ಇಂದಿನಿಂದಲೇ KEA ಆಪ್ಷನ್ ಎಂಟ್ರಿ ಆರಂಭ, ಯಾವಾಗ ಕೊನೆ ದಿನ? ಇಲ್ಲಿದೆ ಮಾಹಿತಿ

ಇಂಜಿನಿಯರಿಂಗ್ ಕೋರ್ಸ್​​ಗೆ ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಡಲಾದ ಹಿನ್ನೆಲೆ ಇಂದು ಸಂಜೆ 5 ರಿಂದ ಆಪ್ಷನ್ ಎಂಟ್ರಿಗೆ ಅವಕಾಶ ಕಲ್ಪಿಸಲಾಗಿದೆ.

ಇಂದಿನಿಂದಲೇ KEA ಆಪ್ಷನ್ ಎಂಟ್ರಿ ಆರಂಭ, ಯಾವಾಗ ಕೊನೆ ದಿನ? ಇಲ್ಲಿದೆ ಮಾಹಿತಿ
KEA ಆಪ್ಷನ್ ಎಂಟ್ರಿಗೆ ಅವಕಾಶ
Follow us
Vinay Kashappanavar
| Updated By: Rakesh Nayak Manchi

Updated on: Aug 05, 2023 | 8:39 PM

ಬೆಂಗಳೂರು, ಆಗಸ್ಟ್ 5: ಇಂಜಿನಿಯರಿಂಗ್ ಕೋರ್ಸ್​​ಗೆ (Engineering Course) ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಡಲಾದ ಹಿನ್ನೆಲೆ ಇಂದು ಸಂಜೆ 5 ರಿಂದ ಆಪ್ಷನ್ ಎಂಟ್ರಿಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ, ಆಪ್ಷನ್ ಎಂಟ್ರಿಯಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಕೋರ್ಸ್​​ಗಳಿಗೆ ಅವಕಾಶ ಇರಲಿದೆ ಎಂದರು.

ಉನ್ನತ ಶಿಕ್ಷಣ ಇಲಾಖೆಯು 9,000 ಸೀಟುಗಳನ್ನು ಮತ್ತೆ ಸೇರಿಸಿದ್ದು, ಇಷ್ಟು ಸೀಟು ಹಂಚಿಕೆಗೆ ಲಭ್ಯವಿದೆ. ಇದರ ಆಪ್ಷನ್ ಎಂಟ್ರಿಗೆ ಆಗಸ್ಟ್ 9 ರವರೆಗೆ ಅವಕಾಶ ಇರಲಿದೆ. ಕೆಲವು‌ ದಾಖಲೆಗಳನ್ನು ಒದಗಿಸಿಲ್ಲ ಎನ್ನುವ ಕಾರಣಕ್ಕೆ ಸೀಟು ಹಂಚಿಕೆ ಪ್ರಕ್ರಿಯೆಯಿಂದ ಹೊರಗಿಡಲಾಗಿತ್ತು. ಬಳಿಕ ಉನ್ನತ ಶಿಕ್ಷಣ ಇಲಾಖೆ ಶುಕ್ರವಾರ ಷರತ್ತು ವಿಧಿಸಿ ಸೀಟು ಹಂಚಿಕೆಗೆ ಒಪ್ಪಿಗೆ ಸೂಚಿಸಿದೆ ಎಂದರು.

ಇದನ್ನೂ ಓದಿ: ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ

ನಿಗದಿತ ಅವಧಿಯೊಳಗೆ ಕಾಲೇಜುಗಳಿಗೆ ಅಗತ್ಯ ಇರುವ ದಾಖಲೆಗಳನ್ನು ಒದಗಿಸಬೇಕು. ಎಲ್ಲ ಕೋರ್ಸ್‌ಗಳಿಗೆ ಆಪ್ಷನ್ ಎಂಟ್ರಿ ಮಾಡುವ ಪ್ರಕ್ರಿಯೆ ಇಂದು ಸಂಜೆ ಆರಂಭವಾಗಲಿದೆ. ಎಲ್ಲ ಕೋರ್ಸ್​​ಗಳಿಗೂ ಏಕಕಾಲದಲ್ಲಿ ಆಪ್ಷನ್ ಎಂಟ್ರಿ ಮಾಡುವ ಅವಕಾಶ ಕಲ್ಪಿಸಲಾಗಿದೆ. ಸೀಕ್ರೆಟ್ ಕೀ ಆನ್​ಲೈನ್ ಮೂಲಕ UGCET-23 ಪರಿಶೀಲನೆ ಕಡ್ಡಾಯವಾಗಿ ಮಾಡಬೇಕು ಎಂದರು.

ಕೋರ್ಸ್ ಸ್ಲಿಪ್ ಪಡೆದಿರುವ ಅಭ್ಯರ್ಥಿಗಳು, ವೈದ್ಯಕೀಯ ಕೋರ್ಸ್​​ಗಳ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ. UG NEET-23 ಕ್ಕೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಲ್ಲಿ Secret Key ಯನ್ನು ವೈದ್ಯಕೀಯ ಕೋರ್ಸ್​​ಗಳ ಆಪ್ಷನ್ ಎಂಟ್ರಿಗೆ ಬಳಸಬೇಕು. www.kea.kar.nic.in ವೆಬ್ಸೈಟ್​ನಲ್ಲಿ KEA ಆಪ್ಷನ್ ಎಂಟ್ರಿ ಅರ್ಜಿ ಸಲ್ಲಿಸಬಹುದು ಎಂದು ರಮ್ಯಾ ಮಾಹಿತಿ ನೀಡಿದ್ದಾರೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ