AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSET-2023: ನ. 26ರಂದು ಕೆಸೆಟ್ ಪರೀಕ್ಷೆ ನಿಗದಿ: ಕೆಇಎಯಿಂದ ಅಧಿಸೂಚನೆ

ನವೆಂಬರ್ 26ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (KSET-2023) ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಪ್ರಕಟನೆ ಮಾಡಲಾಗಿದೆ. ಆ ಮೂಲಕ ಕೆಸೆಟ್ ಪರೀಕ್ಷೆ ಕಾದು ಕುಳಿತಿದ್ದ ಅಭ್ಯರ್ಥಿಗಳಿಗೆ ಗುಡ್​ ನ್ಯೂಸ್​ ನೀಡಲಾಗಿದೆ.

KSET-2023: ನ. 26ರಂದು ಕೆಸೆಟ್ ಪರೀಕ್ಷೆ ನಿಗದಿ: ಕೆಇಎಯಿಂದ ಅಧಿಸೂಚನೆ
ಪ್ರಾತಿನಿಧಿಕ ಚಿತ್ರ
Vinayak Hanamant Gurav
| Edited By: |

Updated on:Sep 11, 2023 | 6:49 PM

Share

ಬೆಂಗಳೂರು, ಸೆಪ್ಟೆಂಬರ್​ 11: ನವೆಂಬರ್ 26ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (KSET-2023) ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಪ್ರಕಟನೆ ಮಾಡಲಾಗಿದೆ. ಆ ಮೂಲಕ ಕೆಸೆಟ್ ಪರೀಕ್ಷೆ ಕಾದು ಕುಳಿತಿದ್ದ ಅಭ್ಯರ್ಥಿಗಳಿಗೆ ಗುಡ್​ ನ್ಯೂಸ್​ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗೆ ಆಹ್ವಾನಿಸಲಾಗಿದೆ.

ಪರೀಕ್ಷೆಯ ವಿವರ ಹೀಗಿದೆ

ಮೊದಲ ಪತ್ರಿಕೆ-I: ಸಾಮಾನ್ಯ ಪತ್ರಿಕೆಯು ಬೋಧನೆ ಮತ್ತು ಬುದ್ಧಿ ಸಾಮರ್ಥ್ಯ

ಈ ಪತ್ರಿಕೆಯು ಅಭ್ಯರ್ಥಿಗಳ ಸಾಮಾನ್ಯ ಪತ್ರಿಕೆಯಾಗಿದ್ದು, ಸಾಮಾನ್ಯ ಜ್ಞಾನ ಬೋಧನೆ ಹಾಗೂ ಸಂಶೋಧನೆಯ ಅಭಿರುಚಿಗೆ ಸಂಬಂಧಿಸಿರುತ್ತದೆ. ಅಭ್ಯರ್ಥಿಗಳ ಸಾಮಾನ್ಯ ತಿಳಿವಳಿಕೆಗಳನ್ನು ಗ್ರಹಿಸುವ ಹಾಗೂ ಯೋಚನಾ ಸಾಮರ್ಥ್ಯವನ್ನು ಆಳೆಯುವಂತಹದ್ದಾಗಿರುತ್ತದೆ.

ಇದನ್ನೂ ಓದಿ: KCET 2023ರ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಇಂದು ಬಿಡುಗಡೆ; ಸಮಯ, ಪರಿಶೀಲಿಸುವ ಹಂತಗಳನ್ನು ತಿಳಿಯಿರಿ

ಈ ಪತ್ರಿಕೆಯು 50 ಬಹುಸಂಖ್ಯಾ ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪ್ರಶ್ನೆಗೆ ಎರಡು ಅಂಕಗಳಿರುತ್ತದೆ. ಹಾಗೂ ಎಲ್ಲಾ ಪ್ರಶ್ನೆಗಳಿಗೂ ಕಡ್ಡಾಯವಾಗಿ ಉತ್ತರಿಸಬೇಕು.

ಎರಡನೇ ಪತ್ರಿಕೆ-II: ವಿಷಯ ಪತ್ರಿಕೆ

ಅಭ್ಯರ್ಥಿಯು ಆಯ್ಕೆ ಮಾಡಿದ ವಿಷಯದ ಸಾಮಾನ್ಯ ಜ್ಞಾನದಲ್ಲಿ ಈ ಪತ್ರಿಕೆ ಇರುತ್ತದೆ. ಈ ಪತ್ರಿಕೆಯು 100 ಕಡ್ಡಾಯ ಬಹುಸಂಖ್ಯಾ ಆಯ್ಕೆ ಪಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪಶ್ನೆಗೂ 2 ಅಂಕಗಳಿರುತ್ತವೆ, ಗರಿಷ್ಠ 200 .ಅಂಕಗಳಿರುತ್ತವೆ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಹ ಅಭ್ಯರ್ಥಿಗಳು https://kea.kar.nic.in ಜಾಲತಾಣಕ್ಕೆ ಭೇಟಿ ನೀಡಿ.
  • ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಅಲ್ಲದೇ ಕೇವಲ ಗಣಕೀಕೃತ ಅಂಚೆ ಕಚೇರಿಯ ಶಾಖೆಗಳಲ್ಲಿ ಮಾತ್ರ ಅರ್ಜಿ ಶುಲ್ಕ ಪಾವತಿಸುವಂತೆ ತಿಳಿಸಿದೆ.

ಪ್ರಮುಖ ದಿನಾಂಕಗಳು

  • ಕೆಸೆಟ್-2023ರ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 11-09-2023ರ ಇಂದಿನಿಂದ ಆರಂಭಗೊಳ್ಳಲಿದೆ.
  • ಅರ್ಜಿ ಸಲ್ಲಿಸಲು ಸೆಪ್ಟೆಂಬರ್​​ 30 ಕೊನೆಯ ದಿನವಾಗಿದೆ.
  • ಇ-ಪೋಸ್ಟ್ ಆಫೀಸ್​ನಲ್ಲಿ ಶುಲ್ಕ ಪಾವತಿಸಲು 03- 10-2023 ಕೊನೆಯ ದಿನವಾಗಿದೆ.

ಪರೀಕ್ಷಾ ಶುಲ್ಕ

  • ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ ಅವರಿಗೆ 1000 ಸಾವಿರ ರೂ.
  • ಪ್ರವರ್ಗ-1, ಎಸ್ಸಿ, ಎಸ್ಟಿ, ಪಿಡಬ್ಲೂಡಿ, ಲಿಂಗ ಅಲ್ಪಸಂಖ್ಯಾತರಿಗೆ 700 ರೂ. ಶುಲ್ಕ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಬ್ ಸೈಟ್​ಗೆ ಭೇಟಿ ನೀಡಲು ಸೂಚನೆ ನೀಡಲಾಗಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:48 pm, Mon, 11 September 23

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ