ಬೆಂಗಳೂರು, ಏಪ್ರಿಲ್ 8: ವಿದ್ಯಾರ್ಥಿ ಜೀವನದ ಟರ್ನಿಂಗ್ ಪಾಯಿಂಟ್ ಎಂದೇ ಹೇಳಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ.ಮಧ್ಯಾಹ್ನ 12.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಲಿದ್ದಾರೆ. ಆಮೇಲೆ 1.30 ರ ನಂತರ ಶಿಕ್ಷಣ ಇಲಾಖೆ ವೆಬ್ಸೈಟ್ಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್ಲೋನ್ ಮಾಡಿಕೊಳ್ಳಲೂ ಅವಕಾಶ ದೊರೆಯಲಿದೆ. karresults.nic.in ಹಾಗೂ kseab.karnataka.gov.in ಈ ಎರಡು ವೆಬ್ಸೈಟ್ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ. ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 57.11ರಷ್ಟು ಫಲಿತಾಂಶ ಬಂದಿದೆ. ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 62.69ರಷ್ಟು, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 82.66ರಷ್ಟು, ಬಿಬಿಎಂಪಿ ವ್ಯಾಪ್ತಿಯ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 68.88ರಷ್ಟು,
ವಿಭಜಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 78.58ರಷ್ಟು ಹಾಗೂ ವಸತಿ ಶಾಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 86.18ರಷ್ಟು ಫಲಿತಾಂಶ ಪ್ರಕಟವಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 3,45,694 ಬಾಲಕಿಯರು ಹಾಜರಾಗಿದ್ದರು. ಈ ಪೈಕಿ 2,69,212 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇಕಡಾ 77.88ರಷ್ಟು ಬಾಲಕಿಯರು ಉತ್ತೀರ್ಣರಾದಂತಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದರು. ಈ ಪೈಕಿ 1,99,227 ಬಾಲಕರು ಉತ್ತೀರ್ಣರಾಗಿದ್ದಾರೆ.
ಈ ಸಲ ಎರಡನೇ ಪರೀಕ್ಷೆ ಮತ್ತು 3ನೇ ಪರೀಕ್ಷೆಗೆ ಪರೀಕ್ಷಾ ಶುಲ್ಕ ಇರುವುದಿಲ್ಲ. ಶಿಕ್ಷಣ ಇಲಾಖೆಯ ಮಹತ್ವದ ಹೆಜ್ಜೆ ಇದು ಎಂದು ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಜೆ ಸ್ಪೆಶಲ್ ಕ್ಲಾಸ್ ಮಾಡಲು ಮಾಹಿತಿ ಕೊಟ್ಟಿದ್ದೇವೆ. ಯಾರು ತೇರ್ಗಡೆ ಹೊಂದಿಲ್ಲವೋ ಅಂತಹವರಿಗೆ ಇನ್ನು ಎರಡು ಅವಕಾಶ ಇದೆ. ಮುಖ್ಯ ಮಂತ್ರಿಗಳು ಕೂಡ ಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಬಂಗಾರಪ್ಪ ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಶೇ 85.36, ಬೆಂಗಳೂರು ಉತ್ತರ ಶೇ 83.31 ಫಲಿತಾಂಶ ದಾಖಲಿಸಿವೆ. ಉತ್ತರ ಕನ್ನಡ ಜಿಲ್ಲೆ 82.93ರಷ್ಟು ಫಲಿತಾಂಶ ದಾಖಲಿಸಿದ್ದರೆ, ಕೊಡಗು ಜಿಲ್ಲೆ 83.84ರಷ್ಟು ಫಲಿತಾಂಶ ಗಳಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾದಂತಾಗಿದೆ.
ಕಾಮರ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಮೊದಲ ರಾಂಕ್ ಗಳಿಸಿದ್ದಾರೆ. ಇವರು 600 ಕ್ಕೆ 599 ಅಂಕ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ 600 ಕ್ಕೆ 597 ಅಂಕ ಗಳಿಸಿ ಮೊದಲ ರಾಂಕ್ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಗಳಿಸಿದೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ. ಈಕೆ ದಕ್ಷಿಣ ಕನ್ನಡದ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.
ಉಡುಪಿ ಜಿಲ್ಲೆ ಶೇ 93.90 ಫಲಿತಾಂಶ ಗಳಿಸಿದ್ದು, ಮೊದಲ ಸ್ಥಾನ ಪಡೆದಿದೆ. ಯಾದಗಿರಿ ಶೇ 48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಆರಂಭವಾಗಿದೆ. ಸಚಿವರು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುತ್ತಿದ್ದಾರೆ. ಲೈವ್ ಅಪ್ಡೇಟ್ಸ್ ಇಲ್ಲಿವೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ವಿಳಂಬವಾಗಿದೆ, ಇದರಿಂದಾಗಿ ದ್ವಿತೀಯ ಪಿಯು ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ.
ಸುಮಾರು 6 ಲಕ್ಷ ವಿದ್ಯಾರ್ಥಿಗಳು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 20 ರವರೆಗೆ ನಡೆದಿದ್ದವು.
ಕರ್ನಾಟಕ ಪಿಯುಸಿ ಫಲಿತಾಂಶ 2025 ಪ್ರಕಟವಾದ ನಂತರ, ಸಹಸ್ರಾರು ಮಂದಿ ಏಕಕಾಲದಲ್ಲಿ ವೆಬ್ಸೈಟ್ ತೆರೆಯುವ ಕಾರಣ ಶಿಕ್ಷಣ ಇಲಾಖೆ ವೆಬ್ಸೈಟ್ ಸರ್ವರ್ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಡಿಜಿಲಾಕರ್ ಮತ್ತು SMS ಮೂಲಕವೂ ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ಥಿಯರಿ ಮತ್ತು ಪ್ರಾಕ್ಟಿಕಲ್ ಸೇರಿದಂತೆ ಪ್ರತಿ ವಿಷಯದಲ್ಲೂ ಕನಿಷ್ಠ ಶೇ 35 ಅಂಕ ಗಳಿಸಬೇಕು. ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ಥಿಯರಿಯಲ್ಲಿ ಕನಿಷ್ಠ 25 ಅಂಕಗಳು ಮತ್ತು ಪ್ರಾಕ್ಟಿಕಲ್‌ನಲ್ಲಿ 11 ಅಂಕಗಳನ್ನು ಗಳಿಸಬೇಕು.
ಮಧ್ಯಾಹ್ನ 1.30 ರ ವೇಳೆಗೆ ಆನ್ಲೈನ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ನಂತರ ಶಿಕ್ಷಣ ಇಲಾಖೆ ವೆಬ್ಸೈಟ್ ಮೂಲಕ ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಆನ್ಲೈನ್ ಮೂಲಕ ಫಲಿತಾಂಶ ವೀಕ್ಷಿಸಲು karresults.nic.in ಹಾಗೂ kseab.karnataka.gov.in ಈ ಎರಡು ವೆಬ್ಸೈಟ್ಗಳನ್ನು ಬಳಸಬಹುದು.
ಇದನ್ನೂ ಓದಿ: ಸೆಕೆಂಡ್ ಪಿಯುಸಿ ಫಲಿತಾಂಶ ಇಂದು, ನೀವು ತಿಳಿಯಲೇಬೇಕಾದ ವಿಚಾರಗಳು ಇಲ್ಲಿವೆ
Published On - 9:51 am, Tue, 8 April 25