
ಬೆಂಗಳೂರು, ಏ,23 : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸಿದ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ರಾಜ್ಯಾದ್ಯಂತ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿದ್ದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಅಧಿಕೃತ ಘೋಷಣೆ ಹೊರಬಿದ್ದಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಬರೆದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಕ್ಕಳು ತೇರ್ಗಡೆಯಾಗಿದ್ದಾರೆ. ಶೇ 96.18ರಷ್ಟು ಬಾಲಕಿಯರು, ಶೇ 91.94ರಷ್ಟು ಬಾಲಕರು ಪಾಸಾಗಿದ್ದಾರೆ. 3,92,922 ಬಾಲಕಿಯರ ಪೈಕಿ 3,77,922 ಬಾಲಕಿಯರು ತೇರ್ಗಡೆಯಾಗಿದ್ದಾರೆ. 3,77,287 ಬಾಲಕರ ಪೈಕಿ 3,46,872 ಬಾಲಕರು ತೇರ್ಗಡೆ ಹೊಂದಿದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಣವೆಬಿಳಚಿಯ ಕಬ್ಬಳ ಗ್ರಾಮದ ಶ್ರೀ ವಿದ್ಯಾಲಕ್ಷ್ಮೀ ಕಾನ್ವೆಂಟ್ ಸ್ಕೂಲ್ ವಿದ್ಯಾರ್ಥಿ ಹಾಗೂ ಗಿರೀಶ್‌ರಾವ್ ಹಾಗೂ ಶಿಲ್ಪಾ ದಂಪತಿ ಪುತ್ರ ಭರತ್ ಅವರು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾರೆ.
2025-26ನೇ ಸಾಲಿನ ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಮೂರನೇ ಪರೀಕ್ಷೆ ಇರುವುದಿಲ್ಲ. ಎರಡು ಪರೀಕ್ಷೆ ಮಾತ್ರ ಇರುತ್ತದೆ. ಇದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳುವಂತೆ ಹೇಳಿದ್ದಾರೆ.
ರಾಜ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ 98.40 ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕೊನೆಯ ಸ್ಥಾನ ಕಲಬುರಗಿಗೆ ಬಂದಿದೆ.
ಕೋಲಾರ ನಗರದ ಚಿನ್ಮಯ ವಿದ್ಯಾಲಯದ ವಿದ್ಯಾರ್ಥಿನಿ ಲಕ್ಷ್ಮೀಗೆ 625 ಕ್ಕೆ 624 ಅಂಕ ಪಡೆದುಕೊಂಡಿದ್ದಾರೆ. ಇವರು ಕೋಲಾರ್ ಕೀಲುಕೋಟೆ ನಿವಾಸಿ ನಾಗರಾಜ್‌ಪುತ್ರಿ ಲಕ್ಷ್ಮೀ ಎಂದು ಹೇಳಲಾಗಿದೆ.
ಮೂವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಬೆಳಗಾವಿಯ ರೂಪಾ ಚನಗೌಡ ಪಾಟೀಲ, ಹಾಸನದ ಜಾನವಿ, ಹಾಸನದ ಉತ್ಸವ ಪಾಟೀಲ ಪಡೆದುಕೊಂಡಿದ್ದಾರೆ.
2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. https://karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆದಿದ್ದ SSLC ಪರೀಕ್ಷೆ
ವಿದ್ಯಾರ್ಥಿಗಳ ನೋಂದಾಯಿತ ಮಾಡಿಕೊಂಡಿದ್ದಾರೆ. ಮೊಬೈಲ್‌ಗೆ SMS ಮೂಲಕ ಫಲಿತಾಂಶ ರವಾನೆ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಕೆಲವೇ ಕ್ಷಣಗಳಲ್ಲಿ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಿದೆ. ಈ ಬಾರಿಯ ಮೌಲ್ಯಮಾಪನ ಪ್ರಕ್ರಿಯೆಯ ನಂತರ ಹೊರಬರುತ್ತಿರುವ ಮಾಹಿತಿ ಅನ್ವಯ, ರಾಜ್ಯದಲ್ಲಿ ದಾಖಲೆ ಮಟ್ಟದ ಫಲಿತಾಂಶ ಬರುವ ಸಾಧ್ಯತೆ ದಟ್ಟವಾಗಿದೆ. ಈ ವರ್ಷದ ಒಟ್ಟಾರೆ ತೇರ್ಗಡೆ ಪ್ರಮಾಣ (Pass Percentage) ಶೇ. 85ಕ್ಕಿಂತ ಹೆಚ್ಚು ಇರಲಿದೆ ಎಂದು ಅಂದಾಜಿಸಲಾಗಿದೆ. ಇದು ಕಳೆದ ಕೆಲವು ವರ್ಷಗಳ ಫಲಿತಾಂಶಕ್ಕೆ ಹೋಲಿಸಿದರೆ ಅತ್ಯುತ್ತಮ ಎನ್ನಲಾಗಿದೆ. ಫಲಿತಾಂಶ ಉತ್ತಮವಾಗಿ ಬರುವ ನಿರೀಕ್ಷೆ ಇರುವುದರಿಂದ, ಇಲಾಖೆಯು ಈ ವರ್ಷ ಮೂರನೇ ಪರೀಕ್ಷೆಯನ್ನು (Exam-3) ನಡೆಸುವ ಬಗ್ಗೆ ಗೊಂದಲದಲ್ಲಿದೆ. ಕೇವಲ ಎರಡು ಪರೀಕ್ಷೆಗಳಿಗೆ ಸೀಮಿತಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆದ ಪರೀಕ್ಷೆಗೆ ಒಟ್ಟು 8.6 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯಲ್ಲಿ ಹೆಸರು, ನೋಂದಣಿ ಸಂಖ್ಯೆ, ತಂದೆಯ ಹೆಸರು ಇತ್ಯಾದಿ ವಿವರಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ಸೂಚಿಸಲಾಗಿದೆ, ಏಕೆಂದರೆ ಮುಂದಿನ ತರಗತಿಗೆ ಪ್ರವೇಶ ಪಡೆಯಲು ಇವುಗಳು ಅಗತ್ಯವಾಗಿರುತ್ತದೆ. ಭವಿಷ್ಯಕ್ಕಾಗಿ ಅವುಗಳನ್ನು ಬಳಸಲು ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳ ಮುದ್ರಣವನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಈ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮೂರನೇ ಭಾಷೆಗೆ (ಹಿಂದಿ) ಅಂಕಗಳನ್ನು ಪಡೆಯುತ್ತಾರೆ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಗ್ರೇಡಿಂಗ್ ವ್ಯವಸ್ಥೆ ಸೇರಿದಂತೆ ಪರೀಕ್ಷಾ ನಿಯಮಗಳಲ್ಲಿ ಯಾವುದೇ ಮಾರ್ಪಾಡುಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಮಾತ್ರ ಜಾರಿಗೆ ತರಬಹುದು ಎಂದು ನ್ಯಾಯಾಲಯ ಒತ್ತಿ ಹೇಳಿದೆ.
ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಡಿಜಿಲಾಕರ್ ಮೂಲಕ ಅಥವಾ SMS ಸೇವೆಗಳ ಮೂಲಕವೂ ಪ್ರವೇಶಿಸಲು ಸಾಧ್ಯವಾಗುತ್ತದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಅರ್ಹತೆ ಪಡೆಯಲು, ಅಭ್ಯರ್ಥಿಗಳು ಪ್ರತಿ ವಿಷಯದಲ್ಲೂ ಮಂಡಳಿಯು ನಿಗದಿಪಡಿಸಿದ ಕನಿಷ್ಠ ಉತ್ತೀರ್ಣ ಅಂಕಗಳನ್ನು ಪಡೆಯಬೇಕು.
Published On - 9:10 am, Thu, 23 April 26