ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಕಲಿಕೆ ಕುಸಿತ: ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗ

ಶಾಲಾ ಶಿಕ್ಷಣ ಇಲಾಖೆಯಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ 2022-23ನೇ ಸಾಲಿನ ರಾಜ್ಯ ಕಲಿಕಾ ಸಧಾನಾ ಸಮೀಕ್ಷೆ ವರದಿ ಬಹಿರಂಗವಾಗಿದ್ದು, ಪ್ರಾಥಮಿಕ ಶಾಲೆಗಳಿಂಗತ ಪ್ರೌಢಶಾಲಾ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂದು ತಿಳಿಸಿದೆ.

ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಕಲಿಕೆ ಕುಸಿತ: ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Jul 31, 2023 | 9:19 AM

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಡಿ (Education Department) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ 2022-23ನೇ ಸಾಲಿನ ರಾಜ್ಯ ಕಲಿಕಾ ಸಾಧನಾ ಸಮೀಕ್ಷೆ ವರದಿ ಬಹಿರಂಗವಾಗಿದ್ದು, ಪ್ರಾಥಮಿಕ ಶಾಲೆಗಳಿಗಿಂತ (Primary School) ಪ್ರೌಢಶಾಲಾ ವಿದ್ಯಾರ್ಥಿಗಳು (Students) ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂದು ತಿಳಿಸಿದೆ. ಕೊರೊನಾ ನಂತರವೂ ಸರ್ಕಾರಿ ಶಾಲೆ ಮಕ್ಕಳ ಕಲಿಕಾ ಮಟ್ಟ ಸುಧಾರಣೆಯಾಗಿಲ್ಲ ಎಂಬುವುದು ಕಳವಳಕಾರಿ ಅಂಶವಾಗಿದೆ.

ರಾಜ್ಯದ 2,618 ಸರ್ಕಾರಿ ಪ್ರಾಥಮಿಕ ಮತ್ತು 694 ಪ್ರೌಢಶಾಲೆಗಳ 3,5,8,9 ಮತ್ತು 10ನೇ ತರಗತಿಯ ಒಟ್ಟು 2,11,843 ವಿದ್ಯಾರ್ಥಿಗಳು ಈ ಸಮೀಕ್ಷೆಯಲ್ಲಿ ಒಳಪಟ್ಟಿದ್ದಾರೆ. ಕಳೆದ ಜನವರಿಯಲ್ಲಿ ಸಮೀಕ್ಷೆ ನಡೆಸಿ ಕಲಿಕೆಯ ತುಲನಾತ್ಮಕ ವಿಶ್ಲೇಷಣೆ ನಡೆಸಲಾಗಿದೆ. 018-19ರಲ್ಲಿ ಕೊನೆಯದಾಗಿ ಕಲಿಕಾ ಸಾಧನೆಯ ಸಮೀಕ್ಷೆಯನ್ನು ನಡೆಸಲಾಗಿದ್ದು, 6ನೇ ತರಗತಿಯಲ್ಲಿದ್ದ ವಿದ್ಯಾರ್ಥಿ ಈಗ 10ನೇ ತರಗತಿಯಲ್ಲಿ ಓದುತ್ತಿದ್ದಾನೆ. 2018-19ನೇ ಸಾಲಿನ ರಾಜ್ಯ ಕಲಿಕಾ ಸಾಧನೆಯ ಸಮೀಕ್ಷೆಗೆ ಹೋಲಿಸಿದರೆ, 2022-23ರಲ್ಲಿ ಈ ವಿದ್ಯಾರ್ಥಿಗಳ ಸಾಧನೆಯಿಂದ ಕಲಿಕೆಯಲ್ಲಿ ಗಣನೀಯ ಕುಸಿತ ಕಂಡುಬಂದಿದೆ.

ಇದನ್ನೂ ಓದಿ: ಶಿಕ್ಷಣ ಇಲಾಖೆ ಎರಡನೇ ಬಾರಿಗೆ ನಡೆಸುತ್ತಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ

8 ನೇ ತರಗತಿಯ ವಿದ್ಯಾರ್ಥಿಗಳು ಕೇವಲ ಶೇ 51 ರಷ್ಟು, 9 ನೇ ತರಗತಿ ವಿದ್ಯಾರ್ಥಿ ಶೇ 50 ರಷ್ಟು ಮತ್ತು 10 ನೇ ತರಗತಿ ವಿದ್ಯಾರ್ಥಿ ಕಲಿಕಾ ಸಾಧನೆ ಶೇ 55 ರಷ್ಟು ಆಗಿದೆ. ಇನ್ನು ಪ್ರಾಥಮಿಕ ಹಂತದಲ್ಲಿ ‘ನಲಿ-ಕಲಿ’ ನಂತಹ ಚಟುವಟಿಕೆ ಆಧಾರಿತ ಪಾಠಗಳಿಂದ 3 ನೇ ತರಗತಿಯ ವಿದ್ಯಾರ್ಥಿಗಳು ಶೇ 83 ರಷ್ಟು ಕಲಿಕಾ ಸಾಧನೆ, 5 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಧನೆ ಶೇ 71 ರಷ್ಟು ಆಗಿದೆ.

ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಪ್ರಮುಖ ಕುಸಿತ ದಾಖಲಾಗಿದ್ದು, 2018-19ರಲ್ಲಿ 5 ನೇ ತರಗತಿಯ ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಶೇ 79 ರಷ್ಟು ಸಾಧನೆಯಾಗಿದೆ. ಇದು 9 ನೇ ತರಗತಿಯನ್ನು ತಲುಪಿದಾಗ ಶೇ 37 ಕ್ಕೆ ಇಳಿದಿದೆ. ಗಣಿತಶಾಸ್ತ್ರದಲ್ಲಿ ಅದೇ ಗುಂಪಿನ ವಿದ್ಯಾರ್ಥಿಗಳು 73 ಅಂಕಗಳನ್ನು ಗಳಿಸಿದ್ದಾರೆ. 2018 ರಲ್ಲಿ ಶೇ 70 ರಷ್ಟು ಕಲಿಕೆಯ ಸಾಧನೆಯನ್ನು ದಾಖಲಿಸಿದ 6 ನೇ ತರಗತಿ ವಿದ್ಯಾರ್ಥಿಗಳು 2022 ರಲ್ಲಿ ಶೇ 57 ಕ್ಕೆ ಇಳಿದಿದ್ದಾರೆ.

ಸಮೀಕ್ಷೆಯ ಉದ್ದೇಶವು ವಿವಿಧ ವಿಷಯಗಳಲ್ಲಿ ಎಲ್ಲಾ ವಿದ್ಯಾರ್ಥಿಗಳ ಕಲಿಕೆಯ ಸ್ಥಿತಿಯನ್ನು ಅಧ್ಯಯನ ಮಾಡುವುದು ಮತ್ತು ಶಾಲೆಯ ಮೂಲ ಸೌಕರ್ಯಗಳು, ಶಿಕ್ಷಕರ ಅರ್ಹತೆ, ಮಧ್ಯಾಹ್ನದ ಊಟದ ಯೋಜನೆ, ಬೋಧನಾ-ಕಲಿಕಾ ವಾತಾವರಣ, ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳ ಪರಿಣಾಮ ಮತ್ತು ಅವರ ಕಲಿಕೆಯ ಸಾಮರ್ಥ್ಯಗಳ ಮೇಲೆ ಕೊರೊನಾ ಪ್ರಭಾವ ಬೀರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 am, Mon, 31 July 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ