ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲು KEA ತಯಾರಿ, ಹೊಸ ತಂತ್ರಜ್ಞಾನಕ್ಕೆ 10 ಕೋಟಿ ಟೆಂಡರ್

ಪದವಿ ಹಾಗೂ ಸ್ನಾತಕೋತ್ತರ ಪದವಿ ಆಧಾರಿತ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 20 ಸಾವಿರಕ್ಕಿಂತ ಕಡಿಮೆ ಅಭ್ಯರ್ಥಿಗಳು ಇದ್ದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ. ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವೆಬ್ ಕಾಸ್ಟಿಂಗ್ ಮೂಲಕ ಆಧುನಿಕ ತಂತ್ರಜ್ಞಾನಗಳೊಂದಿಗೆ AI ಸಿಸಿ ಕ್ಯಾಮೆರಾಗಳನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ.

ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲು KEA ತಯಾರಿ, ಹೊಸ ತಂತ್ರಜ್ಞಾನಕ್ಕೆ 10 ಕೋಟಿ ಟೆಂಡರ್
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ಆಯೇಷಾ ಬಾನು

Updated on: Aug 03, 2024 | 12:55 PM

ಬೆಂಗಳೂರು, ಆಗಸ್ಟ್.03: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ತರಲು ನಾನಾ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಕೆಲವೇ ದಿನದಲ್ಲಿ KEA ಯಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾರಿ ಬದಲಾವಣೆಯಾಗಲಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ (COMPUTER BASED TEST) ಮಾದರಿಯಲ್ಲಿ ಪರೀಕ್ಷೆ ನಡೆಸಲು ಉನ್ನತ ಶಿಕ್ಷಣ ಇಲಾಖೆ ಪ್ಲಾನ್ ಮಾಡಿದೆ.

ನಕಲು ತಡೆಯಲು, ಕ್ವಿಕ್ ರಿಸಲ್ಟ್ ಬರಲು ಆನ್ಲೈನ್ ಪರೀಕ್ಷೆ ಅನುಕೂಲಕರ. ಕೆಇಎ ನಡೆಸುವ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಸಂಪೂರ್ಣ ಆನ್ಲೈನ್ ಮಾಡಲು ಸಿದ್ಧತೆ ನಡೆದಿದೆ. ಪ್ರಾರಂಭಿಕ ಹಂತದಲ್ಲಿ 20 ಸಾವಿರಕ್ಕಿಂತ ಕಡಿಮೆ ಅರ್ಜಿ ಬಂದರೆ COMPUTER BASED TEST ಮುಖೇನ ಪರೀಕ್ಷೆ ನಡೆಸಲು KEA ಪ್ಲಾನ್ ಮಾಡಿದೆ. ಇದರ ಜೊತೆಗೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗೆ ಫಿಂಗರ್ ಪ್ರಿಂಟ್ ಅಥಂಟಿಕೇಷನ್, ಆಧಾರ್ ಮಾದರಿಯಲ್ಲಿ ಪಿಂಗರ್ ಪ್ರಿಂಟ್ ಸ್ಕ್ಯಾನಿಂಗ್, ಫೇಸ್ ರೆಕಗ್ನನೇಷನ್ ತಂತ್ರಾಂಶ ಅಳವಡಿಕೆಗೆ ಮುಂದಾಗಿದೆ.

ನಕಲು ತಡೆದು ಪರಿಣಾಮಕಾರಿಯಾಗಿ ಪರೀಕ್ಷೆ ನಡೆಸಲು CBT ಅನುಕೂಲಕರ. ಪರೀಕ್ಷೆ ಶುರು ಆಗುವ ಅರ್ಧಗಂಟೆ ಮುಂಚೆ ಪ್ರಶ್ನೆ ಪತ್ರಿಕೆ ಸರ್ವರ್ ಗೆ ಅಪ್ಲೋಡ್ ಮಾಡಿದರೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಒಳಗಡೆ ಬರುತ್ತಿದ್ದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬಹುದು ಎನ್ನಲಾಗುತ್ತಿದೆ.

ಇನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಜೊತೆ ವಿವಿಧ ಇಲಾಖೆಗಳು ಕೋರಿಕೆ ಸಲ್ಲಿಸುವ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಪರೀಕ್ಷೆಗಳು ಪಾರದರ್ಶಕತೆಯಿಂದ ನಡೆಸುವುದು ಪ್ರಾಧಿಕಾರದ ಕರ್ತವ್ಯ. ಹೀಗಾಗಿ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವೆಬ್ ಕಾಸ್ಟಿಂಗ್ ಮೂಲಕ ಆಧುನಿಕ ತಂತ್ರಜ್ಞಾನಗಳೊಂದಿಗೆ AI ಸಿಸಿ ಕ್ಯಾಮೆರಾಗಳನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ರಾಯಚೂರು: ಪೆನ್ನು ಕದ್ದ ವಿದ್ಯಾರ್ಥಿಯನ್ನ ಹೊಡೆದು ಕತ್ತಲ ಕೋಣೆಗೆ ಹಾಕಿದ ರಾಮಕೃಷ್ಣ ಆಶ್ರಮ ಗುರೂಜಿ

ಇನ್ನು ಈ AI ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವುದಕ್ಕಾಗಿ 10 ಕೋಟಿ ಮೌಲ್ಯದ ಟೆಂಡರ್ ಪ್ರಕ್ರಿಯೆ ಕೈಗೊಳ್ಳಲು ನಿರ್ಧರಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಎಐ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳ ಫಿಂಗರ್ ಪ್ರಿಂಟ್ ಅಥಂಟಿಕೇಷನ್ ಹಾಗೂ ಮುಖ ಚಹರೆಯನ್ನು ಗುರುತಿಸುವ ತಂತ್ರಜ್ಞಾನವನ್ನು ಬಳಸಲು ಕೂಡ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಇದರಿಂದ ಅಭ್ಯರ್ಥಿಗೆ ಹೊರತಾಗಿ ಮತ್ತೊಬ್ಬ ಅಭ್ಯರ್ಥಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಿ ಬರೆಯುವುದನ್ನು ತಪ್ಪಿಸಲು ಅನುಕೂಲವಾಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ