ಬೆಂಗಳೂರು: ಮಾರ್ಚ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KARNATAKA SCHOOL EXAMINATION AND ASSESSMENT BOARD KSEAB) ಈಗಾಗಲೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. 2022-23 ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ (2nd PUC Students) ಇಲಾಖೆ ಸಿಹಿ ಸುದ್ದಿ ನೀಡಿದೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು (2nd Puc Result) ಉತ್ತಮಗೊಳಿಸುವ ನಿಟ್ಟಿನಲ್ಲಿ ಇಲಾಖೆ ಈ ಬಾರಿಯ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಯಲ್ಲಿ ಎಲ್ಲ ವಿಷಯಗಳಲ್ಲೂ 1 ಅಂಕದ 20 ಪ್ರಶ್ನೆಗಳನ್ನು (Objective-Type Questions) ಕೇಳಿದೆ. ಪ್ರತಿ ವರ್ಷ 5 ಅಥವಾ 6 ಮಾತ್ರ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು.
ಈ 20 ಪ್ರಶ್ನೆಗಳಲ್ಲಿ 12 ಬಹುಆಯ್ಕೆ ಪ್ರಶ್ನೆಗಳು (MCQ), ಕೆಲವು ಬಿಟ್ಟಸ್ಥಳ ತುಂಬಿರಿ ಮತ್ತು ಹೊಂದಿಸಿ ಬರೆಯಿರಿ ಇತ್ಯಾದಿ ಪ್ರಶ್ನೆಗಳನ್ನು ಕೇಳಿದೆ. ಈ ಬದಲಾವಣೆ ಹೊರತಾಗಿಯೂ ಪ್ರಶ್ನೆಪತ್ರಿಕೆ ಮಾದರಿ ಮೊದಲಿನಂತೆಯೇ ಉಳಿಯುತ್ತದೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಹಿಂದುಗೆ ಎಚ್.ಎನ್. ಕೆಎಸ್‌ಇಎಬಿಯ ನಿರ್ದೇಶಕ ಗೋಪಾಲಕೃಷ್ಣ ಹೇಳಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ 6 ಲಕ್ಷ ವಿದ್ಯಾರ್ಥಿಗಳು ನೊಂದಾಯಿಸಿಕೊಳ್ಳುದ್ದು, ಆದರೆ ಅವರಲ್ಲಿ ಪಾಸಾಗುವರ ಸಂಖ್ಯೆ ಕಡಿಮೆ ಇದೆ. ಪ್ರತಿ ವರ್ಷ ದ್ವಿತೀಯ ಪಿಯುಸಿಯಲ್ಲಿ ಪಾಸಾದ ವಿದ್ಯಾರ್ಥಿಗಳ ಸಂಖ್ಯೆ ಶೇ 60% ಕ್ಕಿಂತ ಮೀರುತ್ತಿಲ್ಲ. ಹೀಗಾಗಿ ಫಲಿತಾಂಶವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಸಿಬಿಎಸ್‌ಇಯಂತಹ ಕೇಂದ್ರ ಮಂಡಳಿಯ ಸಂಸ್ಥೆಗಳಲ್ಲಿ, 12 ನೇ ತರಗತಿಯಲ್ಲಿ ಪಾಸಾದ ವಿದ್ಯಾರ್ಥಿಗಳ ಸಂಖ್ಯೆ ಶೇ 90%ಕ್ಕಿಂತ ಹೆಚ್ಚಾಗಿದೆ. ಈ ಫಲಿತಾಂಶಕ್ಕೆ ಕಾರಣ ವಸ್ತುನಿಷ್ಠ ಪ್ರಶ್ನೆಗಳು ಮತ್ತು ಬಹುಆಯ್ಕೆಯ ಪ್ರಶ್ನೆಗಳಿಗೆ ಹೆಚ್ಚಿನ ಒತ್ತು ನೀಡುವುದು. ಕೆಲವು ನೆರೆಯ ರಾಜ್ಯಗಳು ಕೂಡ ಫಲಿತಾಂಶವನ್ನು ಸುಧಾರಿಸಲು ಇದೇ ಸೂತ್ರವನ್ನು ಅಳವಡಿಸಿಕೊಂಡಿವೆ.
ವಿದ್ಯಾರ್ಥಿಗಳು ಎರಡು ವಿಷಯಗಳಿಗೆ ಶೇ 5 ರಷ್ಟು ಗ್ರೇಸ್ ಮಾರ್ಕ್ಸ್ ಪಡೆಯುತ್ತಾರೆ, ಒಂದು ಭಾಷೆಯಲ್ಲಿ ಮತ್ತು ಇನ್ನೊಂದು ಪ್ರಮುಖ ವಿಷಯದಲ್ಲಿ. ವಿದ್ಯಾರ್ಥಿಗಳು ಯಾವುದೇ ಎರಡು ವಿಷಯಗಳಲ್ಲೂ ಒಂದೇ ರೀತಿ ಗ್ರೇಸ್ ಮಾರ್ಕ್ಸ್ ಪಡೆಯುತ್ತಾರೆ. ಒಟ್ಟು 600 ಅಂಕಗಳಲ್ಲಿ 210 ಪಡೆಯುವ ವಿದ್ಯಾರ್ಥಿಯು ಗ್ರೇಸ್ ಅಂಕಗಳನ್ನು ಪಡೆಯಲು ಅರ್ಹನಾಗಿರುತ್ತಾನೆ.
ಈ ಬಗ್ಗೆ ನಿರ್ದೇಶಕ ಗೋಪಾಲಕೃಷ್ಣ ಮಾತನಾಡಿ ಫಲಿತಾಂಶವನ್ನು ಸುಧಾರಿಸು ನಿಟ್ಟಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೆಲವು ನಿಯಮಗಳನ್ನು ಮಾರ್ಪಡಿಸಿದ್ದೇವೆ. ಗ್ರೇಸ್ ಮಾರ್ಕ್ಸ್, ವಸ್ತುನಿಷ್ಠ ಪ್ರಶ್ನೆಗಳನ್ನು ಕೇಳುವುದರಿಂದ ಮತ್ತು ಮರು ಮೌಲ್ಯಮಾಪನ ಕೂಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಅನುಕೂಲವಾಗುತ್ತದೆ. ”
ಮಂಡಳಿಯು ಈ ವರ್ಷದಿಂದ 10ನೇ ತರಗತಿಯಲ್ಲೂ ಗ್ರೇಸ್ ಮಾರ್ಕ್ಸ್ ಕೊಡಲು ನಿರ್ಧರಿಸಿದೆ. ಮೂರು ವಿಷಯಗಳಲ್ಲಿ ಮಾತ್ರ ಶೇ 10 ರಷ್ಟು ಗ್ರೇಸ್ ಅಂಕಗಳನ್ನು ನೀಡಲಾಗುತ್ತದೆ. ಒಟ್ಟು 625 ಅಂಕಗಳಲ್ಲಿ 219 ಅಂಕಗಳನ್ನುಗಳಿಸುವ ವಿದ್ಯಾರ್ಥಿಗಳು ಮಾತ್ರ ಗ್ರೇಸ್ ಅಂಕಗಳನ್ನು ಪಡೆಯಲು ಅರ್ಹರಾಗುತ್ತಾರೆ.
ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:37 am, Sun, 5 March 23