KSRTC Students Bus Pass: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್​ಆರ್​​ಟಿಸಿ

ವಿವಿಧ ವೃತ್ತಿಪರ ಕೋರ್ಸ್ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಕೆಎಸ್​ಆರ್​ಟಿಸಿ ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ.

KSRTC Students Bus Pass: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್​ಆರ್​​ಟಿಸಿ
ಕೆಎಸ್​ಆರ್​ಟಿಸಿ ಬಸ್​
Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:May 04, 2023 | 12:12 PM

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation) ವಿದ್ಯಾರ್ಥಿಗಳ ಬಸ್ ಪಾಸ್ (Students Bus Pass) ಅವಧಿಯನ್ನು ವಿಸ್ತರಿಸಿದೆ. ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಬಿ. ಫಾರ್ಮ್ ಮತ್ತು ವಿವಿಧ ಕೋರ್ಸ್​ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್​ ಪಾಸ್​ ಅವಧಿಯನ್ನು ಕೆಎಸ್​ಆರ್​ಟಿಸಿ ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳ ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಮಡು ಹೆಚ್ಚುವರಿ ಹಣ ಪಾವತಿಸಿಕೊಂಡು ಒಂದು ಅಥವಾ ಎರಡ ತಿಂಗಳ ಅವಧಿಗೆ ಬಸ್​ ಪಾಸ್ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಎಲ್ಲಾ ಚಾಲಕ-ನಿರ್ವಾಹಕರಿಗೆ ಅಗತ್ಯ ಮಾಹಿತಿ ನೀಡುವಂತೆ ಕೆಎಸ್​ಆರ್​ಟಿಸಿ ಮುಖ್ಯ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ.

ಏಪ್ರಿಲ್‌ನಲ್ಲಿ ಬಸ್ ಪಾಸ್ ಅವಧಿ ಮುಗಿಯಲಿದೆ. ಆದ್ರೆ, ಕೆಲ ಕೋರ್ಸ್​ಗಳ ಪರೀಕ್ಷೆಗಳು ಇರುವುದರಿಂದ ಪಾಸ್ ಅವಧಿ ವಿಸ್ತರಣೆಗೆ ವಿದ್ಯಾರ್ಥಿಗಳು ಮನವಿ ಮಾಡಿವೆ. ಅದಂತೆ ವಿವಿಧ ಕೋರ್ಸ್‌ಗಳ ಪರೀಕ್ಷಾ ವೇಳಾಪಟ್ಟಿಯನ್ನು ಪರಿಶೀಲಿಸಿ ಬಸ್ ಪಾಸ್ ಒಂದು ಅಥವಾ ಎರಡು ತಿಂಗಳು ವಿಸ್ತರಿಸುವುದಾಗಿ ಕೆಎಸ್ಆರ್​​ಟಿಸಿ ತಿಳಿಸಿದೆ. ಇನ್ನು ವಿದ್ಯಾರ್ಥಿಗಳು ನಿಯಮಾನುಸಾರವಾಗಿ ಹಣ ಪಾವತಿಸಿ ರಶೀದಿ ಪಡೆದುಕೊಂಡು ಪ್ರಯಾಣ ಮಾಡಬಹುದಾಗಿದೆ.

ವಿದ್ಯಾರ್ಥಿ ಬಸ್ ಪಾಸ್ ಅವಧಿಯು ಮುಕ್ತಾಯಗೊಳ್ಳುವ ಹಂತದಲ್ಲಿದೆ. ಆದರೆ ವಿದ್ಯಾರ್ಥಿಗಳಿಗೆ ತರಗತಿಗಳು ಇನ್ನೂ ನಡೆಯುತ್ತಿದ್ದು, ಪರೀಕ್ಷೆಗಳೂ ಹತ್ತಿರದಲ್ಲೇ ಇದೆ. ಈ ನಡುವೆ ನಿಗಮವು ಬಸ್ ಪಾಸ್ ಅವಧಿಯನ್ನು ವಿಸ್ತರಿಸಿರುವುದು ವಿದ್ಯಾರ್ಥಿಗಳಿಗೆ ಅನಕೂಲವಾದಂತಾಗಿದೆ.

Published On - 11:10 am, Thu, 4 May 23

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ