ಬೆಂಗಳೂರು, (ಏಪ್ರಿಲ್ 08): ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ( 2nd PUC Students) ಗುಡ್ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Karnataka 2nd PUC Exam 2025 Result ) ಇಂದು ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಅಂದೆ ಮಧ್ಯಾಹ್ನ 1.30ಕ್ಕೆ ವೆಬ್ಸೈಟ್ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಇದ್ದಲ್ಲೇ ಆನ್ಲೈನ್ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ಇನ್ನು ವೀಕ್ಷಣೆ ಮಾಡುವುದು ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.
ಪತ್ರಿಕಾಗೋಷ್ಠಿ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಆ ನಂತರ ಅಂದರೆ 1:30ರ ನಂತರ ಆನ್ಲೈನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಈ ಎರಡು ವೆಬ್ಸೈಟ್ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.
ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:22 pm, Mon, 7 April 25