ಅಂಗನವಾಡಿ ಕೇಂದ್ರಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭ, ಇಲ್ಲಿದೆ ವಿಶೇಷತೆ

ಚಿಣ್ಣರಿಗೆ ಉತ್ತಮ ಶಿಕ್ಷಣ ನೀಡಬೇಕು, ಮಕ್ಕಳನ್ನು ಕಲಿಕೆಯ ಟ್ರ್ಯಾಕ್​ಗೆ ತರಬೇಕು ಅಂತ ಕನಸ್ಸು ಕಂಡಿರುತ್ತಾರೆ. ಆದರೆ ಖಾಸಗಿ ಶಾಲೆಗಳಲ್ಲಿ ಲಕ್ಷ ಲಕ್ಷ ಶುಲ್ಕ ಕಟ್ಟಿ ನರ್ಸರಿ ಶಾಲೆಗೆ ಕಳಸಲಾಗದೆ ಅಂಗನವಾಡಿಗೆ ಸೇರಿಸುತ್ತಾರೆ. ಆದರೆ ಇತಂಹ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಅಂಗನವಾಡಿ ಕೇಂದ್ರಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭ, ಇಲ್ಲಿದೆ ವಿಶೇಷತೆ
ಅಂಗನವಾಡಿ ಕೇಂದ್ರ
Follow us
| Updated By: ವಿವೇಕ ಬಿರಾದಾರ

Updated on:Jul 23, 2024 | 2:51 PM

ಬೆಂಗಳೂರು, ಜುಲೈ 23: ದೇಶದಲ್ಲಿ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ (Anganwadi Centers)  ಎಲ್​ಕೆಜಿ ಹಾಗೂ ಯುಕೆಜಿ ಕರ್ನಾಟಕ ಸರ್ಕಾರ (Karnataka Government) ಆರಂಭಿಸಿದೆ. ದೇಶದಲ್ಲಿಯೇ ಮೊದಲ ಬಾರಿಗೆ 1975 ರಲ್ಲಿ ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿ ಮೊದಲ ಬಾರಿಗೆ ಅಗಂನವಾಡಿಗಳು ಆರಂಭವಾಗಿದ್ದವು. ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಸೋಮವಾರ ಬೆಂಗಳೂರಿನಲ್ಲಿನ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಎಲ್​ಕೆಜಿ, ಯುಕೆಜಿ ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಯಿತು.

ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ ಮತ್ತು ಯುಕೆಜಿ ತರಗತಿಗಳ ಆರಂಭಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಚಾಲನೆ ನೀಡಿದರು.

ಸರ್ಕಾರಿ LKG ಹಾಗೂ UKG ಶಾಲೆಗಳ ವಿಶೇಷತೆ ಏನು?

ಹೈಟೇಕ್ ತರಗತಿಗಳು ಕೊಠಡಿಗಳು, ಮಕ್ಕಳಿಗೆ ಉಚಿತ ಸಮವಸ್ತ್ರ, ಕಲಿಕೆಗೆ ಬೇಕಾದ ಸಮಾಗ್ರಿಗಳು, ಬ್ಯಾಗ್, ಪುಸ್ತಕ ವಿತರಣೆ, ಮಕ್ಕಳಿಗೆ ಗುಣಮಟ್ಟದ ಆಹಾರ, ಉತ್ತಮ ಶೌಚಾಲಯ ವ್ಯವಸ್ಥೆ, ಮಕ್ಕಳನ್ನ ನೋಡಿಕೊಳ್ಳಲು ವಿಶೇಷ ಸಹಾಯಕರು, ಶಾಲೆಯಲ್ಲಿ ಪಠ್ಯೇತರ ಚಟುವಟಿಗೆ ಬೇಕಾದ ಸಮಾಗ್ರಿಗಳ ವ್ಯವಸ್ಥೆ, ಕಲಿಕಾ ಪೂರಕ ಆಟದ ವಸ್ತುಗಳು ಇರಲಿವೆ.

ರಾಜ್ಯದಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ಕೂಡ ಮಾಡಿದ್ದರು. ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಮನವಿಗೆ ಮಣಿದ ಸರ್ಕಾರ, ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ.

ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಆರಂಭಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಬಳಿಕ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ ಮತ್ತು ಯುಕೆಜಿ ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ ಎಂದರು.

ಇದನ್ನೂ ಓದಿ: ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಮುಂದಾದ ಸರ್ಕಾರ: ಮಾಹಿತಿ ನೀಡಲು ಜು 31 ಕೊನೆ ದಿನ

ಈಗ ದೇಶದಲ್ಲಿಯೇ ಮೊದಲ ಬಾರಿಗೆ ಅಂಗನವಾಡಿಯಲ್ಲಿ LKG ಮತ್ತು UKG ತರಗತಿಗೆ ಚಾಲನೆ ನೀಡಿದ್ದು ನನ್ನ ಭಾಗ್ಯವಾಗಿದೆ. ಸಾಂಕೇತಿಗವಾಗಿ 250 ಅಂಗನವಾಡಿಯಲ್ಲಿ LKG ಮತ್ತು UKG ತರಗತಿಗೆ ಚಾಲನೆ ನೀಡಲಾಗಿದೆ. ಪೌಷ್ಠಿಕ ಆಹಾರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದು ಪ್ರಮುಖವಾಗಿದೆ. ಆಧುನಿಕ ಯುಗದಲ್ಲಿ ಮಾರ್ಡನ್ ಶಿಕ್ಷಣ ನೀಡುವುದು ನಮ್ಮ ಇಲಾಖೆ ಹಾಗೂ ಸರ್ಕಾರದ ಗುರಿಯಾಗಿದೆ. ಮುಂದಿನ ಹಂತದಲ್ಲಿ ರಾಜ್ಯದಲ್ಲಿ 18 ಸಾವಿರ ಅಂಗನವಾಡಿಯಲ್ಲಿ LKG ಮತ್ತು UKG ಆರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ 10 ಕೋಟಿ ಅನುದಾನದಲ್ಲಿ ಅಂಗನವಾಡಿ ಶಿಕ್ಷಕಿಯರಿಗೆ ತರಬೇತಿ ನೀಡಲಾಗುತ್ತಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ಮತ್ತು ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ನಡುವೆ ಎಲ್​ಕೆಜಿ ಹಾಗೂ ಯುಕೆಜಿ ಶಿಕ್ಷಕಿಯರಿಗೆ ಕಡ್ಡಾಯ ಪಿಯುಸಿ ಶಿಕ್ಷಣವಾಗಿರಬೇಕಾದ ಮಾನದಂಡ ಇರುವುದರಿಂದ ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ಪರ್ಯಾಯವಾಗಿ ಈ ಶಿಕ್ಷಕಿಯರಿಗೆ ತರಬೇತಿ ನೀಡಲಾಗುವುದು. ಜೊತೆಗೆ 30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:50 pm, Tue, 23 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್