Karnataka Teachers Recruitment: ಶಿಕ್ಷಕರ ನೇಮಕಾತಿ ವಯೋಮಿತಿಯಲ್ಲಿ 2 ವರ್ಷ ಏರಿಕೆ ಮಾಡಿದ ಸರ್ಕಾರ
ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ನಿಯಮಾವಳಿಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.
ಬೆಂಗಳೂರು: ಶಿಕ್ಷಕರ ನೇಮಕಾತಿಗೆ (Teachers Recruitment) ಸಂಬಂಧಿಸಿದಂತೆ ಹೊಸ ನಿಯಮಾವಳಿಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಸರ್ಕಾರ ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ (Age Relaxation) ಮಾಡಿದ್ದು, ಎಲ್ಲ ವರ್ಗಗಳಿಗೂ ವಯೋಮಿತಿಯಲ್ಲಿ 2 ವರ್ಷ ಏರಿಕೆ ಮಾಡಿದೆ. SC, ST, ಪ್ರವರ್ಗ 1, ವಿಕಲಚೇತನರಿಗೆ 47 ವರ್ಷ, ಪ್ರವರ್ಗ 2, 2ಬಿ, 3ಎ ಮತ್ತು 3ಬಿಗೆ 45 ವರ್ಷ ಮತ್ತು ಸಾಮಾನ್ಯ ವರ್ಗಗಳಿಗೆ 42 ವರ್ಷ ಮೀರಿರಬಾರದು ಎಂದು ಹೇಳಿದೆ.
ಶಿಕ್ಷಕರ ಹುದ್ದೆಗೆ ಆಯ್ಕೆಯಾಗಲು ಇದ್ದ ಕನಿಷ್ಠ ಅಂಕಗಳಲ್ಲೂ ಇಳಿಕೆ ಮಾಡಲಾಗಿದ್ದು, ಸರ್ಕಾರ ಕಟಾಫ್ ಅಂಕಗಳನ್ನು 60ರಿಂದ 50ಕ್ಕೆ ಇಳಿಸಿದೆ.
2nd PUC: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ, ನಾಳೆಯಿಂದಲೇ ಆರಂಭ
ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ (2nd PUC Supplementary Exam Time Table) ಪ್ರಕಟವಾಗಿದೆ. ನಾಳೆಯಿಂದ (ಆಗಸ್ಟ್ 12) ಪರೀಕ್ಷೆ ಆರಂಭವಾಗಲಿದ್ದು, ಆಗಸ್ಟ್ 25ರವರೆಗೆ ನಡೆಯಲಿದೆ. ಆಗಸ್ಟ್ 12ರಂದು ಕನ್ನಡ, ಅರೇಬಿಕ್, 13ಕ್ಕೆ ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ, 16ಕ್ಕೆ ಹಿಂದಿ, 17ಕ್ಕೆ ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಗಣಿತ, 18ಕ್ಕೆ ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣಶಾಸ್ತ್ರ, ಗೃಹವಿಜ್ಞಾನ, 19ಕ್ಕೆ ರಾಜ್ಯಶಾಸ್ತ್ರ, ಗಣಿತಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಆಗಸ್ಟ್ 20ಕ್ಕೆ ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ, 22ಕ್ಕೆ ಇಂಗ್ಲೀಷ್, 23ಕ್ಕೆ ಅರ್ಥಶಾಸ್ತ್ರ, ಜೀವಶಾಸ್ತ್ರ, 24ಕ್ಕೆ ಇತಿಹಾಸ, ಸಂಖ್ಯಾಶಾಸ್ತ್ರ, 25ಕ್ಕೆ ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರಶ್ನಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಪ್ರತಿ ತಾಲ್ಲೂಕಿನಲ್ಲಿ ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ತಹಶೀಲ್ದಾರ್, ಬಿಇಒ ಮತ್ತು ಪ್ರಾಂಶುಪಾಲರು ಇರುತ್ತಾರೆ. ಪ್ರಶ್ನಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.
ಪ್ರಶ್ನಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನಕ್ಕೆ ಪೊಲೀಸ್ ಬಂದೋಬಸ್ತ್ ಇರುತ್ತದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿಯೂ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ ಎಂದು ಪಿಯು ಮಂಡಳಿ ತಿಳಿಸಿದೆ.
ಮತ್ತಷ್ಟು ಶಿಕ್ಷಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:30 pm, Fri, 12 August 22