸ್​ಎಸ್​ಎಲ್​ಸಿ ಫಲಿಶಾಂಶವನ್ನು ಮೇ 08 ರಂದು ಘೋಷಿಸಿತ್ತು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ 83.89 ರಷ್ಟು ದಾಖಲಾಗಿತ್ತು. ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಎಸ್​ಎಸ್​ಎಲ್​​ಸಿಯಲ್ಲಿ ಅನುತ್ತೀರ್ಣರಾದರೆ ಮುಂದೇನು?

ನಾಳೆ ಫಲಿತಾಂಶದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಚಿಂತಿಸುವ ಅಗತ್ಯವಿಲ್ಲ. ಈ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು 3 ಬಾರಿ ಬರೆಯಬಹುದು. ಈ ಹಿಂದೆ ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಸಾಲಿನಿಂದ ಪಾಸಾಗಲಿ, ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು. 3 ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ. ಆದ್ದರಿಂದ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದರೆ / ಕಡಿಮೆ ಅಂಕಗಳು ಬಂದರೆ ಪರೀಕ್ಷೆ-2 ತೆಗೆದುಕೊಳ್ಳಬಹುದು. ಪರೀಕ್ಷೆ-2 ಅನುತ್ತೀರ್ಣರಾದರೆ / ಕಡಿಮೆ ಅಂಕ ಬಂದರೆ ಪರೀಕ್ಷೆ-3 ತೆಗೆದುಕೊಳ್ಳಬಹುದು. ಇದರಲ್ಲಿ ಯಾವುದೇ ಪರೀಕ್ಷೆ ಪೂರಕ ಪರೀಕ್ಷೆ ಆಗಿರುವುದಿಲ್ಲ. ಅಂಕಪಟ್ಟಿಯಲ್ಲಿ ಫ್ರೆಶ್ ಸ್ಟೂಡೆಂಟ್‌ ಎಂದೇ ನಮೂದು ಆಗುತ್ತದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Wed, 8 May 24

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು