ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2022ರ ಕರ್ನಾಟಕ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆಯ (PGCET) ಫಲಿತಾಂಶವನ್ನು ಡಿಸೆಂಬರ್ 29ರ ಸಾಯಂಕಾಲ 4 ಗಂಟೆ ನಂತರ ಪ್ರಕಟಿಸಲಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಇಂಡಿಯಾ ಡಾಟ್ ಕಾಮ್ ವರದಿ ಮಾಡಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ kea.kar.nic.in ನಲ್ಲಿ ನೋಡಬಹುದು ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
MTech ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ 2022 ಪರೀಕ್ಷೆಯನ್ನು ನವೆಂಬರ್ 19 ರಂದು ನಡೆಸಲಾಯಿತು. ಏತನ್ಮಧ್ಯೆ, ಎಮ್ಬಿಎ ಮತ್ತು ಎಮ್ಸಿಎಎ ಪಿಜಿಸಿಇಟಿ ಪರೀಕ್ಷೆಯನ್ನು ನವೆಂಬರ್ 20, 2022 ರಂದು ನಡೆಸಲಾಯಿತು. ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಶ್ರೇಣಿಗಳ ಆಧಾರದ ಮೇಲೆ ದಾಖಲೆ ಪರಿಶೀಲನೆಗೆ ಹಾಜರಾಗಬೇಕಾಗುತ್ತದೆ.
ಜನವರಿ 2, 2023 ರಿಂದ ಮಧ್ಯಾಹ್ನ 2:00 ರಿಂದ ಸಂಜೆ 4:00 ರವರೆಗೆ ದಾಖಲೆ ಪರಿಶೀಲನೆ ನಡೆಯಲಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ, ಶಿವಮೊಗ್ಗ, ಮಂಗಳೂರು, ವಿಜಯಪುರ, ಧಾರವಾಡ, ದಾವಣಗೆರೆ ಸಹಾಯ ಕೇಂದ್ರಗಳಲ್ಲಿ ದಾಖಲೆ ಪರಿಶೀಲನೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ