AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವಿ ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ರಾಜ್ಯದಲ್ಲಿ ಹೊಸದಾಗಿ 11 ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಪ್ರಾರಂಭ

ಕಾಲೇಜುಗಳಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಮೂಲ ಸೌಕರ್ಯ ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುವ ಹಾಗೂ ಉತ್ತಮ ಉದ್ಯೋಗಾವಕಾಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅವಕಾಶ ಕಲ್ಪಿಸುವ ಬಿ.ಕಾಂ ಮತ್ತು ಬಿಸಿಎ ಕೋರ್ಸ್​ಗಳಿಗಷ್ಟೇ ಹೆಚ್ಚುವರಿ ಸಂಜೆ ಕಾಲೇಜುಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.

ಪದವಿ ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ರಾಜ್ಯದಲ್ಲಿ ಹೊಸದಾಗಿ 11 ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಪ್ರಾರಂಭ
ಸಾಂಕೇತಿಕ ಚಿತ್ರ
TV9 Web
| Updated By: Skanda|

Updated on: Aug 25, 2021 | 6:59 AM

Share

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಹೊಸದಾಗಿ 11 ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಅಧಿಕೃತ ಆದೇಶವನ್ನೂ ನೀಡಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಆದೇಶ ಹೊರಡಿಸಿದ್ದು, ಸಂಧ್ಯಾ ಶಕ್ತಿ ಯೋಜನೆಯಡಿ 11 ಹೊಸ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಆಯ್ದ ಮಹಾನಗರ ಪಾಲಿಕೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜುಗಳ ಪ್ರಾರಂಭ ಮಾಡಲಾಗುತ್ತಿದ್ದು, 2021-22ನೇ ಸಾಲಿನ ಅಯವ್ಯಯ ಭಾಷಣದ ಘೋಷಣೆಯಂತೆ ಈ ಯೋಜನೆಗೆ ಮುನ್ನುಡಿ ಹಾಡಲಾಗಿದೆ. ಕಾಲೇಜುಗಳಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಮೂಲ ಸೌಕರ್ಯ ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುವ ಹಾಗೂ ಉತ್ತಮ ಉದ್ಯೋಗಾವಕಾಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅವಕಾಶ ಕಲ್ಪಿಸುವ ಬಿ.ಕಾಂ ಮತ್ತು ಬಿಸಿಎ ಕೋರ್ಸ್​ಗಳಿಗಷ್ಟೇ ಹೆಚ್ಚುವರಿ ಸಂಜೆ ಕಾಲೇಜುಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.

ಹೆಚ್ಚುವರಿ ಸಂಜೆ ಕಾಲೇಜುಗಳ ವ್ಯಾಸಂಗಕ್ಕೆ ಸರ್ಕಾರ ಅವಕಾಶ ನೀಡಿದ ಕಾರಣ ರಾಜ್ಯದ ಒಟ್ಟು 11 ನಗರ ಪಾಲಿಕೆಯಲ್ಲಿ ತಲಾ ಒಂದು ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಆರಂಭವಾಗಲಿದ್ದು, ಹೊಸದಾಗಿ ಆರಂಭವಾಗುತ್ತಿರುವ ಸಂಜೆ ಕಾಲೇಜುಗಳ ಪಟ್ಟಿ ಹೀಗಿದೆ:

1. ಸರ್ಕಾರಿ ಆರ್.ಸಿ ಕಾಲೇಜು, ಬೆಂಗಳೂರು 2. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಬೆಳಗಾವಿ 3. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಿ.ಹೆಚ್.ರಸ್ತೆ ತುಮಕೂರು 4. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುವೆಂಪು ನಗರ ಮೈಸೂರು 5. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿವಮೊಗ್ಗ 6. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂ.ಸಿಸಿ ಬ್ಲಾಕ್ ದಾವಣಗೆರೆ 7. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು 8. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಮಾರೇಶ್ವರನಗರ, ಧಾರವಾಡ 9. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನವಬಾಗ್ ಖಾಜಾ ಕಾಲೋನಿ, ಬಿಜಾಪುರ 10. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೇಡಂ ರಸ್ತೆ, ಗುಲ್ಬರ್ಗಾ 11. ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿ

ಇದನ್ನೂ ಓದಿ: ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್; ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕ್ರಾಂತಿ: ಬಸವರಾಜ ಬೊಮ್ಮಾಯಿ 

School Reopening: ನಿಮ್ಮ ಹತ್ತಿರದ ಯಾವುದೇ ಶಾಲೆಗೆ ಹೋಗಿ ಪಾಠ ಕೇಳಿ; ವಲಸೆ ಮಕ್ಕಳಿಗೆ ಶಿಕ್ಷಣ ಸಚಿವರಿಂದ ಶುಭ ಸುದ್ದಿ

(Karnataka state government announces 11 First grade evening colleges in Karnataka)

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ