AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KEA ಮೊದಲ ಸುತ್ತಿನ ಸೀಟು ಹಂಚಿಕೆ ಪೂರ್ಣ: ಇಂಜಿನಿಯರಿಂಗ್ ಸೇರ ಬಯಸುವವರಿಗೆ ಜುಲೈ 24 ಕೊನೆ ದಿನ; ಈ ಬಾರಿ ನಿಯಮದಲ್ಲಿ ದೊಡ್ಡ ಬದಲಾವಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ದಾಖಲೆಯ 90,748 ಸೀಟುಗಳು ಹಂಚಿಕೆಯಾಗಿವೆ, ಕೇವಲ 976 ಸೀಟುಗಳು ಖಾಲಿ ಉಳಿದಿವೆ. ಒಟ್ಟು 1,22,512 ಸೀಟುಗಳು ಹಂಚಿಕೆಯಾಗಿವೆ. ವಿದ್ಯಾರ್ಥಿಗಳು ಜುಲೈ 24ರೊಳಗೆ ವರದಿ ಮಾಡಿಕೊಳ್ಳಬೇಕು. ಈ ಬಾರಿ ಸೀಟು ಹಿಂಪಡೆಯಲು ಹೊಸ ಸೌಲಭ್ಯವನ್ನೂ ನೀಡಲಾಗಿದೆ.

KEA ಮೊದಲ ಸುತ್ತಿನ ಸೀಟು ಹಂಚಿಕೆ ಪೂರ್ಣ: ಇಂಜಿನಿಯರಿಂಗ್ ಸೇರ ಬಯಸುವವರಿಗೆ ಜುಲೈ 24 ಕೊನೆ ದಿನ; ಈ ಬಾರಿ ನಿಯಮದಲ್ಲಿ ದೊಡ್ಡ ಬದಲಾವಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 16, 2026 | 9:38 AM

Share

ಮುಖ್ಯಾಂಶಗಳು

  • KEA ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ
  • ಇಂಜಿನಿಯರಿಂಗ್ ವಿಭಾಗದಲ್ಲಿ ದಾಖಲೆಯ ಮಟ್ಟದ ಸೀಟುಗಳು ಹಂಚಿಕೆ
  • ಸೀಟು ಹಿಂಪಡೆಯಲು ಈ ಬಾರಿ ಹೊಸ ಸೌಲಭ್ಯ

ಬೆಂಗಳೂರು, ಜು.16: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸಿದ್ದ ಮೊದಲ ಸುತ್ತಿನ ಸೀಟು ಹಂಚಿಕೆಯ (Seat Allotment) ಫಲಿತಾಂಶವನ್ನು ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಇಂಜಿನಿಯರಿಂಗ್ ವಿಭಾಗದಲ್ಲಿ ದಾಖಲೆಯ ಮಟ್ಟದ ಸೀಟುಗಳು ಹಂಚಿಕೆಯಾಗಿರುವುದು ವಿಶೇಷವಾಗಿದೆ.

ರಾಜ್ಯಾದ್ಯಂತ ಲಭ್ಯವಿದ್ದ ಒಟ್ಟು 91,724 ಇಂಜಿನಿಯರಿಂಗ್ ಸೀಟುಗಳ ಪೈಕಿ ಬರೋಬ್ಬರಿ 90,748 ಸೀಟುಗಳು ಈಗಾಗಲೇ ಮೊದಲ ಸುತ್ತಿನಲ್ಲೇ ಹಂಚಿಕೆಯಾಗಿವೆ. ಸದ್ಯ ಕೇವಲ 976 ಸೀಟುಗಳು ಮಾತ್ರ ಖಾಲಿ ಉಳಿದುಕೊಂಡಿವೆ.ವೈದ್ಯಕೀಯ, ದಂತವೈದ್ಯಕೀಯ, ಆಯುಷ್ ಮತ್ತು ಫಾರ್ಮಸಿ ಕೋರ್ಸ್‌ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವೃತ್ತಿಪರ ಕೋರ್ಸ್‌ಗಳ ಕೌನ್ಸೆಲಿಂಗ್ ನಡೆಸಲಾಗಿದೆ. ಲಭ್ಯವಿದ್ದ ಒಟ್ಟು 1,41,872 ಸೀಟುಗಳ ಪೈಕಿ 1,22,512 ಸೀಟುಗಳು ಹಂಚಿಕೆಯಾಗಿದ್ದು, 19,374 ಸೀಟುಗಳು ಖಾಲಿ ಉಳಿದಿವೆ.

ಮೊದಲ ಸುತ್ತಿನಲ್ಲಿ ಸೀಟು ಪಡೆದುಕೊಂಡ ವಿದ್ಯಾರ್ಥಿಗಳು ತಮಗೆ ಹಂಚಿಕೆಯಾಗಿರುವ ಕಾಲೇಜುಗಳಿಗೆ ಹೋಗಿ ವರದಿ ಮಾಡಿಕೊಳ್ಳಲು ಜುಲೈ 24 ರವರೆಗೆ ಕಾಲಾವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಸೀಟುಗಳ ಆಯ್ಕೆಯನ್ನು ದಾಖಲಿಸಲು (Choice Entry) ಪ್ರತಿ ಕೋರ್ಸ್‌ಗೂ ಭಿನ್ನವಾದ ದಿನಾಂಕಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರು ನೆನಪಿಸಿದ್ದಾರೆ.

ಇಂಜಿನಿಯರಿಂಗ್ ಅಭ್ಯರ್ಥಿಗಳು ಜುಲೈ 16 ರಿಂದ ಚಾಯ್ಸ್ ಎಂಟ್ರಿ ಮಾಡಬಹುದು. ಕೃಷಿ ವಿಜ್ಞಾನ ಮತ್ತು ವೆಟರಿನರಿ ಅಭ್ಯರ್ಥಿಗಳು ಜುಲೈ 17 ರಿಂದ ಆಯ್ಕೆ ದಾಖಲಿಸಬಹುದು. ಯೋಗ ಮತ್ತು ನ್ಯಾಚುರೋಪತಿ ಅಭ್ಯರ್ಥಿಗಳು ಇವರಿಗೂ ಪ್ರತ್ಯೇಕ ದಿನಾಂಕಗಳನ್ನು ನೀಡಲಾಗಿದೆ.

ಇದನ್ನೂ ಓದಿ: TV9 Kannada News Live: ಫ್ಲ್ಯಾಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ, ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು; ಇಂದಿನ ಪ್ರಮುಖ ಸುದ್ದಿಗಳು

ಸೀಟು ಹಿಂಪಡೆಯಲು ಈ ಬಾರಿ ಹೊಸ ಸೌಲಭ್ಯ:

ಹಿಂದಿನ ವರ್ಷಗಳಲ್ಲಿ ಒಮ್ಮೆ ಸೀಟು ಹಂಚಿಕೆಯಾದ ನಂತರ ವಿದ್ಯಾರ್ಥಿಗಳಿಗೆ ತಮ್ಮ ಆಯ್ಕೆಯನ್ನು ಬದಲಾಯಿಸಲು ಅಥವಾ ಸೀಟನ್ನು ಹಿಂಪಡೆಯಲು ಅವಕಾಶವಿರಲಿಲ್ಲ. ಆದರೆ ಈ ಬಾರಿ ವಿದ್ಯಾರ್ಥಿ ಸ್ನೇಹಿ ನಿಯಮ ತರಲಾಗಿದ್ದು, ನಿಗದಿತ ಅವಧಿಯೊಳಗೆ ವಿದ್ಯಾರ್ಥಿಗಳು ತಮ್ಮ ಆಯ್ಕೆಯನ್ನು ಬದಲಾಯಿಸಿಕೊಳ್ಳಬಹುದು. ಉದಾಹರಣೆಗೆ, ‘Option 2’ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಆ ಬಳಿಕ ತಮ್ಮ ನಿರ್ಧಾರವನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ