AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಟ್ ಬ್ಲಾಕಿಂಗ್ ತಡೆಗೆ KEA ಹೊಸ ನಿಯಮ: 3 ವರ್ಷ ಬ್ಯಾನ್​

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಈಗಾಗಲೇ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಇನ್ನೇನು ಸಿಇಟಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಸಿಇಟಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಕೆಇಎ ಹೊಸ ನಿಮಯ ಜಾರಿಗೆ ತಂದಿದೆ. ಈ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳಿಗೆ ಸಂಕಷ್ಟ ಕಟ್ಟಿಟ್ಟಬುತ್ತಿ.

ಸೀಟ್ ಬ್ಲಾಕಿಂಗ್ ತಡೆಗೆ KEA ಹೊಸ ನಿಯಮ: 3 ವರ್ಷ ಬ್ಯಾನ್​
ಕೆಇಎ
ವಿನಯ್​ ಕಾಶಪ್ಪನವರ್​
| Edited By: ವಿವೇಕ ಬಿರಾದಾರ|

Updated on:Apr 26, 2025 | 6:59 PM

Share

ಬೆಂಗಳೂರು, ಏಪ್ರಿಲ್ 26: ಪ್ರಮುಖ ಇಂಜಿನಿಯರಿಂಗ್ ಕಾಲೇಜುಗಳಲ್ಲಿ (Engineering Colleges) ನಡೆಯುವ ಸೀಟ್ ಬ್ಲಾಕಿಂಗ್ (Seet Bloking) ಎಂಬ ಕರಾಳ ದಂಧೆಗೆ ಬ್ರೇಕ್ ಹಾಕಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮುಂದಾಗಿದ್ದು, ಈ ಬಾರಿ ಹೊಸ ತಂತ್ರ ಪ್ರಯೋಗ ಮಾಡಿದೆ. ಇಂಜಿನಿಯರಿಂಗ್ ಮಾಡಬೇಕು ಅಂತ ಕನಸು ಹೊತ್ತ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದು ಸೀಟು ಗಿಟ್ಟಿಸಿಕೊಳ್ಳುತ್ತಾರೆ. ಆದರೆ, ಕೊನೆ ಗಳಿಗೆಯಲ್ಲಿ ತಮ್ಮ ನಿರ್ಧಾರ ಬದಲಿಸಿ ಬಿಡುತ್ತಾರೆ. ಇದೇ ಕಾರಣಕ್ಕೆ ಸೀಟ್ ಬ್ಲಾಕಿಂಗ್ ದಂಧೆ ನಡೆಯುತ್ತಿದೆ ಎಂಬ ಮಾತು ಕೇಳಿಬರುತ್ತಿತ್ತು. ಹೀಗಾಗಿ ಕೆಇಎ ಹೊಸ ರೂಲ್ಸ್ ತಂದಿದ್ದು, ಸೀಟ್‌ ಬ್ಲಾಕ್ ಮಾಡಿದರೆ ಅಥವಾ ನಿರ್ಲಕ್ಷ್ಯ ವಹಿಸಿದರೆ ವಿದ್ಯಾರ್ಥಿಗಳ ಭವಿಷ್ಯವೆ ಹಾಳಾಗಿ ಹೋಗುತ್ತದೆ ಎಂದು ಕೆಇಎ ಎಚ್ಚರಿಕೆ ಕೊಟ್ಟಿದೆ.

ಇಂಜಿನಿಯರಿಂಗ್ ಸೀಟ್ ಪಡೆದ ವಿದ್ಯಾರ್ಥಿ, ಅಂತಿಮ ಹಂತದಲ್ಲಿ ಸೀಟ್ ರದ್ದು ಪಡಿಸಿದರೆ, 5 ಪಟ್ಟು ಹೆಚ್ಚು ಶುಲ್ಕ ಕಟ್ಟಬೇಕು. ಜೊತೆಗೆ ಸಿಇಟಿ ಪರೀಕ್ಷೆಗಳಿಂದ 3 ವರ್ಷ ವಿದ್ಯಾರ್ಥಿಯನ್ನು ಬ್ಯಾನ್ ಮಾಡಲು ಕೆಇಎ ನಿರ್ಧರಿಸಿದೆ. ಇಷ್ಟು ದಿನ ಶುಲ್ಕ ಕಟ್ಟಿದ ನಂತರ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಡೌನ್‌ಲೋಡ್​ ಮಾಡಲು ಅವಕಾಶವಿತ್ತು.

ಆದರೆ, ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಕೆಇಎಗೆ ಮಾಹಿತಿ ಸಿಗುತ್ತಿರಲಿಲ್ಲ. ಇದೇ ಕಾರಣಕ್ಕೆ ಈಗ ಪ್ರವೇಶ ಪತ್ರದ ಬದಲು, ಸೀಟು ಖಚಿತತೆ ಪತ್ರ ನೀಡಲು ಕೆಇಎ ತೀರ್ಮಾನಿಸಿದೆ. ಇದರಿಂದ ವಿದ್ಯಾರ್ಥಿಗಳು ಆಯ್ಕೆಯಾದ ಕಾಲೇಜಿಗೆ ಕಡ್ಡಾಯವಾಗಿ ಹೋಗಲೇಬೇಕಾಗುತ್ತದೆ. ಒಂದು ವೇಳೆ ವಿದ್ಯಾರ್ಥಿ ಆ ಕಾಲೇಜಿಗೆ ಹೋಗದಿದ್ದರೇ ಆ ಸೀಟನ್ನು ಉಳಿಕೆ ಸೀಟು ಅಂತ ಮುಂದಿನ ಸುತ್ತಿಗೆ ಪರಿಗಣಿಸಲಾಗುತ್ತೆ.

ಇದನ್ನೂ ಓದಿ
Image
UPSC ಫಲಿತಾಂಶ: ಹಾವೇರಿ ವೈದ್ಯನಿಗೆ 41ನೇ ರ‍್ಯಾಂಕ್
Image
ಶಾಲಾ ಶುಲ್ಕ ಆಯ್ತು, ಇದೀಗ ಪಠ್ಯ ಪುಸ್ತಕಗಳ ಬೆಲೆ ಶೇ 10 ಏರಿಕೆ‌
Image
ಜನಿವಾರ ತೆಗೆಸಿದ ವಿವಾದ: CET ಪರೀಕ್ಷೆಗೆ ವಸ್ತ್ರ ಸಂಹಿತೆ ಏನ್​ ಹೇಳುತ್ತೆ
Image
SSLC Result: ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟ, ನೋಡುವುದು ಹೇಗೆ?

ಇದನ್ನೂ ಓದಿ: UPSC ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಅಭ್ಯರ್ಥಿಗಳಿಗೆ ಸಿಗುವ ಸಂಬಳ ಎಷ್ಟು?

ಈ ಹೊಸ ನಿಯಮದಿಂದ ಇತರೆ ಅರ್ಹ ವಿದ್ಯಾರ್ಥಿಗಳಿಗೆ ಬೇಕಾದ ಕಾಲೇಜಿನಲ್ಲಿ ಸೀಟು ಸಿಗಲು ಅವಕಾಶ ಸಿಗುತ್ತದೆ. ಆದರೆ, ಕೆಇಎ ತಂದಿರುವ ಈ ಹೊಸ ನಿಯಮದಿಂದ ಸೀಟ್ ಬ್ಲಾಕಿಂಗ್ ದಂಧೆಗೆ ಕಡಿವಾಣ ಬೀಳುತ್ತಾ ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Sat, 26 April 25

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್