CET ವಿದ್ಯಾರ್ಥಿಗಳೇ ಗಮನಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಸೂಚನೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) CET ವಿದ್ಯಾರ್ಥಿಗಳಿಗೆ ನಕಲಿ ವೆಬ್‌ಸೈಟ್‌ಗಳ ಬಗ್ಗೆ ಎಚ್ಚರಿಕೆ ನೀಡಿದೆ. ಪ್ರವೇಶ ಪತ್ರ ಡೌನ್‌ಲೋಡ್ ಹೆಸರಿನಲ್ಲಿ ಸೈಬರ್ ವಂಚಕರು ನಿಮ್ಮ ವೈಯಕ್ತಿಕ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಮಾತ್ರ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

CET ವಿದ್ಯಾರ್ಥಿಗಳೇ ಗಮನಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಸೂಚನೆ
ಸಾಂದರ್ಭಿಕ ಚಿತ್ರ
Image Credit source: larepublica.pe
Edited By:

Updated on: Apr 16, 2026 | 6:55 PM

ಬೆಂಗಳೂರು, ಏಪ್ರಿಲ್​​ 16: SSLC, ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳೆ ಪ್ರಶ್ನೆಪತ್ರಿಕೆ ಹೆಸರಲ್ಲಿ ವಿದ್ಯಾರ್ಥಿಗಳ ಹಾದಿ ತಪ್ಪಿಲು ಒಂದಿಷ್ಟು ಮಂದಿ ಯತ್ನಿಸಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ವಿಚಾರ ಬಯಲಾಗಿದೆ. KEA ರೀತಿಯಲ್ಲೇ ನಕಲಿ ವೆಬ್​​ಸೈಟ್ ಮಾಡಿರೋದು ಬೆಳಕಿಗೆ ಬಂದಿದ್ದು, CET ಎಕ್ಸಾಂ ಬರೆಯಲು ಮುಂದಾಗುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನೇ ಸೈಬರ್​​ ವಂಚಕರು ಟಾರ್ಗೆಟ್​​ ಮಾಡಹೊರಟಿದ್ದಾರೆ. ಹೀಗಾಗಿ ಪಿಯುಸಿ ಫಲಿತಾಂಶ ಪ್ರಕಟವಾಗಿರುವ ಬೆನ್ನಲ್ಲೇ ಸಿಇಟಿ ಬರೆಯಲು ತುದಿಗಾಲಲ್ಲಿ ನಿಂತಿರುವ ವಿದ್ಯಾರ್ಥಿಗಳು ಹಾಲ್​​ ಟಿಕೆಟ್​​ ಡೌನ್​​ ಮಾಡಿಕೊಳ್ಳುವ ವೇಳೆ ಎಚ್ಚರ ವಹಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.

ನಕಲಿ ವೆಬ್​​ಸೈಟ್​​ ಯಾವುದು?


ಈಗಾಗಲೇ ಸಿಇಟಿ ಪರೀಕ್ಷೆಯ ದಿನಾಂಕ ನಿಗದಿ ಆಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್​​ಸೈಟ್​​ನಲ್ಲಿ ವಿದ್ಯಾರ್ಥಿಗಳ ಹಾಲ್​​ ಟಿಕೆಟ್​​ ಕೂಡ ಲಭ್ಯವಿದೆ. ಏ.23 ಮತ್ತು 24ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಆದರೆ ಕೆಲ ಕಿಡಿಗೇಡಿಗಳು https://applytocollege.co/kcet_admit_card_2026 ಎಂಬ ನಕಲಿ ವೆಬ್​​ ಲಿಂಕ್​​ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದೆಂದು ಹೇಳಿ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪ್ರಾಧಿಕಾರ ಈ ಬಗ್ಗೆ ಎಚ್ಚರಿಕೆ ನೀಡಿದೆ. ಅಧಿಕೃತ ವೆಬ್​​ಸೈಟ್ https://cetonline.karnataka.gov.in/UGCET_Admit_Card_2026/Forms/Login.aspx​​ ಮೂಲಕವೇ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ಡೌನ್​​ಲೋಡ್​​ ಮಾಡಿಕೊಳ್ಳಬೇಕೆಂದು ತಿಳಿಸಿದೆ.

ಇದನ್ನೂ ಓದಿ: ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್; ಸತತ 2ನೇ ವರ್ಷವೂ ಶುಲ್ಕ ಏರಿಕೆ

ಪರೀಕ್ಷೆಗೆ ಮುಂಚೆಯೇ ಸಿಇಟಿ ಪರೀಕ್ಷೆ ಬರೆಯುವವರ ಮೇಲೆ ಸೈಬರ್​ ಕಿರಾತಕರು ಕಣ್ಣು ಹಾಕಿದ್ದು, ನಕಲಿ ವೆಬ್​ಸೈಟ್​​ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯ ಇಲ್ಲ. ಹೀಗಾಗಿ ಎಚ್ಚರವಹಿಸಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us