AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ, ಪಿಜಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಂದೇ ಅಪ್ಲಿಕೇಶನ್: ವಿದ್ಯಾರ್ಥಿಗಳಿಗೆ ಆಧಾರ್ ಆಧಾರಿತ ಯೂನಿಕ್ ನಂಬರ್ ನೀಡಲು ಕೆಇಎ ಮುಂದು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವಿದ್ಯಾರ್ಥಿ, ಉದ್ಯೋಗಾಕಾಂಕ್ಷಿಗಳಿಗೆ 'ಒನ್ ಟೈಮ್ ರಿಜಿಸ್ಟ್ರೇಷನ್' ವ್ಯವಸ್ಥೆ ಪರಿಚಯಿಸಿದೆ. ಸಿಇಟಿ, ಪಿಜಿ, ಸರ್ಕಾರಿ ಪರೀಕ್ಷೆಗಳಿಗೆ ಪ್ರತಿ ಬಾರಿ ಹೊಸದಾಗಿ ಅರ್ಜಿ ಸಲ್ಲಿಸುವ ಕಿರಿಕಿರಿ ತಪ್ಪಿಸಲು ಇದು ಆಧಾರ್ ಆಧಾರಿತ ಯೂನಿಕ್ ನಂಬರ್ ಪ್ರೊಫೈಲ್ ಸೃಷ್ಟಿಸುತ್ತದೆ. ಇದರಿಂದ ಅರ್ಜಿ ಸಲ್ಲಿಕೆ ಸರಳವಾಗುತ್ತದೆ, ದಾಖಲೆ ಮರು ಅಪ್‌ಲೋಡ್ ಅಗತ್ಯವಿಲ್ಲ, ಹಾಗೂ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಬೀಳುತ್ತದೆ. ಮುಂಬರುವ ಸಿಇಟಿ ಅರ್ಜಿಯಿಂದ ಜಾರಿ.

ಸಿಇಟಿ, ಪಿಜಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಂದೇ ಅಪ್ಲಿಕೇಶನ್: ವಿದ್ಯಾರ್ಥಿಗಳಿಗೆ ಆಧಾರ್ ಆಧಾರಿತ ಯೂನಿಕ್ ನಂಬರ್ ನೀಡಲು ಕೆಇಎ ಮುಂದು
ಸಾಂದರ್ಭಿಕ ಚಿತ್ರImage Credit source: Google
ವಿನಯ್​ ಕಾಶಪ್ಪನವರ್​
| Edited By: |

Updated on: Oct 27, 2026 | 4:59 PM

Share

ಬೆಂಗಳೂರು, ಅ.27: ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿ ಸುದ್ದಿ ನೀಡಿದೆ. ಸಿಇಟಿ (CET), ಪಿಜಿ ಪ್ರವೇಶ ಪರೀಕ್ಷೆಗಳು ಹಾಗೂ ವಿವಿಧ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರತಿ ಬಾರಿಯೂ ಹೊಸದಾಗಿ ಅರ್ಜಿ ಸಲ್ಲಿಸುವ ಮತ್ತು ದಾಖಲೆಗಳನ್ನು ಮರು ಅಪ್‌ಲೋಡ್ ಮಾಡುವ ಕಿರಿಕಿರ ತಪ್ಪಿಸಲು ‘ಒನ್ ಟೈಮ್ ರಿಜಿಸ್ಟ್ರೇಷನ್’ (One Time Registration) ವ್ಯವಸ್ಥೆಯನ್ನು ಜಾರಿಗೆ ತರಲು ಕೆಇಎ ಯೋಜನೆ ರೂಪಿಸಿದೆ. ಇನ್ಮುಂದೆ ಕರ್ನಾಟಕದಲ್ಲಿ ಕೆಇಎ ನಡೆಸುವ ಎಲ್ಲಾ ಪರೀಕ್ಷೆಗಳಿಗೆ ಆಧಾರ್ ನಂಬರ್ ಆಧಾರಿತ ಒಂದೇ ನೋಂದಣಿ ವ್ಯವಸ್ಥೆ ಜಾರಿಗೆ ಬರಲಿದೆ.

ಒನ್ ಟೈಮ್ ರಿಜಿಸ್ಟ್ರೇಷನ್ ವ್ಯವಸ್ಥೆ ಹೇಗೆ ಕೆಲಸ ಮಾಡಲಿದೆ?:

ಯೂನಿಕ್ ನಂಬರ್ ಮತ್ತು ಶಾಶ್ವತ ಪ್ರೊಫೈಲ್:

ಪಿಯುಸಿ ಶಿಕ್ಷಣದ ಬಳಿಕ ಅಭ್ಯರ್ಥಿಗಳು ಒಮ್ಮೆ ಆಧಾರ್ ಆಧಾರಿತ ನೋಂದಣಿ ಮಾಡಿಕೊಂಡರೆ ಆ ಅಭ್ಯರ್ಥಿಗೆ ‘ಯೂನಿಕ್ ನಂಬರ್’ ಜೆನರೇಟ್ ಆಗಲಿದೆ. ಈ ಸಂಖ್ಯೆಯ ಮೂಲಕ ಎಲ್ಲಾ ದಾಖಲೆಗಳು ಕೆಇಎಗೆ ಒಮ್ಮೆ ಸಲ್ಲಿಕೆಯಾದರೆ ಶಾಶ್ವತ ಪ್ರೊಫೈಲ್ ಕ್ರಿಯೇಟ್ ಆಗುತ್ತದೆ.

ಸುಲಭ ಅರ್ಜಿ ಸಲ್ಲಿಕೆ:

ಆಧಾರ್ ಸಂಖ್ಯೆ, ಯೂನಿಕ್ ನಂಬರ್ ಅಥವಾ ನೋಂದಾಯಿತ ಮೊಬೈಲ್ ಸಂಖ್ಯೆಗಳಲ್ಲಿ ಯಾವುದಾದರೂ ಒಂದನ್ನು ಬಳಸಿ ಸರ್ಕಾರದ ಯಾವುದೇ ಸ್ಪರ್ಧಾತ್ಮಕ ಹುದ್ದೆಗಳಿಗೆ, ಸಿಇಟಿ ಹಾಗೂ ಪಿಜಿ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಮರುಮರು ದಾಖಲೆ ಸಲ್ಲಿಕೆ ಕಿರಿಕಿರಿ ಇಲ್ಲ:

ಒಮ್ಮೆ ನೋಂದಣಿ ಮಾಡಿಕೊಂಡರೆ ಮುಂದಿನ ಪರೀಕ್ಷೆಗಳು ಹಾಗೂ ಕೌನ್ಸೆಲಿಂಗ್‌ಗೂ ಅದೇ ಮಾಹಿತಿ ಮತ್ತು ದಾಖಲೆಗಳು ಬಳಕೆಯಾಗಲಿವೆ. ಪ್ರತಿ ಬಾರಿಯೂ ವೈಯಕ್ತಿಕ ಮಾಹಿತಿ, ಶೈಕ್ಷಣಿಕ ದಾಖಲೆಗಳನ್ನು ಭರ್ತಿ ಮಾಡುವ ಅಗತ್ಯವಿರುವುದಿಲ್ಲ.

ಇದನ್ನೂ ಓದಿ: ಪರೀಕ್ಷಾ ಅಕ್ರಮ ತಡೆಯಲು ಕೆಇಎ ಮಾಸ್ಟರ್ ಪ್ಲ್ಯಾನ್; ಇನ್ಮುಂದೆ ಟ್ರಿಪಲ್ ಒಎಂಆರ್ ಶೀಟ್ ವ್ಯವಸ್ಥೆ

ಪರೀಕ್ಷಾ ಅಕ್ರಮ ಹಾಗೂ ನಕಲಿ ಅರ್ಜಿಗಳಿಗೆ ಬೀಳಲಿದೆ ಬ್ರೇಕ್:

ಈ ನೂತನ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯಿಂದಾಗಿ ಪರೀಕ್ಷಾ ಅಕ್ರಮಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಬಹುದು. ಒಬ್ಬನೇ ಅಭ್ಯರ್ಥಿ ಬಹು ಅರ್ಜಿಗಳನ್ನು ಸಲ್ಲಿಸುವುದನ್ನು ಪತ್ತೆ ಹಚ್ಚಿ ತಡೆಯಲು ಕೆಇಎಗೆ ಸಹಕಾರಿಯಾಗಲಿದೆ. ಮುಂಬರುವ ಸಿಇಟಿ ಅರ್ಜಿಯಿಂದಲೇ ಈ ಹೊಸ ನೋಂದಣಿ ವ್ಯವಸ್ಥೆಯನ್ನು ಪರಿಚಯಿಸಲು ಕೆಇಎ ಭರದಿಂದ ಸಿದ್ಧತೆ ನಡೆಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಧನ್ವೀರ್ ಮೇಲೆ ಇಡಿ, ಐಟಿ ಇಲಾಖೆಗೆ ಕೇಸ್ ಹಾಕಿದ್ದು ಯಾಕೆ? ವಿವರಿಸಿದ ಲಾಯರ್
ಧನ್ವೀರ್ ಮೇಲೆ ಇಡಿ, ಐಟಿ ಇಲಾಖೆಗೆ ಕೇಸ್ ಹಾಕಿದ್ದು ಯಾಕೆ? ವಿವರಿಸಿದ ಲಾಯರ್
Live: ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರ ಸುದ್ದಿಗೋಷ್ಠಿ ನೇರಪ್ರಸಾರ
Live: ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರ ಸುದ್ದಿಗೋಷ್ಠಿ ನೇರಪ್ರಸಾರ
ಆಸ್ಪತ್ರೆಗೆ ದಾಖಲಾದ ಡಿಸಿಎಂ ಪರಮೇಶ್ವರ್; ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
ಆಸ್ಪತ್ರೆಗೆ ದಾಖಲಾದ ಡಿಸಿಎಂ ಪರಮೇಶ್ವರ್; ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
ಅರ್ನಾಬ್ ಅಬ್ಬರ: ಕಾಕಿನಾಡಕ್ಕೆ ರೆಡ್​​ ಅಲರ್ಟ್
ಅರ್ನಾಬ್ ಅಬ್ಬರ: ಕಾಕಿನಾಡಕ್ಕೆ ರೆಡ್​​ ಅಲರ್ಟ್
ಬೀದರ್‌ನ 8 ವಿದ್ಯಾರ್ಥಿಗಳಿಗೆ ವಿಮಾನಯಾನದ ಉಡುಗೊರೆ ನೀಡಿದ ಶಿಕ್ಷಕ!
ಬೀದರ್‌ನ 8 ವಿದ್ಯಾರ್ಥಿಗಳಿಗೆ ವಿಮಾನಯಾನದ ಉಡುಗೊರೆ ನೀಡಿದ ಶಿಕ್ಷಕ!
ಪ್ರಮೋದಾದೇವಿ ಆರೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್​​ ಏನಂದ್ರು?
ಪ್ರಮೋದಾದೇವಿ ಆರೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್​​ ಏನಂದ್ರು?
ಸ್ಟಿಂಗ್ ಪ್ರಕರಣ: ಸಿಸಿಬಿಗೆ ಇನ್ನೂ ಸಿಕ್ಕಿಲ್ಲ 2 ಮದರ್ ಡಿವೈಸ್, ಮೊಬೈಲ್!
ಸ್ಟಿಂಗ್ ಪ್ರಕರಣ: ಸಿಸಿಬಿಗೆ ಇನ್ನೂ ಸಿಕ್ಕಿಲ್ಲ 2 ಮದರ್ ಡಿವೈಸ್, ಮೊಬೈಲ್!
ಸೌಜನ್ಯ ಪ್ರಕರಣ ಮರು ತನಿಖೆ: 15ಕ್ಕೂ ಹೆಚ್ಚು ಅಧಿಕಾರಿಗಳಿಗೆ SIT ನೋಟಿಸ್
ಸೌಜನ್ಯ ಪ್ರಕರಣ ಮರು ತನಿಖೆ: 15ಕ್ಕೂ ಹೆಚ್ಚು ಅಧಿಕಾರಿಗಳಿಗೆ SIT ನೋಟಿಸ್
ಹಾಸನಾಂಬೆ ಭಕ್ತರಿಗೆ ಗುಡ್‌ನ್ಯೂಸ್‌; ವಿಶೇಷ ರೈಲು, 200ಕ್ಕೂ ಹೆಚ್ಚು ಬಸ್‌!
ಹಾಸನಾಂಬೆ ಭಕ್ತರಿಗೆ ಗುಡ್‌ನ್ಯೂಸ್‌; ವಿಶೇಷ ರೈಲು, 200ಕ್ಕೂ ಹೆಚ್ಚು ಬಸ್‌!
ಕಬ್ಬು ಬೆಳೆಗಾರರ ಸಭೆ ಮುಗಿಸಿ ಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಕಬ್ಬು ಬೆಳೆಗಾರರ ಸಭೆ ಮುಗಿಸಿ ಸಿಎಂ ಡಿಕೆಶಿ ಹೇಳಿದ್ದೇನು ನೋಡಿ