KCET 2024 Registration: ಕರ್ನಾಟಕ CET ನೋಂದಣಿಗೆ ಇಂದೇ ಕೊನೆ ದಿನ, ಅರ್ಜಿ ಸಲ್ಲಿಸುವುದು ಹೇಗೆ?

|

Updated on: Feb 20, 2024 | 11:20 AM

2024-25ನೇ ಸಾಲಿನ ಕೆಸಿಇಟಿ ಪರೀಕ್ಷೆಗೆ ಇಂದೇ ಕೊನೆ ದಿನ. ಇಂಜಿನಿಯರಿಂಗ್ ಹಾಗೂ ಇತರೆ ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ಕೆಸಿಇಟಿ -2024 ಪರೀಕ್ಷೆ ಬರೆಯಲು ಇಚ್ಛಿಸುವವರು ಇಂದೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಹೇಗೆ ಸಲ್ಲಿಸಬೇಕು ಎಂಬ ವಿವರ ಇಲ್ಲಿದೆ.

KCET 2024 Registration: ಕರ್ನಾಟಕ CET ನೋಂದಣಿಗೆ ಇಂದೇ ಕೊನೆ ದಿನ, ಅರ್ಜಿ ಸಲ್ಲಿಸುವುದು ಹೇಗೆ?
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಫೆ.20: 2024-25ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೇ ದಿನ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ, KEA, KCET 2024 ರ ನೋಂದಣಿ ಪ್ರಕ್ರಿಯೆಯನ್ನು 2024ರ ಫೆಬ್ರವರಿ 20 ರಂದು ಕೊನೆಗೊಳಿಸುತ್ತಿದೆ. ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು KEA ಯ ಅಧಿಕೃತ ವೆಬ್‌ಸೈಟ್ kea.kar.nic.in ಮೂಲಕ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು. ಶುಲ್ಕವನ್ನು ಪಾವತಿಸಲು 2024 ಫೆಬ್ರವರಿ 23ರ ವರೆಗೆ ಅವಕಾಶವಿದೆ.

ಇಂಜಿನಿಯರಿಂಗ್ ಹಾಗೂ ಇತರೆ ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ಕೆಸಿಇಟಿ -2024 ಪರೀಕ್ಷೆ ಬರೆಯಲು ಇಚ್ಛಿಸುವವರು ಅರ್ಜಿ ಸಲ್ಲಿಸಲು ಇಂದು ಕೊನೇ ದಿನ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು.

ಇದನ್ನೂ ಓದಿ: NIA Recruitment 2024: 40 ಸಹಾಯಕ, ಸ್ಟೆನೋಗ್ರಾಫರ್ ಮತ್ತು ಕ್ಲರ್ಕ್​​ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

KCET 2024: ಅರ್ಜಿ ಸಲ್ಲಿಸುವುದು ಹೇಗೆ?

  • KEA ಯ ಅಧಿಕೃತ ವೆಬ್‌ಸೈಟ್ kea.kar.nic.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಲಭ್ಯವಿರುವ KCET 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಅಭ್ಯರ್ಥಿಗಳು ತಮ್ಮನ್ನು ನೋಂದಾಯಿಸಿಕೊಳ್ಳಬೇಕಾದ ಹೊಸ ಪುಟವು ತೆರೆಯುತ್ತದೆ.
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಶುಲ್ಕವನ್ನು ಪಾವತಿಸಿ.
  • ಸಲ್ಲಿಸಿ ಕ್ಲಿಕ್ ಮಾಡಿ ಮತ್ತು ಪುಟವನ್ನು ಡೌನ್‌ಲೋಡ್ ಮಾಡಿ.
  • ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿ.ಪ್ರವೇಶ ಪತ್ರವು ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 5, 2024 ರಂದು ಲಭ್ಯವಾಗುತ್ತದೆ ಮತ್ತು ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 18 ಮತ್ತು ಏಪ್ರಿಲ್ 19 ರಂದು ನಡೆಸಲಾಗುವುದು. ಕನ್ನಡ ಭಾಷಾ ಪರೀಕ್ಷೆಯನ್ನು 2024ರ ಏಪ್ರಿಲ್ 20ರಂದು ನಡೆಸಲಾಗುತ್ತದೆ. 2024ರ ಮೇ 20 ರಂದು ಫಲಿತಾಂಶವನ್ನು ಘೋಷಿಸಲಾಗುತ್ತದೆ.  ದೈಹಿಕವಾಗಿ ಅಂಗವಿಕಲ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆಯನ್ನು ಏಪ್ರಿಲ್ 25 ಮತ್ತು 26 ರಂದು ನಡೆಸಲಾಗುವುದು. ಹೆಚ್ಚಿನ ಸಂಬಂಧಿತ ವಿವರಗಳಿಗಾಗಿ ಅಭ್ಯರ್ಥಿಗಳು KEA ಯ ಅಧಿಕೃತ ವೆಬ್‌ಸೈಟ್​ಗೆ ಭೇಟಿ ನೀಡಬಹುದು.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:17 am, Tue, 20 February 24