AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC 10th Result 2026: ಇಂದು ಮಧ್ಯಾಹ್ನ 12ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2026​: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದ್ದು, 8.65 ಲಕ್ಷ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇದೇ ವೇಳೆ ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ಹಾಗೂ ಜಾಮರ್ ಅಳವಡಿಕೆಯೊಂದಿಗೆ ಪರೀಕ್ಷೆಗಳು ನಡೆಯುತ್ತಿವೆ.

Karnataka SSLC 10th Result 2026: ಇಂದು ಮಧ್ಯಾಹ್ನ 12ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ
ಎಸ್‌ಎಸ್‌ಎಲ್‌ಸಿ ಫಲಿತಾಂಶ 2026 (ಸಾಂದರ್ಭಿಕ ಚಿತ್ರ)Image Credit source: MediaForge AI
ವಿನಯ್​ ಕಾಶಪ್ಪನವರ್​
| Edited By: |

Updated on:Apr 23, 2026 | 6:44 AM

Share

ಬೆಂಗಳೂರು, ಏಪ್ರಿಲ್ 23: ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಇಂದು (ಏಪ್ರಿಲ್ 23, 2026) ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ.

8.65 ಲಕ್ಷ ವಿದ್ಯಾರ್ಥಿಗಳ ಭವಿಷ್ಯ

ಈ ಬಾರಿ ರಾಜ್ಯದ ಒಟ್ಟು 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರ ಶೈಕ್ಷಣಿಕ ಬದುಕಿನ ಮೊದಲ ಮಹತ್ವದ ತಿರುವು ಇಂದು ನಿರ್ಧಾರವಾಗಲಿದೆ. ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.

ತೃತೀಯ ಭಾಷೆ ಹಿಂದಿಗೆ ಅಂಕ

ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲಾಗಿ ಗ್ರೇಡ್ ನೀಡಲು ಸರ್ಕಾರ ಈ ಹಿಂದೆ ಚಿಂತಿಸಿತ್ತು. ಆದರೆ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅಂಕಗಳನ್ನೇ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತು ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಇಂದಿನಿಂದ ಸಿಇಟಿ ಪರೀಕ್ಷೆ

ಎಸ್‌ಎಸ್‌ಎಲ್‌ಸಿ ಫಲಿತಾಂಶದ ಜೊತೆಜೊತೆಗೆ ಇಂದಿನಿಂದ ರಾಜ್ಯಾದ್ಯಂತ ಸಿಇಟಿ (CET) ಪರೀಕ್ಷೆಗಳೂ ಆರಂಭವಾಗುತ್ತಿವೆ. ಈ ಬಾರಿ ದಾಖಲೆ ಮಟ್ಟದ ಅಂದರೆ 3,30,000 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ 163 ಕೇಂದ್ರಗಳಲ್ಲಿ ಅತಿ ಹೆಚ್ಚು ಅಂದರೆ 77,604 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಇದನ್ನೂ ಓದಿ: ಇಂದು SSLC ಫಲಿತಾಂಶ: ಕುಳಿತಲ್ಲೇ ರಿಸಲ್ಟ್ ಚೆಕ್​ ಮಾಡುವುದ್ಹೇಗೆ? ಇಲ್ಲಿದೆ ವಿಧಾನ

ಕಟ್ಟುನಿಟ್ಟಿನ ಭದ್ರತೆ

ಪರೀಕ್ಷಾ ಅಕ್ರಮಗಳನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್‌ಗಳನ್ನು ಅಳವಡಿಸಲಾಗಿದೆ. ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಕೆಇಎ (KEA) ಕಚೇರಿಯಲ್ಲಿ ವಿಶೇಷ ನಿಯಂತ್ರಣ ಕೇಂದ್ರವನ್ನು ಸ್ಥಾಪಿಸಿ ಪರೀಕ್ಷೆಯ ಮೇಲೆ ನಿಗಾ ಇಡಲಾಗುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ

Published On - 6:42 am, Thu, 23 April 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ