AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2025 Highlights: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿವೆ ಮುಖ್ಯಾಂಶಗಳು

Ganapathi Sharma
|

Updated on:Apr 08, 2025 | 2:36 PM

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ 2025 ಲೈವ್​: ಸೆಕೆಂಡ್ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದ್ದಾರೆ. ವೆಬ್​​ಸೈಟ್​ನಲ್ಲಿಯೂ ಫಲಿತಾಂಶ ಲಭ್ಯವಿದೆ. ಉಡುಪಿ ಜಿಲ್ಲೆ ಈ ಬಾರಿ ಪ್ರಥಮ ಸ್ಥಾನ ಪಡೆದಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದ ಮುಖ್ಯಾಂಶಗಳು ಇಲ್ಲಿವೆ.

Karnataka 2nd PUC Result 2025 Highlights: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿವೆ ಮುಖ್ಯಾಂಶಗಳು
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು, ಏಪ್ರಿಲ್ 8: ವಿದ್ಯಾರ್ಥಿ ಜೀವನದ ಟರ್ನಿಂಗ್ ಪಾಯಿಂಟ್ ಎಂದೇ ಹೇಳಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ.ಮಧ್ಯಾಹ್ನ 12.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಲಿದ್ದಾರೆ. ಆಮೇಲೆ 1.30 ರ ನಂತರ ಶಿಕ್ಷಣ ಇಲಾಖೆ ವೆಬ್​ಸೈಟ್​​ಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್​ಲೋನ್ ಮಾಡಿಕೊಳ್ಳಲೂ ಅವಕಾಶ ದೊರೆಯಲಿದೆ. karresults.nic.in ಹಾಗೂ kseab.karnataka.gov.in ಈ ಎರಡು ವೆಬ್​ಸೈಟ್​ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ. ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

LIVE NEWS & UPDATES

The liveblog has ended.
  • 08 Apr 2025 01:21 PM (IST)

    2nd PUC Result 2025 Live: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 57.11ರಷ್ಟು ಫಲಿತಾಂಶ

    2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 57.11ರಷ್ಟು ಫಲಿತಾಂಶ ಬಂದಿದೆ. ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 62.69ರಷ್ಟು, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 82.66ರಷ್ಟು, ಬಿಬಿಎಂಪಿ ವ್ಯಾಪ್ತಿಯ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 68.88ರಷ್ಟು, ವಿಭಜಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 78.58ರಷ್ಟು ಹಾಗೂ ವಸತಿ ಶಾಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 86.18ರಷ್ಟು ಫಲಿತಾಂಶ ಪ್ರಕಟವಾಗಿದೆ.

  • 08 Apr 2025 01:17 PM (IST)

    2nd PUC Result 2025 Live: ಬಾಲಕಿಯರದ್ದೇ ಮೇಲುಗೈ

    ಪ್ರತಿವರ್ಷದಂತೆ ಈ ಬಾರಿಯೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 3,45,694 ಬಾಲಕಿಯರು ಹಾಜರಾಗಿದ್ದರು. ಈ ಪೈಕಿ 2,69,212 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇಕಡಾ 77.88ರಷ್ಟು ಬಾಲಕಿಯರು ಉತ್ತೀರ್ಣರಾದಂತಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದರು. ಈ ಪೈಕಿ  1,99,227 ಬಾಲಕರು ಉತ್ತೀರ್ಣರಾಗಿದ್ದಾರೆ.

  • 08 Apr 2025 01:12 PM (IST)

    2nd PUC Result 2025 Live: ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

    ಈ ಸಲ ಎರಡನೇ ಪರೀಕ್ಷೆ ಮತ್ತು 3ನೇ ಪರೀಕ್ಷೆಗೆ ಪರೀಕ್ಷಾ ಶುಲ್ಕ ಇರುವುದಿಲ್ಲ. ಶಿಕ್ಷಣ ಇಲಾಖೆಯ ಮಹತ್ವದ ಹೆಜ್ಜೆ ಇದು ಎಂದು ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಜೆ ಸ್ಪೆಶಲ್ ಕ್ಲಾಸ್ ಮಾಡಲು ಮಾಹಿತಿ ಕೊಟ್ಟಿದ್ದೇವೆ. ಯಾರು ತೇರ್ಗಡೆ ಹೊಂದಿಲ್ಲವೋ ಅಂತಹವರಿಗೆ ಇನ್ನು ಎರಡು ಅವಕಾಶ ಇದೆ. ಮುಖ್ಯ ಮಂತ್ರಿಗಳು ಕೂಡ ಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಬಂಗಾರಪ್ಪ ಹೇಳಿದ್ದಾರೆ.

  • 08 Apr 2025 01:07 PM (IST)

    2nd PUC Result 2025 Live: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಬೆಂಗಳೂರಿನಲ್ಲೆಷ್ಟು ಪಾಸ್ ಪ್ರಮಾಣ

    ಬೆಂಗಳೂರು ದಕ್ಷಿಣ ಶೇ 85.36, ಬೆಂಗಳೂರು ಉತ್ತರ ಶೇ 83.31 ಫಲಿತಾಂಶ ದಾಖಲಿಸಿವೆ. ಉತ್ತರ ಕನ್ನಡ ಜಿಲ್ಲೆ 82.93ರಷ್ಟು ಫಲಿತಾಂಶ ದಾಖಲಿಸಿದ್ದರೆ, ಕೊಡಗು ಜಿಲ್ಲೆ 83.84ರಷ್ಟು ಫಲಿತಾಂಶ ಗಳಿಸಿದೆ.

  • 08 Apr 2025 01:03 PM (IST)

    2nd PUC Result 2025 Live: ಶೇಕಡಾ 73.45 ರಷ್ಟು ಫಲಿತಾಂಶ

    ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾದಂತಾಗಿದೆ.

  • 08 Apr 2025 01:01 PM (IST)

    2nd PUC Result 2025 Live: ಕಾಮರ್ಸ್, ಕಲಾ ವಿಭಾಗದಲ್ಲಿ ಯಾರಿಗೆ ರಾಂಕ್?

    ಕಾಮರ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು‌ ವಿದ್ಯಾರ್ಥಿನಿ ದೀಪಶ್ರೀ ಮೊದಲ ರಾಂಕ್ ಗಳಿಸಿದ್ದಾರೆ. ಇವರು 600 ಕ್ಕೆ ‌599 ಅಂಕ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ 600 ಕ್ಕೆ ‌597 ಅಂಕ ಗಳಿಸಿ ಮೊದಲ ರಾಂಕ್ ಪಡೆದಿದ್ದಾರೆ.

  • 08 Apr 2025 12:58 PM (IST)

    2nd PUC Result 2025 Live: ದಕ್ಷಿಣ ಕನ್ನಡ ಜಿಲ್ಲೆಗೆ ಎರಡನೇ ಸ್ಥಾನ

    ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಗಳಿಸಿದೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ. ಈಕೆ ದಕ್ಷಿಣ ಕನ್ನಡದ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.

  • 08 Apr 2025 12:55 PM (IST)

    2nd PUC Result 2025 Live: ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಜಿಲ್ಲೆ ಪ್ರಥಮ

    ಉಡುಪಿ ಜಿಲ್ಲೆ ಶೇ 93.90 ಫಲಿತಾಂಶ ಗಳಿಸಿದ್ದು, ಮೊದಲ ಸ್ಥಾನ ಪಡೆದಿದೆ. ಯಾದಗಿರಿ ಶೇ 48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ.

  • 08 Apr 2025 12:51 PM (IST)

    2nd PUC Result 2025 Live: ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಆರಂಭ

    ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಆರಂಭವಾಗಿದೆ. ಸಚಿವರು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುತ್ತಿದ್ದಾರೆ. ಲೈವ್ ಅಪ್​ಡೇಟ್ಸ್ ಇಲ್ಲಿವೆ.

  • 08 Apr 2025 12:45 PM (IST)

    2nd PUC Result 2025 Live: ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ವಿಳಂಬ

    ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ವಿಳಂಬವಾಗಿದೆ, ಇದರಿಂದಾಗಿ ದ್ವಿತೀಯ ಪಿಯು ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ.

  • 08 Apr 2025 11:43 AM (IST)

    2nd PUC Result 2025 Live: ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ ಸುಮಾರು 6 ಲಕ್ಷ ವಿದ್ಯಾರ್ಥಿಗಳು

    ಸುಮಾರು 6 ಲಕ್ಷ ವಿದ್ಯಾರ್ಥಿಗಳು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 20 ರವರೆಗೆ ನಡೆದಿದ್ದವು.

  • 08 Apr 2025 11:05 AM (IST)

    2nd PUC Result 2025 Live: ಗಮನಿಸಿ; ಸರ್ವರ್ ಸಮಸ್ಯೆ ಎದುರಾಗಬಹುದು

    ಕರ್ನಾಟಕ ಪಿಯುಸಿ ಫಲಿತಾಂಶ 2025 ಪ್ರಕಟವಾದ ನಂತರ, ಸಹಸ್ರಾರು ಮಂದಿ ಏಕಕಾಲದಲ್ಲಿ ವೆಬ್​ಸೈಟ್ ತೆರೆಯುವ ಕಾರಣ ಶಿಕ್ಷಣ ಇಲಾಖೆ ವೆಬ್​ಸೈಟ್ ಸರ್ವರ್ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಡಿಜಿಲಾಕರ್ ಮತ್ತು SMS ಮೂಲಕವೂ ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

  • 08 Apr 2025 10:02 AM (IST)

    2nd PUC Result 2025 Live: ಸೆಕೆಂಡ್ ಪಿಯುಸಿ ಪಾಸ್ ಆಗ್ಬೇಕಿದ್ರೆ ಎಷ್ಟು ಮಾರ್ಕ್ಸ್ ಬೇಕು?

    ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ಥಿಯರಿ ಮತ್ತು ಪ್ರಾಕ್ಟಿಕಲ್ ಸೇರಿದಂತೆ ಪ್ರತಿ ವಿಷಯದಲ್ಲೂ ಕನಿಷ್ಠ ಶೇ 35 ಅಂಕ ಗಳಿಸಬೇಕು. ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ಥಿಯರಿಯಲ್ಲಿ ಕನಿಷ್ಠ 25 ಅಂಕಗಳು ಮತ್ತು ಪ್ರಾಕ್ಟಿಕಲ್‌ನಲ್ಲಿ 11 ಅಂಕಗಳನ್ನು ಗಳಿಸಬೇಕು.

  • 08 Apr 2025 09:59 AM (IST)

    2nd PUC Result 2025 Live: ಆನ್​ಲೈನ್​ನಲ್ಲಿ ಫಲಿತಾಂಶ ನೋಡಲು ಹೀಗೆ ಮಾಡಿ

    ಪಿಯುಸಿ ಫಲಿತಾಂಶ 2025: ಆನ್​ಲೈನ್​ನಲ್ಲಿ ಪರಿಶೀಲಿಸುವುದು ಹೇಗೆ?

    1. ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
    2. ಹೋಂ ಪೇಜ್​ನಲ್ಲಿ, Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
    3. ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು.
    4. Second PU Results 2025 ಎಂಬುದು ಸ್ಕ್ರೀನ್​ನಲ್ಲಿ ಕಾಣಿಸುತ್ತದೆ.
  • 08 Apr 2025 09:55 AM (IST)

    2nd PUC Result 2025 Live: ಆನ್​ಲೈನ್​ನಲ್ಲಿಯೂ ನೋಡಬಹುದು ಫಲಿತಾಂಶ

    ಮಧ್ಯಾಹ್ನ 1.30 ರ ವೇಳೆಗೆ ಆನ್​ಲೈನ್​ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ನಂತರ ಶಿಕ್ಷಣ ಇಲಾಖೆ ವೆಬ್​ಸೈಟ್ ಮೂಲಕ ಅಂಕಪಟ್ಟಿ ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ.

  • 08 Apr 2025 09:54 AM (IST)

    2nd PUC Result 2025 Live: 12.30ಕ್ಕೆ ಫಲಿತಾಂಶ

    ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

  • 08 Apr 2025 09:54 AM (IST)

    2nd PUC Result 2025 Live: ಆನ್​ಲೈನ್​ನಲ್ಲಿ ಫಲಿತಾಂಶ ನೋಡಲು ಹೀಗೆ ಮಾಡಿ

    ಆನ್​ಲೈನ್ ಮೂಲಕ ಫಲಿತಾಂಶ ವೀಕ್ಷಿಸಲು karresults.nic.in ಹಾಗೂ kseab.karnataka.gov.in ಈ ಎರಡು ವೆಬ್​​ಸೈಟ್​​ಗಳನ್ನು ಬಳಸಬಹುದು.

    ಇದನ್ನೂ ಓದಿ: ಸೆಕೆಂಡ್ ಪಿಯುಸಿ ಫಲಿತಾಂಶ ಇಂದು, ನೀವು ತಿಳಿಯಲೇಬೇಕಾದ ವಿಚಾರಗಳು ಇಲ್ಲಿವೆ

Published On - Apr 08,2025 9:51 AM

Follow us
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್