SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಕೊಂಚ ವಿಳಂಬ; ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ?

SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಕೊಂಚ ವಿಳಂಬ; ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ?
ಪರೀಕ್ಷಾ ಫಲಿತಾಂಶ (ಪ್ರಾತಿನಿಧಿಕ ಚಿತ್ರ)

KSEEB Class 10 Result 2021 Date: ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಆಗಸ್ಟ್​ 10ರ ಒಳಗೆ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸುವ ದಿನಾಂಕ ಘೋಷಿಸಲಿದೆ. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡಲಿದ್ದು, ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ಪ್ರಕಟಿಸಲಿದೆ.

TV9kannada Web Team

| Edited By: guruganesh bhat

Aug 09, 2021 | 3:55 PM

ಬೆಂಗಳೂರು: Karnataka SSLC Result 2021 | ಆಗಸ್ಟ್ 9, ಇಂದು ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಿದ್ದಾರೆ. (BC Nagesh) ಸೋಮವಾರ ಸಂಜೆ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿತ್ತು. ಅಲ್ಲಿ ಫಲಿತಾಂಶ (SSLC Results 2021) ಪ್ರಕಟಣೆಯಾಗಿದೆ. ಈಬಾರಿಯ ಎಸ್ಎಸ್ಎಲ್​ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಈಬಾರಿ ಕೊರೊನಾ ಹಿನ್ನೆಲೆಯಲ್ಲಿ ಜೂನ್ 19, ಜೂನ್ 22ರಂದು 2 ದಿನ ಮಾತ್ರ ಎಸ್ಎಸ್ಎಲ್​ಸಿ ಪರೀಕ್ಷೆ ನಡೆದಿತ್ತು. ಈಬಾರಿಯ ಎಸ್ಎಸ್ಎಲ್​ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು.

ಜುಲೈ 19 ಹಾಗು 22 ರಂದು ಎರಡು ದಿನಗಳ ಕಾಲ ಎಸ್ಎಸ್ಎಲ್​ಸಿ ಪರೀಕ್ಷೆ ನಡೆದಿದ್ದು, 99.65% ವಿದ್ಯಾರ್ಥಿಗಳ ಹಾಜರಾತಿಯಾಗಿತ್ತು. ಕೊರೊನಾ ಆತಂಕದ ನಡುವೆಯೂ ರಾಜ್ಯದಲ್ಲಿ ಈ ವರ್ಷ 8,19,694 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಈ ಬಾರಿ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳನ್ನು ಒಂದು ಪ್ರಶ್ನೆ ಪತ್ರಿಕೆಯಲ್ಲಿ ಹಾಗೂ ಭಾಷಾ ವಿಷಯಗಳನ್ನು ಒಂದು ಪ್ರಶ್ನೆ ಪತ್ರಿಕೆಯಲ್ಲಿ ನೀಡಲಾಗಿದ್ದು, ಕನ್ನಡದಲ್ಲಿ ಒಂದು ಕೃಪಾಂಕ ವಿದ್ಯಾರ್ಥಿಗಳಿಗೆ ದೊರೆಯಲಿದೆ.

ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್​ಎಸ್​ಎಲ್​ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ 1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ 2. ಸ್ಕ್ರೀನ್​ನಲ್ಲಿ ರಿಸಲ್ಟ್​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ 3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ 4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ 5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ 6. ತಾತ್ಕಾಲಿಕ ಅಂಕಪಟ್ಟಿ ಆನ್​ಲೈನ್​ನಲ್ಲೇ ಲಭ್ಯವಾಗಲಿದ್ದು, ಅಲ್ಲಿಂದಲೇ ಡೌನ್​ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.

ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ? ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.

ಈ ವೆಬ್​ಸೈಟ್​ಗಳಲ್ಲಿ ಫಲಿತಾಂಶ ವೀಕ್ಷಿಸಿ sslc.karnataka.gov.in kseeb.kar.nic.in karresults.nic.in

(KSEEB Class 10 Result 2021 Date likely to be declared before August 10 How to know SSLC Result 2021)

ಇದನ್ನೂ ಓದಿ: Karnataka SSLC Result 2021: ಶೀಘ್ರದಲ್ಲೇ ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ 

JEE Main April Session Results: ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ, 17 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ

Follow us on

Most Read Stories

Click on your DTH Provider to Add TV9 Kannada