
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA)ವು ಶೀಘ್ರದಲ್ಲೇ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (PGCET 2025) ಫಲಿತಾಂಶಗಳನ್ನು ಪ್ರಕಟಿಸಲಿದೆ. ಆದರೆ ಫಲಿತಾಂಶ ಪ್ರಕಟಣೆಯ ನಿಖರವಾದ ಸಮಯ ಮತ್ತು ದಿನಾಂಕವನ್ನು ಕೆಇಎ ಇನ್ನೂ ಬಹಿರಂಗಪಡಿಸಿಲ್ಲ. ಪರೀಕ್ಷೆ ಬರೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ cetonline.karnataka.gov.in ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.
ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಕೌನ್ಸೆಲಿಂಗ್‌ನ ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಉತ್ತೀರ್ಣರಾದವರಿಗೆ ಕರ್ನಾಟಕದಾದ್ಯಂತ ಕಾಲೇಜುಗಳಲ್ಲಿ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕ್ ಸೇರಿದಂತೆ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಪ್ರವೇಶ ನೀಡಲಾಗುತ್ತದೆ.
ಇದನ್ನೂ ಓದಿ: ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತದ ಏಕೈಕ ಶಿಕ್ಷಣ ಸಂಸ್ಥೆ ಯಾವುದು ಗೊತ್ತಾ?
ಕೆಳಗಿನ ಸ್ಕೋರ್‌ಕಾರ್ಡ್‌ನಲ್ಲಿ ಉಲ್ಲೇಖಿಸಲಾದ ಪ್ರಮುಖ ಮಾಹಿತಿಯ ಪಟ್ಟಿಯನ್ನು ಪರಿಶೀಲಿಸಿ.
ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:35 am, Thu, 31 July 25