KARTET 2022: ಟಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ, ಡೌನ್‌ಲೋಡ್ ಮಾಡುವ ಕ್ರಮ ಇಲ್ಲಿದೆ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆಯಾಗಿದ್ದು, ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಈ ಕೆಳಗೆ ನೀಡಲಾಗಿರುವ ಕ್ರಮಗಳನ್ನು ಅನುಸರಿಸಿ.
ಬೆಂಗಳೂರು: ಇದೇ ನವೆಂಬರ್ 6ರಂದು ನಡೆಯಲಿರುವ ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ (KARTET-2022) ಪ್ರವೇಶ ಪತ್ರ (Hall Ticket) ಬಿಡುಗಡೆಯಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ನಿಂದ ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ- http://schooleducation.kar.nic.in ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
NEET- PG: ಸೇವಾನಿರತ ವೈದ್ಯರ ಪಿಜಿ ಸೀಟು ಮೀಸಲಾತಿ ಇಳಿಕೆ ಆದೇಶ ರದ್ದು
ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ http://schooleducation.kar.nic.in ಗೆ ಭೇಟಿ ನೀಡಿ, ಅಭ್ಯರ್ಥಿಗಳು ತಮ್ಮ ಯೂಸರ್ ಐಡಿ, ಮತ್ತು ಪಾಸ್‌ವರ್ಡ್ ಅನ್ನು ನಮೂದಿಸುವ ಮೂಲಕ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡ ಮೇಲೆ ವೆಬ್‌ಸೈಟ್‌ನಲ್ಲಿ ಸೂಚನಾ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು, ಕೂಲಂಕಷವಾಗಿ ಓದಿ ಅರ್ಥೈಸಿಕೊಂಡು ಅದರಂತೆ ಸಿದ್ಧತೆಯೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ಸುತ್ತೋಲೆಯಲ್ಲಿ ತಿಳಿಸಿದೆ.
ಆಯಾ ಜಿಲ್ಲೆಯ ಪರೀಕ್ಷಾ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನೊಳಗೊಂಡ ಪಟ್ಟಿಯನ್ನು ಸಹ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಣತೆ ಮಾಹಿತಿ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.
ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವ ಕ್ರಮ ಇಂತಿದೆ
* ಅಭ್ಯರ್ಥಿಗಳು ಮೊದಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ http://schooleducation.kar.nic.in ಗೆ ಭೇಟಿ ನೀಡಬೇಕು.
* ಮುಖಪುಟದಲ್ಲಿ ಲಭ್ಯವಿರುವ ‘KARTET 2022 ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2022’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. * ನಂತರ ನಿಮಗೆ ಹೊಸ ವೆಬ್‌ಪುಟ ತೆರೆದುಕೊಳ್ಳುತ್ತದೆ. * ಆ ಪುಟದಲ್ಲಿ ಅರ್ಜಿದಾರರ ಹೆಸರು, ಪಾಸ್‌ವರ್ಡ್, ಜನ್ಮ ದಿನಾಂಕ ಸೇರಿದಂತೆ ಇನ್ನಿತರ (ಅಲ್ಲಿ ಕೇಳಿದೆ) ಮಾಹಿತಿಯನ್ನು ನಮೂದಿಸಿ. * ನಂತರ ಸ್ಕ್ರೀನ್ ಮೇಲೆ ಟಿಇಟಿ -2022ರ ಪ್ರವೇಶ ಪತ್ರ ಓಪನ್ ಆಗುತ್ತೆ. * ಬಳಿಕ ಅದನ್ನು ಡೌನ್‌ಲೋಡ್ ಎನ್ನುವುದರ ಮೇಲೆ ಕ್ಲಿಕ್ ಮಾಡಿದ್ರೆ ಪ್ರವೇಶ ಪತ್ರ ಡೌನ್ ಲೋಡ್ ಆಗಲಿದ್ದು, ನಂತರ ನೀವು ಅದನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬಹುದು.
Published On - 9:28 pm, Wed, 26 October 22