ಬೆಂಗಳೂರು, ಜುಲೈ 05: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSREB) ಶೀಘ್ರದಲ್ಲೇ ಎಸ್ಎಸ್ಎಲ್ಸಿ (SSLC) ಪೂರಕ ಫಲಿತಾಂಶ (Supplementary Result) ಬಿಡುಗಡೆ ಮಾಡಲಿದೆ. ಕೆಎಸ್ಇಎಬಿ ಇಂದೇ (ಜು.05) ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಮತ್ತು ಫಲಿತಾಂಶ ಪಟ್ಟಿ ಡೌನ್ಲೋಡ್ ಮಾಡಲು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಕೆಎಸ್ಇಎಬಿ ಅಧಿಕೃತ ವೆಬ್ಸೈಟ್ kseab.karnataka.gov.in ಅಥವಾ karresults.nic.inಗೆ ಭೇಟಿ ನೀಡಿ.
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಜೂನ್ 14 ರಿಂದ 21ರವರಗೆ ನಡೆದವು. ಕೆಎಸ್ಇಎಬಿ ಮೇ 9 ರಂದು ಕರ್ನಾಟಕ ಎಸ್ಎಸ್ಎಲ್ಸಿ ವಾರ್ಷಿಕ ಫಲಿತಾಂಶವನ್ನು ಪ್ರಕಟಿಸಿತ್ತು. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣವಾಗದ ಅಥವಾ ಇನ್ನೂ ಹೆಚ್ಚಿನ ಅಂಕಗಳನ್ನು ಬಯಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.
ಹಂತ 1: kseab.karnataka.gov.in ಅಥವಾ karresults.nic.inನಲ್ಲಿ ಕೆಎಸ್ಇಎಬಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ ಕರ್ನಾಟಕ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3: ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಹಂತ 4: Submit ಬಟನ್ ಮೇಲೆ ಕ್ಲಿಕ್ ಮಾಡಿ
ಹಂತ 5: ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ.
ಹಂತ 6: ಕರ್ನಾಟಕ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಡೌನ್ಲೋಡ್ ಮಾಡಿ ಮತ್ತು ಪ್ರಿಂಟ್ಔಟ್ ಅನ್ನು ತೆಗೆದುಕೊಳ್ಳಿ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:50 pm, Fri, 5 July 24