AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Supplementary Result 2024: 10ನೇ ತರಗತಿ ಪೂರಕ ಫಲಿತಾಂಶ ಶೀಘ್ರದಲ್ಲೇ ಬಿಡುಗಡೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶೀಘ್ರದಲ್ಲೇ ಎಸ್​​ಎಸ್​ಎಲ್​​ಸಿ ಪೂರಕ ಫಲಿತಾಂಶ ಬಿಡುಗಡೆ ಮಾಡಲಿದೆ. ಕೆಎಸ್​ಇಎಬಿ ಇಂದೇ (ಜು.05) ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಎಸ್​​ಎಸ್​ಎಲ್​​ಸಿ ಪೂರಕ ಫಲಿತಾಂಶ ಹೇಗೆ ಪರಿಶೀಲಿಸುವುದು ಇಲ್ಲಿದೆ ಮಾಹಿತಿ.

Karnataka SSLC Supplementary Result 2024: 10ನೇ ತರಗತಿ ಪೂರಕ ಫಲಿತಾಂಶ ಶೀಘ್ರದಲ್ಲೇ ಬಿಡುಗಡೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Jul 05, 2024 | 1:23 PM

Share

ಬೆಂಗಳೂರು, ಜುಲೈ 05: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSREB) ಶೀಘ್ರದಲ್ಲೇ ಎಸ್​​ಎಸ್​ಎಲ್​​ಸಿ (SSLC) ಪೂರಕ ಫಲಿತಾಂಶ (Supplementary Result) ಬಿಡುಗಡೆ ಮಾಡಲಿದೆ. ಕೆಎಸ್​ಇಎಬಿ ಇಂದೇ (ಜು.05) ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಮತ್ತು ಫಲಿತಾಂಶ ಪಟ್ಟಿ ಡೌನ್​ಲೋಡ್​ ಮಾಡಲು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಕೆಎಸ್​ಇಎಬಿ ಅಧಿಕೃತ ವೆಬ್​​ಸೈಟ್​ kseab.karnataka.gov.in ಅಥವಾ  karresults.nic.inಗೆ ಭೇಟಿ ನೀಡಿ.

ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳು ಜೂನ್​ 14 ರಿಂದ 21ರವರಗೆ ನಡೆದವು. ಕೆಎಸ್​​ಇಎಬಿ ಮೇ 9 ರಂದು ಕರ್ನಾಟಕ ಎಸ್​ಎಸ್​ಎಲ್​ಸಿ ವಾರ್ಷಿಕ ಫಲಿತಾಂಶವನ್ನು ಪ್ರಕಟಿಸಿತ್ತು. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣವಾಗದ ಅಥವಾ ಇನ್ನೂ ಹೆಚ್ಚಿನ ಅಂಕಗಳನ್ನು ಬಯಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.

ಫಲಿತಾಂಶ ಪರಿಶೀಲಿಸುವುದು ಹೇಗೆ

ಹಂತ 1: kseab.karnataka.gov.in ಅಥವಾ karresults.nic.inನಲ್ಲಿ ಕೆಎಸ್​ಇಎಬಿ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.

ಹಂತ 2: ಮುಖಪುಟದಲ್ಲಿ ಕರ್ನಾಟಕ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಲಿಂಕ್​ ಅನ್ನು ಕ್ಲಿಕ್​ ಮಾಡಿ.

ಹಂತ 3: ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.

ಹಂತ 4: Submit ಬಟನ್​ ಮೇಲೆ ಕ್ಲಿಕ್​ ಮಾಡಿ

ಹಂತ 5: ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ.

ಹಂತ 6: ಕರ್ನಾಟಕ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಡೌನ್​ಲೋಡ್​ ಮಾಡಿ ಮತ್ತು ಪ್ರಿಂಟ್​ಔಟ್​ ಅನ್ನು ತೆಗೆದುಕೊಳ್ಳಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:50 pm, Fri, 5 July 24

Follow Us
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ