KCET Results 2022: ಇಂದು ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ; kea.kar.nic.in ಸೈಟ್​​ನಲ್ಲಿ ರಿಸಲ್ಟ್​​ ಲಭ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 30, 2022 | 7:33 AM

ಕೆಸಿಇಟಿ 2022ರ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.inನಲ್ಲಿ ವೀಕ್ಷಿಸಬಹುದು.

KCET Results 2022: ಇಂದು ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ; kea.kar.nic.in ಸೈಟ್​​ನಲ್ಲಿ ರಿಸಲ್ಟ್​​ ಲಭ್ಯ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: 2021-22ನೇ ಸಾಲಿನ ಸಿಇಟಿ (CET) ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಮಲ್ಲೇಶ್ವರಂ ಬಳಿ ಇರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಬೆಳಗ್ಗೆ 9:45ಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಕೆಇಎ ವೆಬ್ ಸೈಟ್​​ kea.kar.nic.in ನಲ್ಲಿಯೂ ಫಲಿತಾಂಶ ಪ್ರಕಟ ಮಾಡಲಾಗುತ್ತದೆ. ಜೂನ್ 16 ರಿಂದ 18ರವರೆಗೆ ಸಿಇಟಿ ಪರೀಕ್ಷೆ ನಡೆದಿದ್ದು, ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ, ಫಾರ್ಮಸಿ ಹೀಗೆ ಮುಂತಾದ ವೃತ್ತಿಪರ ಕೋರ್ಸುಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಜೂನ್ 16ರಂದು ಜೀವಶಾಸ್ತ್ರ ಹಾಗೂ ಗಣಿತ, ಜೂನ್ 17 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಮತ್ತು ಜೂನ್ 18ರಂದು ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಭಾರೀ 2,16,525 ವಿದ್ಯಾರ್ಥಿಗಳು ಸಿಇಟಿ ಬರೆದಿದ್ದು, ರಾಜ್ಯದ ಒಟ್ಟು 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಇದನ್ನೂ ಓದಿ: KCET Result 2022: ಕೆಸಿಇಟಿ ಫಲಿತಾಂಶ ಇಂದೇ ಪ್ರಕಟ ಸಾಧ್ಯತೆ; ರಿಸಲ್ಟ್​ ನೋಡಲು ಹೀಗೆ ಮಾಡಿ

ಈ ಮೊದಲು ಸಿಇಟಿ ಫಲಿತಾಂಶವನ್ನು ಜುಲೈ 17ರಂದೇ ಪ್ರಕಟಿಸುವುದಾಗಿ ಪರೀಕ್ಷಾ ಪ್ರಾಧಿಕಾರ ಘೋಷಿಸಿತ್ತು. ಆದರೆ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮಗಳಲ್ಲಿ ಪರೀಕ್ಷೆ ಬರೆದಿದ್ದ 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುವುದು ತಡವಾದ ಹಿನ್ನೆಲೆಯಲ್ಲಿ ಸಿಇಟಿ ಫಲಿತಾಂಶ ಪ್ರಕಟಣೆಯೂ ತಡವಾಯಿತು.

ಸಿಬಿಎಸ್‌ಇ 12ನೇ ತರಗತಿಯ ಅವಧಿ 2 ಮತ್ತು ಐಸಿಎಸ್‌ಇ ಬೋರ್ಡ್ ಫಲಿತಾಂಶಗಳು ಬಿಡುಗಡೆಯಾಗುವವರೆಗೆ ಕೆಸಿಇಟಿ 2022 ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗುವುದಿಲ್ಲ. ಫಲಿತಾಂಶ ಪ್ರಕಟಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದೇವೆ. ಜುಲೈ 30ರಂದು ಫಲಿತಾಂಶ ಪ್ರಕಟಿಸುತ್ತೇವೆ’ ಎಂದು ನಿನ್ನೆಯಷ್ಟೇ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ಹೇಳಿದ್ದರು.

KCET ಫಲಿತಾಂಶ 2022 ಅನ್ನು ಹೇಗೆ ಪರಿಶೀಲಿಸುವುದು?: – ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ kea.kar.nic.inಗೆ ಭೇಟಿ ನೀಡಿ

– ವೆಬ್​ಸೈಟ್​​ನಲ್ಲಿ ಮುಖಪುಟದಲ್ಲಿ ‘KCET ಫಲಿತಾಂಶ 2022’ ಮೇಲೆ ಕ್ಲಿಕ್ ಮಾಡಿ

– ಲಾಗ್ ಇನ್ ಮಾಡಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನಮೂದಿಸಿ

– ಆಗ ನಿಮ್ಮ KCET ಫಲಿತಾಂಶಗಳು ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತವೆ

– ರಿಸಲ್ಟ್​ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್‌ಔಟ್ ತೆಗೆದುಕೊಳ್ಳಿ