ಬೆಂಗಳೂರು, ಮೇ 21: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (KCET) ಫಲಿತಾಂಶ ಮೇ 24ರಂದು ಹೊರಬೀಳಲಿದೆ. ಸಚಿವ ಎಂಸಿ ಸುಧಾಕರ್ ಬೆಳಗ್ಗೆ 11:30ಕ್ಕೆ ಪ್ರಕಟ ಮಾಡಲಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳು cetonline.karnataka.gov.in ಅಥವಾ karresults.nic.in ವೆಬ್‌ಸೈಟ್‌ಗಳಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ನೋಡಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 15, 16 ಮತ್ತು ಏಪ್ರಿಲ್ 17 ರಂದು ಕೆಸಿಇಟಿ ಪರೀಕ್ಷೆ ನಡೆಸಿತ್ತು. ಕೆಸಿಇಟಿ ಪರೀಕ್ಷೆಯ ಕ್ಷಣಕ್ಷಣದ ಮಾಹಿತಿಗಾಗಿ ಲೈವ್ ಅಪ್ಡೇಟ್ಸ್ ಇಲ್ಲಿದೆ
ಫಲಿತಾಂಶಗಳು ಪ್ರಕಟವಾದ ನಂತರ, ಕೆಇಎ ಪದವಿಪೂರ್ವ ಪ್ರವೇಶಕ್ಕಾಗಿ ಕೆಸಿಇಟಿ ಕೌನ್ಸೆಲಿಂಗ್ ಪ್ರಾರಂಭಿಸಲಾಗುತ್ತದೆ. ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಹಂಚಿಕೊಳ್ಳಲಾಗುವುದು.
ಈ ವಾರದೊಳಗೆ ಕರ್ನಾಟಕ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ ಅಥವಾ ಕೆಸಿಇಟಿ)ಯನ್ನು ಪ್ರಕಟಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಈ ಹಿಂದೆ ಮಾಧ್ಯಗಳಿಗೆ ಹೇಳಿರುವುದಾಗಿ ವರದಿಯಾಗಿದೆ. ಆದಾಗ್ಯೂ, ಕೆಸಿಇಟಿ ಫಲಿತಾಂಶ 2025 ರ ನಿಖರವಾದ ದಿನಾಂಕ ಮತ್ತು ಸಮಯ ನಿಗದಿಯಾಗಿಲ್ಲ.
ಕೆಇಎ ಕರ್ನಾಟಕ ಸಿಇಟಿ ಫಲಿತಾಂಶ ಶೀಘ್ರದಲ್ಲೇ cetonline.karnataka.gov.in ನಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಅನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ಕಟ್ಟುನಿಟ್ಟಾಗಿ ನಡೆಸಲಾಗಿತ್ತು.
KCET ಫಲಿತಾಂಶ ನೋಡುವುದು ಹೇಗೆ ಎಂಬ ಹಂತ ಹಂತದ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.
ಹಂತ 1: cetonline.karnataka.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಹಂತ 2: ‘KCET ಫಲಿತಾಂಶ 2025’ ಮೇಲೆ ಕ್ಲಿಕ್ ಮಾಡಿ.
ಹಂತ 3: ಲಾಗಿನ್ ಪೋರ್ಟಲ್‌ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಿ.
ಹಂತ 4: ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ KCET ಫಲಿತಾಂಶ 2025 ಪರದೆಯ ಮೇಲೆ ಕಾಣಿಸುತ್ತದೆ.
ಹಂತ 5: ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.
ಒಂದು ವೇಳೆ KCET ಫಲಿತಾಂಶದಲ್ಲಿನ ಯಾವುದೇ ದೋಷಗಳ ಕುರಿತು ಆಕ್ಷೇಪಣೆ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ.
ವಿದ್ಯಾರ್ಥಿಗಳು KCET 2025 ಫಲಿತಾಂಶಗಳು KEA ಅಧಿಕೃತ ವೆಬ್‌ಸೈಟ್‌ಗಳಲ್ಲಿ ನೋಡಬಹುದು.
kea.kar.nic.in, cetonline.karnataka.gov.in, ಮತ್ತು karresults.nic.in.
Published On - 10:39 am, Wed, 21 May 25