ಕೆಪಿಟಿಸಿಎಲ್ ಎಇ,ಜೆಇ ನೇಮಕ ಪರೀಕ್ಷೆ, ಜನವರಿ ಮೊದಲ ವಾರದಲ್ಲಿ ಫಲಿತಾಂಶ: ಸಚಿವ ಸುನೀಲ್​ ಕುಮಾರ್​

| Updated By: ಗಂಗಾಧರ​ ಬ. ಸಾಬೋಜಿ

Updated on: Dec 20, 2022 | 9:28 PM

ಕೆಪಿಟಿಸಿಎಲ್ ಎಇ,ಜೆಇ ನೇಮಕ ಪರೀಕ್ಷೆ, ಜನವರಿ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲಕುಮಾರ್ ಅವರು ತಿಳಿಸಿದರು.

ಕೆಪಿಟಿಸಿಎಲ್ ಎಇ,ಜೆಇ ನೇಮಕ ಪರೀಕ್ಷೆ, ಜನವರಿ ಮೊದಲ ವಾರದಲ್ಲಿ ಫಲಿತಾಂಶ: ಸಚಿವ ಸುನೀಲ್​ ಕುಮಾರ್​
ಸಚಿವ ಸುನೀಲ್​ ಕುಮಾರ್​
Follow us on

ಬೆಂಗಳೂರು: ಕೆಪಿಟಿಸಿಎಲ್ (KPTCL) ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್​ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್​ ಕುಮಾರ್ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಇಂದು (ಡಿ. 20) ಶೂನ್ಯವೇಳೆಯಲ್ಲಿ ಶಾಸಕ ಸುರೇಶಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿದ್ದು, ಫಲಿತಾಂಶ ಪ್ರಕಟಿಸಲಾಗಿರುವುದಿಲ್ಲ.

ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನಕ್ಕಿದ್ದು, ಈ ಕುರಿತು ಕೆಇಎ ಜೊತೆಗೆ ಫಾಲೋಅಫ್ ಮಾಡುತ್ತಿದ್ದೇವೆ. ಈ ವಾರದಲ್ಲಿ ಅಥವಾ ಅಧಿವೇಶನ ಮುಗಿಯುವುದರೊಳಗೆ ಕೀ ಉತ್ತರಗಳನ್ನು ಪ್ರಕಟಿಸಿ, ಜನೆವರಿ ಮೊದಲ ವಾರದೊಳಗೆ ಫಲಿತಾಂಶ ಪ್ರಕಟಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: KARTET Result 2022: ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ, ರಿಸಲ್ಟ್​ ನೋಡಲು ಇಲ್ಲಿ ಕ್ಲಿಕ್ಕಿಸಿ

ಶಾಸಕ ಸುರೇಶಕುಮಾರ್ ಅವರು ಪರೀಕ್ಷೆ ಬರೆದು ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ. ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಜಾತಕ ಪಕ್ಷಿಯಂತೆ ಕಾಯುತ್ತಿದ್ದು, ಕೂಡಲೇ ಕ್ರಮವಹಿಸುವಂತೆ ಅವರು ಸಚಿವರಲ್ಲಿ ಕೋರಿದ್ದರು.

ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ 2022-23ನೇ ಸಾಲಿನ ಪ್ರವೇಶ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ (Dr. Gangubai Hangal University) ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು 2022-23ನೇ ಸಾಲಿನ ಬಿ.ಪಿ.ಎ, ಎಂ.ಪಿ.ಎ, ಸರ್ಟಿಫಿಕೇಟ್ ಕೋರ್ಸ್, ಡಿಪ್ಲೋಮ, ಪಿ.ಜಿ. ಡಿಪ್ಲೋಮಾ ಹಾಗೂ ಡಿ.ಟಿಲ್ ಕೋರ್ಸ್‍ಗಳಿಗೆ ಡಿಸೆಂಬರ್ 26, 2022ರವರೆಗೆ ಪ್ರವೇಶಾತಿಗಾಗಿ ಅವಧಿಯನ್ನು ವಿಸ್ತರಿಸಿದೆ. ಬಿ.ಪಿ.ಎ ಹಾನರ್ಸ್ (Bachelor of Performing Arts): ನಾಲ್ಕು ವರ್ಷಗಳ ಕೋರ್ಸ್, ಹೊಸ ಶಿಕ್ಷಣ ನೀತಿ ಮಾದರಿಯಲ್ಲಿ ಐಚ್ಛಿಕ ವಿಷಯಗಳು, ನಾಟಕ, ಭರತನಾಟ್ಯ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ತಬಲಾ, ಮೃದಂಗ, ವೀಣಾ, ಪಿಟೀಲು. ಭಾಷಾ ಪತ್ರಿಕೆ, ಕನ್ನಡ/ ಐಚ್ಛಿಕ ಕನ್ನಡ/ ಸಂಸ್ಕಂತ ಮತ್ತು ಇಂಗ್ಲಿಷ್ ಆಗಿದ್ದು, ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಇದನ್ನೂ ಓದಿ: ಯುಜಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​: ಇಂಗ್ಲೀಷ್- ಕನ್ನಡ ಎರಡೂ ಭಾಷೆಯಲ್ಲಿ ಪರೀಕ್ಷೆ ಬರೆಯಬಹದು

ಎಂ.ಪಿ.ಎ: ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಭರತನಾಟ್ಯ, ನಾಟಕ, ತಬಲ, ಮೃದಂಗ, ವೀಣೆ ಪ್ರವೇಶಕ್ಕೆ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ವಿಶ್ವವಿದ್ಯಾಲಯದ ಮೌಖಿಕ ಪರೀಕ್ಷೆಯಲ್ಲಿ ಅರ್ಹತೆ ಹೊಂದುವುದು.

ಡಿ.ಲಿಟ್ (D.Litt): ಸಂಗೀತ, ನೃತ್ಯ, ನಾಟಕ ಹಾಗೂ ಪ್ರದರ್ಶಕ ಕಲೆಗಳಲ್ಲಿ ಅಧ್ಯಯನ ನಡೆಸಿ ಉನ್ನತ ಮಟ್ಟದ ಪರಿಣಿತಿ ಹೊಂದಿರಬೇಕು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:27 pm, Tue, 20 December 22