AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCET Result 2021: ಇಂದು ಕೆಸಿಇಟಿ ಫಲಿತಾಂಶ ಪ್ರಕಟ; ಈ ವೆಬ್​ಸೈಟ್​ನಲ್ಲಿ ರಿಸಲ್ಟ್ ವೀಕ್ಷಿಸಿ

Karnataka CET Results 2021: ಸಿಇಟಿಗೆ 2,01,834 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. 1.89 ಲಕ್ಷ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ. 1.62 ಲಕ್ಷ ವಿದ್ಯಾರ್ಥಿಗಳು ಜೀವಶಾಸ್ತ್ರ ಪರೀಕ್ಷೆ ಬರೆದಿದ್ದಾರೆ.

KCET Result 2021: ಇಂದು ಕೆಸಿಇಟಿ ಫಲಿತಾಂಶ ಪ್ರಕಟ; ಈ ವೆಬ್​ಸೈಟ್​ನಲ್ಲಿ ರಿಸಲ್ಟ್ ವೀಕ್ಷಿಸಿ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Sep 20, 2021 | 10:07 AM

Share

ಬೆಂಗಳೂರು: ಇಂದು (ಸೆ.20) 2020-21ನೇ ಸಾಲಿನ ಕೆಸಿಇಟಿ ಫಲಿತಾಂಶ (KCET Result 2021) ಪ್ರಕಟವಾಗಲಿದೆ. ಆಗಸ್ಟ್ 28, 29, 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇಂದು ಮಧ್ಯಾಹ್ನ 2:30ಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ (Ashwath Narayan) ಸುದ್ದಿಗೋಷ್ಠಿ ನಡೆಸುತ್ತಾರೆ. ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಆ ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್​ಸೈಟ್​ನಲ್ಲಿ ಫಲಿತಾಂಶ ನೋಡಬಹುದು. kea.kar.nic.in ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

ಸಿಇಟಿಗೆ 2,01,834 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. 1.89 ಲಕ್ಷ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ. 1.62 ಲಕ್ಷ ವಿದ್ಯಾರ್ಥಿಗಳು ಜೀವಶಾಸ್ತ್ರ ಪರೀಕ್ಷೆ ಬರೆದಿದ್ದಾರೆ. 1.93 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ, 1.93 ಲಕ್ಷ ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆ ಬರೆದಿದ್ದಾರೆ. ಇಂಜಿನಿಯರಿಂಗ್, ಯೋಗ, ನ್ಯಾಚುರೋಪತಿ, ಬಿ ಫಾರ್ಮ್, ಫಾರ್ಮಾ ಡಿ, ವೆಟರ್ನರಿ ಕೋರ್ಸ್​ಗಳಿಗೆ ಸಿಇಟಿ ನಡೆದಿತ್ತು.

ಕರ್ನಾಟಕ ಸಿಇಟಿ ಫಲಿತಾಂಶವು ಅಭ್ಯರ್ಥಿಗಳು ಪಡೆದ ವಿಷಯವಾರು ಅಂಕಗಳು, ಒಟ್ಟು ಅಂಕಗಳು ಮತ್ತು ಶ್ರೇಣಿಯನ್ನು ಒಳಗೊಂಡಿರುತ್ತದೆ. KEA ಫಲಿತಾಂಶ ಘೋಷಣೆಯೊಂದಿಗೆ KCET 2021 ಟಾಪರ್​ಗಳ ಪಟ್ಟಿಯನ್ನೂ ಸಹ ಬಿಡುಗಡೆ ಮಾಡಲಿದೆ. ಅರ್ಹ ಅಭ್ಯರ್ಥಿಗಳು ಕೆಸಿಇಟಿ 2021 ಕೌನ್ಸೆಲಿಂಗ್ ಮತ್ತು ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ.

ಕೆಸಿಇಟಿ ಫಲಿತಾಂಶ 2021- ಟೈ-ಬ್ರೇಕಿಂಗ್ ನಿಯಮಗಳು ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಗೆ, ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳ ಅರ್ಹತೆಯು ಒಂದೇ ಆಗಿರುವಾಗ, ಇಂಟರ್-ಸೆ ಮೆರಿಟ್ ಅನ್ನು ಕೆಸಿಇಟಿ 2021 ರಲ್ಲಿ ಪಡೆದಿರುವ ಅಂಕಗಳನ್ನು ಉಲ್ಲೇಖಿಸಿ ನಿರ್ಧರಿಸಲಾಗುತ್ತದೆ. ಅಂದರೆ ಪ್ರತಿಯೊಂದು ವಿಷಯದಲ್ಲೂ ಇಬ್ಬರೂ ಸಮಾನ ಅಂಕ ಪಡೆದಿದ್ದರೆ ಆಯ್ಕೆಯ ವೇಳೆ ಟೈ ಬ್ರೇಕಿಂಗ್ ನಿಯಮ ಅನ್ವಯವಾಗಲಿದೆ. ಅದರಂತೆ ಟೈ ಬ್ರೇಕಿಂಗ್ ನಿಯಮ ಹೇಗೆ ಅನ್ವಯವಾಗಲಿದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. * ಒಂದು ವೇಳೆ ಟೈ ಆದರೆ ಗಣಿತದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಇಂಟರ್-ಸೆ ಮೆರಿಟ್ ಅನ್ನು ನಿರ್ಧರಿಸಲಾಗುತ್ತದೆ. * ಇದಾಗ್ಯೂ ಟೈ ಮುಂದುವರಿದರೆ, ಭೌತಶಾಸ್ತ್ರದಲ್ಲಿ ಸುರಕ್ಷಿತ ಅಂಕಗಳ ಆಧಾರದ ಮೇಲೆ ಇಂಟರ್-ಸೆ ಮೆರಿಟ್ ಅನ್ನು ನಿರ್ಧರಿಸಲಾಗುತ್ತದೆ * ಮತ್ತೊಮ್ಮೆ ಟೈ ಮುಂದುವರಿದರೆ, ಇಂಟರ್ ಸೆ ಮೆರಿಟ್ ಅನ್ನು ರಸಾಯನಶಾಸ್ತ್ರದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. * ಇದಾಗ್ಯೂ ಟೈ ಮುಂದುವರಿದರೆ, ಅಭ್ಯರ್ಥಿಯ ವಯಸ್ಸಿನ ಆಧಾರದ ಮೇಲೆ ಇಂಟರ್ -ಸೆ ಮೆರಿಟ್ ಅನ್ನು ನಿರ್ಧರಿಸಲಾಗುತ್ತದೆ. ಇದರಲ್ಲಿ ಹಿರಿಯ ಅಭ್ಯರ್ಥಿಯನ್ನು ಕಿರಿಯರಿಗಿಂತ ಮೊದಲು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ

ಚುನಾವಣೆ ಸಂದರ್ಭ ವೈದ್ಯರ ನಿವೃತ್ತಿ ವಯಸ್ಸನ್ನು ಏಕ್ದಂ 5 ವರ್ಷ ಏರಿಸಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

ಆಹಾರ ಸೇವಿಸಿದ ಬಳಿಕ ಉರಿಯೂತ ಅಥವಾ ಹೊಟ್ಟೆ ನೋವು ಸಮಸ್ಯೆ ಕಾಡುತ್ತಿದೆಯೇ? ಪರಿಹಾರಕ್ಕಾಗಿ ಇಲ್ಲಿದೆ ಸಲಹೆಗಳು

(KCET result will be announced today and you can see result this website)

Published On - 8:38 am, Mon, 20 September 21

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ