AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Supplementary Exam Result: ಜೂನ್​ 30 ರಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ; ಪರಿಶೀಲಿಸಲು ಇಲ್ಲಿದೆ ಲಿಂಕ್​​

Karnataka SSLC Supplementary Exam Result 2023: ನಾಳೆ (ಜೂ.30) ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.

SSLC Supplementary Exam Result: ಜೂನ್​ 30 ರಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ; ಪರಿಶೀಲಿಸಲು ಇಲ್ಲಿದೆ ಲಿಂಕ್​​
ಸಾಂದರ್ಭಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Jun 29, 2023 | 6:32 PM

Share

ಬೆಂಗಳೂರು: ನಾಳೆ (ಜೂ.30) ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ (SSLC Supplementary Exam Result) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂ.12ರಿಂದ ಜೂ.19ರವರೆಗೆ ನಡೆದಿದ್ದವು.

ಕರ್ನಾಟಕ SSLC ಪೂರಕ ಫಲಿತಾಂಶ ಹೇಗೆ ಪರಿಶೀಲಿಸುವುದು

  1. karresults.nic.in ಕರ್ನಾಟಕ ಫಲಿತಾಂಶಗಳ ಅಧಿಕೃತ ಸೈಟ್‌ಗೆ ಭೇಟಿ ನೀಡಿ.
  2. ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ SSLC ಪೂರಕ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು (Submit) ಮೇಲೆ ಕ್ಲಿಕ್ ಮಾಡಿ.
  4. ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಕಾಣುತ್ತದೆ.
  5. ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.
  6. ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿ.

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಫಲಿತಾಂಶಗಳನ್ನು ಮೇ 8 ರಂದು ಪ್ರಕಟವಾಗಿತ್ತು. ಕರ್ನಾಟಕದಲ್ಲಿ ಒಟ್ಟು 8,35,102 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದರು, ಅವರಲ್ಲಿ 7,00,619  ಅಂದರೇ ಶೇಕಡಾ 83.89 ರಷ್ಟು ಉತ್ತೀರ್ಣರಾಗಿದ್ದಾರೆ.

ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:21 pm, Thu, 29 June 23